ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಜಾಮೀನು
ಲಾಹೋರ್, ಅಕ್ಟೋಬರ್ 26: ಜೈಲು ವಾಸ ಅನುಭವಿಸುತ್ತಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‌ಗೆ ಜಾಮೀನು ದೊರೆತಿದೆ.
ಅನಾರೋಗ್ಯಕ್ಕೆ ತುತ್ತಾಗಿರುವ ನವಾಜ್ ಷರೀಫ್ ಅವರಿಗೆ ವೈದ್ಯಕೀಯ ಕಾರಣದ ಮೇಲೆ ಲಾಹೋರ್ ಹೈಕೋರ್ಟ್ ನಿನ್ನೆ ಜಾಮೀನು ನೀಡಿದೆ.
ನವಾಜ್ ಷರೀಫ್ ಅವರ ದೇಹದಲ್ಲಿ ಬಿಳಿರಕ್ತ ಕಣಗಳು ಇಳಿಕೆಯಾದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೇ ವೈದ್ಯಕೀಯ ಆಧಾರದ ಮೇಲೆ ಅವರಿಗೆ ಜಾಮೀನು ಸಹ ನೀಡಲಾಗಿದೆ. ಪ್ರಸ್ತುತ ನವಾಜ್ ಷರೀಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರಪಿಯಾಗಿದ್ದ ನವಾಜ್ ಷರೀಫ್ ಅವರನ್ನು ಬಂಧನದಲ್ಲಿ ಇರಿಸಲಾಗಿತ್ತು. ಷರೀಫ್ ಅವರ ಸಹೋದರ ಹೈಕೋರ್ಟ್‌ಗೆ ಅರ್ಜಿ ಹಾಕಿ, ಷರೀಫ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಕೋರಿದ್ದರು. ಅವರ ಮನವಿಯನ್ನು ಲಾಹೋರ್ ಹೈಕೋರ್ಟ್ ಪುರಸ್ಕರಿಸಿದೆ.












Click it and Unblock the Notifications