ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಟಿನ್ ಶತ್ರು ನವಲ್ನಿ ಕೊಲೆಗೆ ರಷ್ಯಾ ಗುಪ್ತಚರ ಸಂಸ್ಥೆ ಸ್ಕೆಚ್..?

|
Google Oneindia Kannada News

ನನ್ನ ಹತ್ಯೆಗೆ ಸಂಚು ರೂಪಿಸಿದ್ದ ರಷ್ಯಾ ಗುಪ್ತಚರ ಇಲಾಖೆ, ವಿಷಪ್ರಾಶನ ಮಾಡಿ ಕೊಲೆಗೆ ಯತ್ನಿಸಿತ್ತು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಾಗೂ ಪುಟಿನ್ ಪಾಲಿನ ಪರಮ ಶತ್ರು ನವಲ್ನಿ ಆರೋಪಿಸಿದ್ದಾರೆ. ಆಗಸ್ಟ್ 20ರಂದು ಸೈಬೀರಿಯಾದಿಂದ ಮಾಸ್ಕೋಗೆ ಮರಳುವಾಗ ಅಲೆಕ್ಸಿ ನವಲ್ನಿ ಆರೋಗ್ಯ ಹದಗೆಟ್ಟು ಒಮಾಸ್ಕ್‌ ಎಂಬಲ್ಲಿ ತುರ್ತಾಗಿ ವಿಮಾನ ಇಳಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ನವಲ್ನಿ ವಿಮಾನ ಹತ್ತುವ ಮೊದಲು ರೆಸ್ಟೋರೆಂಟ್‌ನಲ್ಲಿ ಟೀ ಸೇವಿಸಿದ್ದರು. ಅದರಲ್ಲಿ ಕಾರ್ಕೋಟಕ ವಿಷ ಬೆರೆಸಲಾಗಿತ್ತು ಎಂಬ ಆರೋಪವಿತ್ತು. ಜರ್ಮನಿಯ ಮಿಲಿಟರಿ ಲ್ಯಾಬ್‌ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ನವಲ್ನಿಗೆ ವಿಷಪ್ರಾಶನ ಆಗಿರುವುದು ಕನ್ಫರ್ಮ್ ಆಗಿತ್ತು. 'ನೋವಿಚೋಕ್' ಎಂಬ ರಷ್ಯಾ ಸಂಶೋಧಿತ ವಿಷವನ್ನೇ ನವಲ್ನಿಗೆ ಕುಡಿಸಲಾಗಿದೆ ಎಂಬುದು ಪಕ್ಕಾ ಆಗಿತ್ತು.

ಬೀದಿ ಪಾಲಾದ ಅಲೆಕ್ಸಿ ನವಲ್ನಿ, ರಷ್ಯಾದಲ್ಲಿನ ಮನೆ ಸೀಜ್ಬೀದಿ ಪಾಲಾದ ಅಲೆಕ್ಸಿ ನವಲ್ನಿ, ರಷ್ಯಾದಲ್ಲಿನ ಮನೆ ಸೀಜ್

ಆದರೆ ನವಲ್ನಿ ಕುಡಿದಿದ್ದ ನೀರಿನ ಬಾಟಲ್‌ನಲ್ಲಿ ವಿಷ ಕಂಡುಬಂದಿತ್ತು. ಇಷ್ಟೆಲ್ಲಾ ಹೈಡ್ರಾಮಗಳ ಬಳಿಕ, ಬರೋಬ್ಬರಿ 30ಕ್ಕೂ ಹೆಚ್ಚು ದಿನ ಆಸ್ಪತ್ರೆಯಲ್ಲಿ ನರಕ ಕಂಡು ನವಲ್ನಿ ಈಗ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೂ ನವಲ್ನಿ ಜರ್ಮನಿಯಲ್ಲೇ ಉಳಿದುಕೊಂಡಿದ್ದಾರೆ. ಹೀಗೆ ಜರ್ಮನಿ ರಾಜಧಾನಿ ಬರ್ಲಿನ್‌ನಿಂದ ಪುಟಿನ್ ಹಾಗೂ ರಷ್ಯಾ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳೀಯ ಚುನಾವಣೆಯಲ್ಲಿ ಭಾರಿ ಸೋಲು..!

ಸ್ಥಳೀಯ ಚುನಾವಣೆಯಲ್ಲಿ ಭಾರಿ ಸೋಲು..!

ರಷ್ಯಾದಲ್ಲಿ ಸದ್ಯ ನವಲ್ನಿ ಹವಾ ಹೇಗಿದೆ ಎಂದರೆ, ಪುಟಿನ್ ಪಡೆ ಇತ್ತೀಚೆಗೆ ನಡೆದ ಸ್ಥಳೀಯ ಚುನಾವಣೆ ವೇಳೆ ಭಾರಿ ಮುಖಭಂಗ ಅನುಭವಿಸಿದೆ. ನವಲ್ನಿ ನೇತೃತ್ದಲ್ಲಿ ವಿಪಕ್ಷಗಳು ಭಾರಿ ಜಯ ಸಾಧಿಸಿವೆ. ಇದು ಪುಟಿನ್ ಹಾಗೂ ಆಡಳಿರೂಢ ಪಕ್ಷಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ. ಈ ಹೊತ್ತಲ್ಲೇ ಮುಂದಿನ ವರ್ಷ ರಷ್ಯಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಇದೇ ಕಾರಣಕ್ಕೆ ನನಗೆ ಗುಪ್ತಚರ ಇಲಾಖೆ 'ನೋವಿಚೋಕ್' ವಿಷ ಹಾಕಿದೆ ಎಂದು ನವಲ್ನಿ ಆರೋಪಿಸಿದ್ದಾರೆ.

ಘಟನೆ ನಡೆದಿದ್ದು ಹೇಗೆ..?

ಘಟನೆ ನಡೆದಿದ್ದು ಹೇಗೆ..?

ಆಗಸ್ಟ್ 20ರಂದು ಸೈಬೀರಿಯಾದ ಟಾಮ್ಸ್ಕ್‌ನಿಂದ ಮಾಸ್ಕೋಗೆ ವಿಮಾನದಲ್ಲಿ ಮರಳುವಾಗ ನವಲ್ನಿ ಆರೋಗ್ಯ ಹದಗೆಟ್ಟಿತ್ತು. ಒಮಾಸ್ಕ್‌ ಎಂಬಲ್ಲಿ ತುರ್ತಾಗಿ ವಿಮಾನ ಇಳಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ವಿಮಾನ ಹತ್ತುವ ಮೊದಲು ರೆಸ್ಟೋರೆಂಟ್ ಒಂದರಲ್ಲಿ ನವಲ್ನಿ ಟೀ ಸೇವಿಸಿದ್ದರು. ಅದರಲ್ಲಿ ಕಾರ್ಕೋಟಕ ವಿಷ ಬೆರೆಸಲಾಗಿತ್ತು ಎಂಬ ಆರೋಪವಿತ್ತು.

ನಂತರ ರಷ್ಯಾದ ಸಾಮಾನ್ಯ ಆಸ್ಪತ್ರೆಯಲ್ಲಿ ನವಲ್ನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ನವಲ್ನಿ ಕುಟುಂಬ ಮತ್ತು ಬೆಂಬಲಿಗರು ನವಲ್ನಿಗೆ ಜರ್ಮನಿಯಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದರು. ನವಲ್ನಿಯನ್ನ ಜರ್ಮನಿಗೆ ಶಿಫ್ಟ್ ಮಾಡುವ ವಿಚಾರದಲ್ಲಿ ದೊಡ್ಡ ನಾಟಕ ನಡೆದಿತ್ತು. ಬಳಿಕ ಅಂತಾರಾಷ್ಟ್ರೀಯ ಒತ್ತಡಗಳಿಗೆ ಮಣಿದಿದ್ದ ರಷ್ಯಾ ಸರ್ಕಾರ ನವಲ್ನಿಗೆ ಜರ್ಮನಿಯಲ್ಲಿ ಚಿಕಿತ್ಸೆ ಕೊಡಿಸಲು ಒಪ್ಪಿತ್ತು.

ಆಸ್ಪತ್ರೆಯಿಂದ ನವಲ್ನಿ ಔಟ್, ಮುಂದೆ ಇದೆ ಮಾರಿಹಬ್ಬ..!ಆಸ್ಪತ್ರೆಯಿಂದ ನವಲ್ನಿ ಔಟ್, ಮುಂದೆ ಇದೆ ಮಾರಿಹಬ್ಬ..!

ನವಲ್ನಿ ಬದುಕುವುದೇ ಅನುಮಾನವಾಗಿತ್ತು

ನವಲ್ನಿ ಬದುಕುವುದೇ ಅನುಮಾನವಾಗಿತ್ತು

ಕೆಲ ದಿನಗಳ ಹಿಂದೆ ಅಲೆಕ್ಸಿ ನವಲ್ನಿ ಪರಿಸ್ಥಿತಿ ಗಮನಿಸಿದ್ದ ತಜ್ಞರು ಆತ ಬದುಕುಳಿಯುವುದೇ ಅನುಮಾನ ಎಂದಿದ್ದರು. ಅದರಲ್ಲೂ ಜರ್ಮನಿಗೆ ಶಿಫ್ಟ್ ಆಗಲು ನವಲ್ನಿಗೆ ತುರ್ತಾಗಿ ಅನುಮತಿ ನೀಡದಿರುವುದು ಆತನ ಜೀವಕ್ಕೆ ದೊಡ್ಡ ಕಂಟಕ ಸೃಷ್ಟಿಮಾಡಿತ್ತು. ಆದರೆ ಜರ್ಮನಿಯ ಸ್ವಯಂಸೇವಾ ಸಂಸ್ಥೆಯೊಂದು ನವಲ್ನಿಗೆ ಚಿಕಿತ್ಸೆ ಕೊಡಿಸಲು ಮುಂದಾಗಿತ್ತಲ್ಲದೆ, ಸ್ವತಃ ವಿಮಾನವನ್ನು ಕೂಡ ರಷ್ಯಾಗೆ ಕಳುಹಿಸಿತ್ತು. ನವಲ್ನಿಗೆ ಬರ್ಲಿನ್‌ನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಕೋಮಾ ಸ್ಟೇಜ್‌ನಿಂದ ನವಲ್ನಿ ಹೊರಬಂದಿದ್ದಾರೆ.

Recommended Video

ಶಾಲಾ ಕಾಲೇಜುಗಳು ಪುನರಾರಂಬದ ಬಗ್ಗೆ Sriramulu ಹೇಳಿದ್ದೇನು | Oneindia Kannada
ಭ್ರಷ್ಟಾಚಾರದ ವಿರುದ್ಧ ಹೋರಾಟ

ಭ್ರಷ್ಟಾಚಾರದ ವಿರುದ್ಧ ಹೋರಾಟ

ಅಲೆಕ್ಸಿ ನವಲ್ನಿ ರಾಜಕಾರಣಿ ಮಾತ್ರವಲ್ಲ, ಹೋರಾಟಗಾರ ಕೂಡ. ನವಲ್ನಿ ಭ್ರಷ್ಟಾಚಾರದ ವಿರುದ್ಧ ರಷ್ಯಾದಲ್ಲಿ ನಿರಂತರವಾಗಿ ಹೋರಾಡುತ್ತಿದ್ದಾರೆ. ರಷ್ಯಾದ ಮಾಜಿ ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್ ಭ್ರಷ್ಟಾಚಾರದ ಬಗ್ಗೆ ಸಿನಿಮಾ ಕೂಡ ನಿರ್ದೇಶಿಸಿದ್ದರು. ಹಾಗೇ ಪುಟಿನ್ ವಿರುದ್ಧ ಕೇಳಿಬರುತ್ತಿದ್ದ ಭ್ರಷ್ಟಾಚಾರ ಹಾಗೂ ಚುನಾವಣಾ ಅಕ್ರಮಗಳ ವಿರುದ್ಧ ನವಲ್ನಿ ಹಿಂದಿನಿಂದಲೂ ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ನವಲ್ನಿ ಮೇಲೆ ಡೆಡ್ಲಿ ಕೆಮಿಕಲ್ ಅಟ್ಯಾಕ್ ಆಗಿ ಅವರು ಬದುಕುಳಿದಿದ್ದರು, ಇದೀಗ 'ನೋವಿಚೋಕ್' ಎಂಬ ಕಾರ್ಕೋಟಕ ವಿಷ ದೇಹ ಸೇರಿದ್ದರೂ ಬದುಕುಳಿದು ಪುಟಿನ್ ಪಡೆ ವಿರುದ್ಧ ತೊಡೆ ತಟ್ಟಿದ್ದಾರೆ.

English summary
The anti-corruption fighter and Putin's arch-enemy, Navalny, has accused Russia's intelligence agency of conspiring to assassinate him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X