ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಹತ್ಯೆಗೆ ನಡೀತಿತ್ತಾ ಸಂಚು?
ಲಾಹೋರ್, ನವೆಂಬರ್ 7: ಪಾಕ್ ಮಾಜಿ ಪ್ರಧಾನಿ ಹತ್ಯೆಗೆ ಸಂಚು ನಡೆಯುತ್ತಿತ್ತು ಎನ್ನುವ ಮಾಹಿತಿ ಇದೀಗ ಬಹಿರಂಗಗೊಂಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ ರಕ್ತದಲ್ಲಿ ಪ್ಲೇಟ್ಲೆಟ್ ಸಂಖ್ಯೆ ತೀವ್ರ ಕುಸಿತ ಕಂಡಿತ್ತು, ಅವರಿಗೆ ಪದೇಪದೆ ಈ ಸಮಸ್ಯೆ ಕಾಡುತ್ತಿದ್ದು ಚಿಕಿತ್ಸೆ ನೀಡಿದರೂ ಫಲಕೊಡುತ್ತಿಲ್ಲ. ಒಂದು ಸಲ ಹೆಚ್ಚಾದರೂ ಮರುದಿನವೇ ಮತ್ತೆ ಪ್ಲೇಟ್ಲೆಟ್ ಕಡಿಮೆಯಾಗುತ್ತಿದೆ.
ಹಾಗಾಗಿ ಈಗ ಏಕಾಏಕಿಯಾಗಿ ಪ್ಲೇಟ್ಲೆಟ್ ಕೌಂಟ್ಸ್ ಹೇಗೆ ಕಡಿಮೆಯಾಗುತ್ತಿದೆ ಎಂದು ಅಧ್ಯಯನ ಮಾಡಿದ ವೈದ್ಯರ ತಂಡಕ್ಕೆ ಶಾಕ್ ಕಾದಿತ್ತು. ನಿಧಾನವಾಗಿ ವಿಷವನ್ನು ದೇಹದೊಳಗೆ ಸೇರಿಸಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎನ್ನುವ ವಿಚಾರ ತಿಳಿದು ಬಂದಿದೆ.

ಮುತಾಹಿದಾ ಕ್ವಾಮಿ ಮೂವ್ಮೆಂಟ್ (ಎಂಕ್ಯೂಎಂ) ಸಂಸ್ಥಾಪಕ ಅಲ್ತಾಫ್ ಹುಸ್ಸೇನ್ ಈ ಕುರಿತು ಟ್ವೀಟ್ ಮಾಡಿದ್ದು, ನವಾಜ್ ಷರೀಫ್ ದೇಹದಲ್ಲಿ ಪ್ಲೇಟ್ಲೆಟ್ ಸಂಖ್ಯೆ ಕುಸಿತವಾಗಿದೆ. ಸಾಮಾನ್ಯವಾಗಿ ಶತ್ರುಗಳನ್ನು ಕೊಲ್ಲಲು ಪೊಲೊನಿಯಂ (ಅತ್ಯಂತ ವಿಷಕಾರಿ ವಸ್ತು) ಎಂಬ ವಿಷಪ್ರಾಶನ ಮಾಡಿಸಲಾಗುತ್ತದೆ. ಒಮ್ಮೆಲೇ ಕೊಡದೆ ಹಂತಹಂತವಾಗಿ ಸ್ವಲ್ಪವೇ ನೀಡುತ್ತ ಆ ಶತ್ರು ನಿಧಾನವಾಗಿ ಸಾಯುವಂತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ನವಾಜ್ ಷರೀಫ್ ಅವರು ಲಾಹೋರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಮನೆಗೆ ತೆರಳಿದ್ದಾರೆ. ಅಕ್ಟೋಬರ್ 22ರಿಂದಲೂ ಅವರು ಆಸ್ಪತ್ರೆಯಲ್ಲೇ ಇದ್ದರು. ಈಗ ಅವರ ಮನೆಯಲ್ಲೇ ಐಸಿಯುವನ್ನು ರಚಿಸಿ, ವೈದ್ಯರೂ ಅಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications