ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತಕ್ಕೆ ಆಗಮಿಸುವಂತೆ ಕಮಲಾ ಹ್ಯಾರಿಸ್ ಆಹ್ವಾನಿಸಿದ ಮೋದಿ

|
Google Oneindia Kannada News

ವಾಷಿಂಗ್ಟನ್, ಸೆಪ್ಟೆಂಬರ್ 24; ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 23ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾದ ಉಪಾಧ್ಯಕ್ಷೆ, ಭಾರತ ಮೂಲದ ಕಮಲಾ ಹ್ಯಾರಿಸ್ ಭೇಟಿ ಮಾಡಿದರು. ಭಾರತಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಕಮಲಾ ಹ್ಯಾರಿಸ್‌ಗೆ ಆಹ್ವಾನ ನೀಡಿದರು.

ಕಮಲಾ ಹ್ಯಾರೀಸ್ ಅಮೆರಿಕ ಉಪಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಭಯ ನಾಯಕರು ಮುಖಾಮುಖಿ ಭೇಟಿಯಾದರು. ಈ ಭೇಟಿ ಬಗ್ಗೆ ಉಭಯ ನಾಯಕರು ಸಂತಸ ವ್ಯಕ್ತಪಡಿಸಿದರು. 2021ರ ಜೂನ್ ತಿಂಗಳಲ್ಲಿ ಕಮಲಾ ಹ್ಯಾರಿಸ್ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ್ದರು. ಈ ಮಾತುಕತೆಯನ್ನು ನಾಯಕರು ನೆನೆಪಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಯುಎಸ್ ಪ್ರವಾಸದ ಸಂಪೂರ್ಣ ಮಾಹಿತಿ ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಯುಎಸ್ ಪ್ರವಾಸದ ಸಂಪೂರ್ಣ ಮಾಹಿತಿ

ಆಫ್ಘಾನಿಸ್ತಾನ ಸೇರಿದಂತೆ ಇತ್ತೀಚಿನ ಜಾಗತಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಮುಕ್ತ, ಸಮಗ್ರ ಮತ್ತು ಎಲ್ಲವನ್ನೂ ಒಳಗೊಂಡ ಇಂಡೋ-ಫೆಸಿಫಿಕ್ ಪ್ರದೇಶ ಸ್ಥಾಪನೆಯತ್ತ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಿ ಮೋದಿ ಹಾಗೂ ಕಮಲಾ ಹ್ಯಾರಿಸ್ ಸಭೆಯಲ್ಲಿ 'ಸಹಜ ಪಾಲುದಾರರ' ಮಾತು ಪ್ರಧಾನಿ ಮೋದಿ ಹಾಗೂ ಕಮಲಾ ಹ್ಯಾರಿಸ್ ಸಭೆಯಲ್ಲಿ 'ಸಹಜ ಪಾಲುದಾರರ' ಮಾತು

ಇಬ್ಬರೂ ನಾಯಕರು ತಮ್ಮ ತಮ್ಮ ರಾಷ್ಟ್ರಗಳಲ್ಲಿನ ಕೋವಿಡ್-19 ಸ್ಥಿತಿಗತಿ, ಲಸಿಕೆ ನೀಡಿಕೆಯನ್ನು ತೀವ್ರಗೊಳಿಸುವ ಮೂಲಕ ಸಾಂಕ್ರಾಮಿಕವನ್ನು ನಿಯಂತ್ರಿಸಲು ಕೈಗೊಂಡಿರುವ ಪ್ರಯತ್ನಗಳು ಮತ್ತು ಗಂಭೀರ ವೈದ್ಯಕೀಯ ಸಾಧನಗಳು, ಚಿಕಿತ್ಸೆ ಮತ್ತು ಆರೋಗ್ಯ ರಕ್ಷಣಾ ಸಾಧನಗಳ ಪೂರೈಕೆ ಖಾತ್ರಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಯನ್ನು ಮಾಡಿದರು.

ಜೋ ಬೈಡನ್, ಕಮಲಾ ಹ್ಯಾರಿಸ್‌ಗೆ ಪ್ರಧಾನಿ ಮೋದಿ ಅಭಿನಂದನೆಜೋ ಬೈಡನ್, ಕಮಲಾ ಹ್ಯಾರಿಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

ವಿವಿಧ ವಿಚಾರಗಳ ಕುರಿತು ಚರ್ಚೆ

ವಿವಿಧ ವಿಚಾರಗಳ ಕುರಿತು ಚರ್ಚೆ

ಪ್ರಧಾನಿ ಮೋದಿ ಮತ್ತು ಕಮಲಾ ಹ್ಯಾರಿಸ್ ಭೇಟಿ ಸಂದರ್ಭದಲ್ಲಿ ಹವಾಮಾನ ವೈಪರೀತ್ಯ ತಡೆಗೆ ಸಹಭಾಗಿತ್ವದ ಕ್ರಮದ ಪ್ರಾಮುಖ್ಯವನ್ನು ಉಭಯ ದೇಶಗಳು ಒಪ್ಪಿಕೊಂಡವು. ಪ್ರಧಾನಮಂತ್ರಿಗಳು ಭಾರತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೆಚ್ಚಳಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಮತ್ತು ಇತ್ತೀಚೆಗೆ ಆರಂಭಿಸಿರುವ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಕುರಿತು ಮಾತನಾಡಿದರು. ಅಲ್ಲದೆ, ಅವರು ಪರಿಸರ ಸುಸ್ಥಿರತೆಯನ್ನು ಉತ್ತೇಜಿಸಲು ಜೀವನಶೈಲಿ ಬದಲಾವಣೆಗೆ ಒತ್ತು ನೀಡುವ ಅಗತ್ಯತೆಯನ್ನು ಪ್ರತಿಪಾದಿಸಿದರು.

ಎರಡೂ ದೇಶಗಳ ಸಹಕಾರ

ಎರಡೂ ದೇಶಗಳ ಸಹಕಾರ

ಉಭಯ ನಾಯಕರ ಭೇಟಿ ಸಂದರ್ಭದಲ್ಲಿ ಬಾಹ್ಯಾಕಾಶ ಸಹಕಾರ, ಮಾಹಿತಿ ತಂತ್ರಜ್ಞಾನ ವಿಶೇಷವಾಗಿ ಉದಯೋನ್ಮುಖ ಮತ್ತು ನಿರ್ಣಾಯಕ ತಂತ್ರಜ್ಞಾನಗಳು, ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ಸೇರಿದಂತೆ ಭವಿಷ್ಯದ ಸಹಭಾಗಿತ್ವದ ಕ್ಷೇತ್ರಗಳ ಕುರಿತು ಚರ್ಚೆ ನಡೆಯಿತು. ಉತ್ಸಾಹ ಭರಿತ ಜನರಿಂದ ಜನರು ನಡುವಿನ ಸಂಪರ್ಕ ಪರಸ್ಪರ ಶಿಕ್ಷಣ ಸಂಬಂಧಗಳಿಗೆ ಪ್ರಯೋಜನಕಾರಿ ಮತ್ತು ಎರಡೂ ದೇಶಗಳ ನಡುವೆ ಜ್ಞಾನ, ಹೊಸತನದ ಶೋಧ ಮತ್ತು ಪ್ರತಿಭೆಯ ಹರಿವಿಗೆ ಸಹಕಾರಿ ಎಂಬುದನ್ನು ಉಭಯ ನಾಯಕರು ಒಪ್ಪಿಕೊಂಡರು.

ಭಾರತಕ್ಕೆ ಆಹ್ವಾನಿಸಿದ ಮೋದಿ

ಭಾರತಕ್ಕೆ ಆಹ್ವಾನಿಸಿದ ಮೋದಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಸೆಕೆಂಡ್ ಜಂಟಲ್ಮನ್ ಡೌಗ್ಲಾಸ್ ಎಮಾಫ್‌ ಶೀಘ್ರವೇ ಭಾರತ ಭೇಟಿ ಕೈಗೊಳ್ಳಬೇಕೆಂದು ಆಹ್ವಾನ ನೀಡಿದರು.

ಪ್ರಧಾನಿ ಮೋದಿ ಮತ್ತು ಕಮಲಾ ಹ್ಯಾರಿಸ್ ಭೇಟಿ ಅಮೆರಿಕದಲ್ಲಿ ನೆಲೆಸಿರುವ 40 ಲಕ್ಷಕ್ಕೂ ಅಧಿಕ ಭಾರತೀಯರ ಪಾಲಿಗೆ ಮಹತ್ವದ ಕ್ಷಣ. ಉಭಯ ದೇಶಗಳ ನಡುವೆ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಸಂಘಟನೆ ದಕ್ಷಿಣ ಏಷ್ಯಾ ವಿಭಾಗದ ನಿರ್ದೇಶಕ ಮಿಲನ್ ವೈಷ್ಣವ್ ಹೇಳಿದ್ದಾರೆ.

ಶುಕ್ರವಾರ ಜೋ ಬೈಡನ್ ಭೇಟಿ

ಶುಕ್ರವಾರ ಜೋ ಬೈಡನ್ ಭೇಟಿ

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಿಇಒಗಳ ಜೊತೆಗಿನ ಸಭೆ ನಡೆಸಿದ್ದರು. ಭಾರತದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳು ಸೃಷ್ಟಿಯಾಗಿವೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭೇಟಿಯಾಗಲಿದ್ದಾರೆ. ಸೆಪ್ಟೆಂಬರ್ 25ರ ತನಕ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿರಲಿದ್ದಾರೆ.

English summary
Indian prime minister Narendra Modi met vice president of the United States of America, Kamala Harris and invited her to India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X