Donald Trump: ನರೇಂದ್ರ ಮೋದಿ ಸರ್, ಪ್ಲೀಸ್ ಮಾತನಾಡಬೇಕು ಅಂತಿದ್ದಾರೆ: ಡೊನಾಲ್ಡ್ ಟ್ರಂಪ್
ಅಮೆರಿಕಾ: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾದ ಹೇಳಿಕೆಗಳನ್ನು ಕೊಡುವುದನ್ನು ಮುಂದುವರಿಸಿದ್ದಾರೆ. ಭಾರತ ಹಾಗೂ ರಷ್ಯಾದ ನಡುವಿನ ತೈಲ ಒಪ್ಪಂದವು ಡೊನಾಲ್ಡ್ ಟ್ರಂಪ್ ಕೆಂಗಣ್ಣಿಗೆ ಗುರಿಯಾಗಿದೆ. ಈಚೆಗೆ ನಾನು ಭಾರತದ ವಿಚಾರದಲ್ಲಿ ಸಂತೋಷವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನನ್ನು ಸಂತೋಷಪಡಿಸಬೇಕು ಎಂದು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ಟ್ರಂಪ್ ಕೊಟ್ಟಿದ್ದಾರೆ.
ಭಾರತ ಮತ್ತು ಅಮೆರಿಕಾದ ನಡುವಿನ ಸಂಬಂಧವು ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಷ್ಟು ಉತ್ತಮವಾಗಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವನ್ನು ನಾನೇ ನಿಲ್ಲಿಸಿದ್ದೇನೆ ಎಂದು ಹಲವು ಬಾರಿ ಡೊನಾಲ್ಡ್ ಟ್ರಂಪ್ ಹೇಳಿರುವುದು, ಭಾರತದ ಮೇಲೆ ವಿಪರೀತ ಆಮದು ಸುಂಕ ವಿಧಿಸಿರುವುದು ಹಾಗೂ ರಷ್ಯಾದೊಂದಿಗೆ ಕಚ್ಚಾ ತೈಲ ಒಪ್ಪಂದವನ್ನು ಭಾರತ ಕೈಬಿಡಬೇಕು ಎಂದು ಅಮೆರಿಕಾ ನಿರಂತರವಾಗಿ ಒತ್ತಡ ಹೇರುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಭಾರತದ ಬಗ್ಗೆ ಹಗುರವಾಗಿ ಹೇಳಿಕೆಗಳನ್ನು ಕೊಡುತ್ತಿರುವುದು ಭಾರತೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿದ್ದೇನು ಎಂದು ನೋಡೋಣ.

ಸರ್ ನಿಮ್ಮ ಜೊತೆ ಮಾತನಾಡಬೇಕು ಪ್ಲೀಸ್: ಟ್ರಂಪ್
ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕರೆ ಮಾಡಿ,"ಸರ್ ನಿಮ್ಮ ಜೊತೆ ಮಾತನಾಡಬೇಕು ಪ್ಲೀಸ್" ಎಂದು ಹೇಳಿದರು ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕಾದೊಂದಿಗೆ ಬಾಕಿ ಇರುವ ಭಾರತದ ರಕ್ಷಣಾ ಖರೀದಿ ಹಾಗೂ ವ್ಯಾಪಾರ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ಕೋರಿದ್ದಾರೆ. ಪ್ಲೀಸ್ ಸರ್ ಅಂತ ಕೇಳಿದ್ದಾರೆ. ನರೇಂದ್ರ ಮೋದಿ ಚರ್ಚೆ ಮಾಡಬೇಕು ಎಂದುಕೊಂಡಿರುವ ವಿಷಯಗಳಲ್ಲಿ ಅಪಾಚೆ ಹೆಲಿಕಾಪ್ಟರ್‌ಗಳ ವಿತರಣೆ ವಿಳಂಬವೂ ಸೇರಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಈ ವಿಷಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ.
ಭಾರತವು ಅಮೆರಿಕಾದಿಂದ ಅಪಾಚೆ ಹೆಲಿಕಾಪ್ಟರ್‌ಗಳನ್ನು ಆರ್ಡರ್ ಮಾಡಿತ್ತು. ಅಲ್ಲದೇ 5 ವರ್ಷಗಳಿಂದ ಅವುಗಳನ್ನು ಪಡೆಯಲಿಲ್ಲ. ಪ್ರಧಾನಿ ಮೋದಿ ನನ್ನನ್ನು ನೋಡಲು ಬಂದರು. ಸರ್, ದಯವಿಟ್ಟು ನಾನು ನಿಮ್ಮನ್ನು ಭೇಟಿ ಮಾಡಬಹುದೇ ಎಂದು ಕೇಳಿದರು. ಹೌದು ನನಗೆ ಅವರೊಂದಿಗೆ ಉತ್ತಮ ಸಂಬಂಧವಿದೆ ಎಂದೂ ಟ್ರಂಪ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಆದಾಗ್ಯೂ, ಆಮದು ಸುಂಕಗಳ ಕುರಿತು ಪ್ರಧಾನಿ ಮೋದಿ ತಮ್ಮ ಬಗ್ಗೆ ಅತೃಪ್ತರಾಗಿದ್ದಾರೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಅವರು ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ ಯಾಕೆ ಎನ್ನುವ ವಿಷಯವು ನಿಮಗೆ ತಿಳಿದಿದೆ. ಭಾರತ ಈಗ ದುಬಾರಿ ಸುಂಕವನ್ನು ಅಮೆರಿಕಾಗೆ ಪಾವತಿ ಮಾಡುತ್ತಿದೆ. ಭಾರತವು ಅಮೆರಿಕಾದಿಂದ ತೈಲವನ್ನು ಖರೀದಿ ಮಾಡುತ್ತಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತೈಲ ಖರೀದಿ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಮಾಡಿದೆ ಎಂದಿದ್ದಾರೆ.
ಸುಂಕಗಳಿಂದ ನಾವು ಶ್ರೀಮಂತರಾಗಿದ್ದೇವೆ: ಟ್ರಂಪ್
ಇನ್ನು ಭಾರತವು ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳ ಮೇಲೆ ಅಮೆರಿಕಾ ಭಾರೀ ಆಮದು ಸುಂಕವನ್ನು ವಿಧಿಸುತ್ತಿದೆ. ಇದರಿಂದ ಭಾರತವೂ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಿವೆ. ಆದರೆ ಈ ರೀತಿ ಬೇರೆ ದೇಶಗಳ ಮೇಲೆ ಸುಂಕ ವಿಧಿಸಿ ಆ ದೇಶಗಳಿಗೆ ಸಂಕಷ್ಟವನ್ನು ತಂದೊಡ್ಡಿರುವ ಡೊನಾಲ್ಡ್‌ಟ್ರಂಪ್ ಸುಂಕದಿಂದ ನಾವು ಶ್ರೀಮಂತರಾಗುತ್ತಿದ್ದೇವೆ. ಎಲ್ಲರಿಗೂ ಇದು ಅರ್ಥವಾಗುತ್ತದೆ ಎಂದು ಭಾವಿಸಿದ್ದೇನೆ. ಸುಂಕಗಳ ಕಾರಣದಿಂದಾಗಿ ಅಮೆರಿಕಾಗೆ ಬರೋಬ್ಬರಿ 650 ಶತಕೋಟಿ ಡಾಲರ್‌ಗಳಿಗೂ ಹೆಚ್ಚು ಆದಾಯ ಬರಲಿದೆ ಎಂದಿದ್ದಾರೆ.
ಮೋದಿ ನನ್ನನ್ನು ಸಂತೋಷಪಡಿಸಲಿ: ಟ್ರಂಪ್
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನನ್ನನ್ನು ಸಂತೋಷಪಡಿಸಬೇಕು ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಚೆಗೆ ಹೇಳಿದ್ದರು. ರಷ್ಯಾದ ತೈಲ ವಿಷಯದಲ್ಲಿ ಅವರು ಉತ್ತಮ ನಿರ್ಧಾರ ತೆಗೆದುಕೊಳ್ಳದೆ ಇದ್ದರೆ, ನಾವು ಭಾರತದ ಮೇಲೆ ಸುಂಕಗಳನ್ನು ಹೆಚ್ಚಿಸಬಹುದು. ಪ್ರಧಾನಿ ಮೋದಿ ತುಂಬಾ ಒಳ್ಳೆಯ ವ್ಯಕ್ತಿ ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿದೆ. ನನ್ನನ್ನು ಸಂತೋಷಪಡಿಸುವುದು ಮುಖ್ಯ ಎಂದೂ ಟ್ರಂಪ್ ಹೇಳಿದ್ದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications