Nepal flood: ನೇಪಾಳದಲ್ಲಿ ಕೊಚ್ಚಿಬಂದ ಚಿನ್ನ, ಬೆಳ್ಳಿ ಸಿಕ್ಕರೆ ಇಟ್ಟುಕೊಳ್ಳುವಂತಿಲ್ಲ; ಪೊಲೀಸರ ಖಡಕ್ ಎಚ್ಚರಿಕೆ

Nepal flood: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿಬಂದ ಚಿನ್ನ, ಬೆಳ್ಳಿ, ನಗದು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು ಅಥವಾ ಬಚ್ಚಿಡುವುದು ಕಾನೂನುಬಾಹಿರ ಎಂದು ನೇಪಾಳ ಪೊಲೀಸರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ಯಾರಿಗಾದರೂ ಇಂತಹ ಬೆಲೆಬಾಳುವ ವಸ್ತುಗಳು ಸಿಕ್ಕರೆ, ಅವುಗಳನ್ನು ತಮ್ಮ ಬಳಿ ಇಟ್ಟುಕೊಳ್ಳದೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

Nepal Flood Keeping Gold Silver or Cash Washed Away by Floodwaters Is Illegal Nepal Police have warned

ಇತ್ತೀಚೆಗೆ ತ್ರಿಶೂಲಿ ನದಿಯಲ್ಲಿ ಸಂಭವಿಸಿದ ಪ್ರವಾಹದಲ್ಲಿ ಬ್ಯಾಂಕ್‌ನ ಸೇಫ್ ಲಾಕರ್‌ವೊಂದು ಕೊಚ್ಚಿಬಂದಿತ್ತು. ಅದನ್ನು ಒಡೆದು ಹಣ ದೋಚಿದ ಆರೋಪದಲ್ಲಿ ಧಾಡಿಂಗ್ ಜಿಲ್ಲೆಯಲ್ಲಿ 29 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಬೆನ್ನಲ್ಲೇ ಪೊಲೀಸರು ಸಾರ್ವಜನಿಕರಿಗೆ ಈ ಎಚ್ಚರಿಕೆ ನೀಡಿದ್ದಾರೆ.

ಕಳ್ಳತನ, ಲೂಟಿ ಬಗ್ಗೆ ಎಚ್ಚರಿಕೆ

ಪ್ರಕೃತಿವಿಕೋಪದ ಸಂದರ್ಭದಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿರತರಾಗಿರುತ್ತಾರೆ. ಈ ಸಮಯವನ್ನು ದುರುಪಯೋಗಪಡಿಸಿಕೊಂಡು ಕೆಲವರು ಕಳ್ಳತನ, ಲೂಟಿ ಹಾಗೂ ವಂಚನೆ ನಡೆಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಹೇಳಿದ್ದಾರೆ.

ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಯಾವುದೇ ವಸ್ತು ತಮ್ಮದಾಗುವುದಿಲ್ಲ. ಅದು ಯಾರದ್ದೇ ಆಸ್ತಿಯಾಗಿದ್ದರೂ, ಅದನ್ನು ಸ್ವಂತಕ್ಕೆ ಬಳಸುವುದು ಅಥವಾ ಮಾರಾಟ ಮಾಡುವುದು ಕಾನೂನು ಕ್ರಮಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪ್ರವಾಹದಿಂದ ಸಿಕ್ಕ ಬೆಲೆಬಾಳುವ ವಸ್ತುಗಳನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಕಾನೂನು ಪಾಲಿಸುವಂತೆ ಹಾಗೂ ಸಂಕಷ್ಟದ ಸಮಯದಲ್ಲಿ ಇತರರ ಆಸ್ತಿಗೆ ಗೌರವ ನೀಡುವಂತೆ ನೇಪಾಳ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Nepal flood:ನೇಪಾಳಕ್ಕೆ ಮತ್ತೆ ಪ್ರವಾಹದ ಆತಂಕ

ನೇಪಾಳದಲ್ಲಿ ಮತ್ತೆ ಭಾರೀ ಮಳೆ ಹಾಗೂ ಪ್ರವಾಹದ ಆತಂಕ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಪ್ರವಾಹದ ನೀರು ನುಗ್ಗಿದ್ದು, ಮನೆಗಳು ಹಾಗೂ ತೂಗು ಸೇತುವೆ ಕೊಚ್ಚಿಹೋಗಿವೆ. ಈ ಹಿನ್ನೆಲೆಯಲ್ಲಿ ಬುಧಿಗಂಡಕಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಪ್ರವಾಹದ ನೀರು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ.

ನೇಪಾಳದ ಗೋರಖಾ ಜಿಲ್ಲೆಯ ಬುಧಿಗಂಡಕಿ ನದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರಗೊಂಡಿದೆ. ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆ ಉಂಟಾದ ಭೀಕರ ಪ್ರವಾಹದಿಂದ ಮನೆಗಳು, ಸೇತುವೆಗಳು, ರಸ್ತೆಗಳು ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿತ್ತು. ಇದೀಗ ಮತ್ತೆ ಪ್ರವಾಹದ ಮುನ್ಸೂಚನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

Nepal flood:ಗರ್ಭಿಣಿಯರು, ಬಾಣಂತಿಯರಿಗೂ ಸಂಕಷ್ಟ

ಪ್ರವಾಹದಿಂದಾಗಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವ ಗರ್ಭಿಣಿಯರು ಮತ್ತು ಬಾಣಂತಿಯರ ಪರಿಸ್ಥಿತಿಯೂ ಚಿಂತಾಜನಕವಾಗಿದೆ. ಅಗತ್ಯ ವೈದ್ಯಕೀಯ ಸೇವೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅಧಿಕಾರಿಗಳಿಗೆ ಸವಾಲಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದು, ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನದಿ ಪಾತ್ರದ ಜನರಿಗೆ ನಿರಂತರ ಎಚ್ಚರಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+