ನೇಪಾಳದಲ್ಲಿ ಸಂಭವಿಸಿದ ಭೂಕುಸಿತಕ್ಕೆ 12 ಮಂದಿ ಸಾವು, 19 ಮಂದಿ ಕಾಣೆ
ಕಠ್ಮಂಡು, ಜುಲೈ.10: ಪಶ್ಚಿಮ ನೇಪಾಳ ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 12 ಮಂದಿ ಪ್ರಾಣ ಬಿಟ್ಟಿದ್ದು, 19ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Recommended Video
ಕಸ್ಕಿ ಜಿಲ್ಲೆಯ ಪೋಖರಾ ನಗರದ ಸಾರಂಗ್‌ಕೋಟ್ ಮತ್ತು ಹೆಮ್ಜನ್ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ ಮೂವರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ. ಪೋಖರಾದ ಸಾರಂಗ್ ಕೋಟ್ ಪ್ರದೇಶದಲ್ಲಿ ಶುಕ್ರವಾರದ ಮುಂಜಾನೆ ಭೂಕುಸಿತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.
ಇದೇ ಘಟನೆಯಲ್ಲಿ ಸುಮಾರು 10 ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ, ಲ್ಯಾಮ್‌ಜಂಗ್ ಜಿಲ್ಲೆಯ ಬೆಸಿಶಹರ್‌ನಲ್ಲಿ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ರುಕುಮ್ ಜಿಲ್ಲೆಯ ಅಥ್ ಬಿಸ್ಕೋಟ್ ಪ್ರದೇಶದಲ್ಲಿ ಇತರ ಇಬ್ಬರು ಪ್ರಾಣ ಬಿಟ್ಟಿದ್ದಾರೆ. ಇದರ ನಡುವೆ ಜಜೋರ್ಕೋಟ್ ಜಿಲ್ಲೆಯಲ್ಲಿ ಭೂಕುಸಿತದಿಂದ ಎರಡು ಮನೆಗಳಿಗೆ ಹಾನಿಯಾಗಿದ್ದು, 12 ಜನರು ನಾಪತ್ತೆಯಾಗಿದ್ದಾರೆ.

ಮಯಾಗ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆಗಳಿಗೆ ಹಾನಿಯಾಗಿದೆ. ಜೋಗಿಮರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು ಪಶ್ಚಿಮ ನೇಪಾಳದ ಪೃಥಿ ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ 48 ಗಂಟೆ ಕಾಲ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಾರಾಯಣಿ ಮತ್ತು ದೇಶದ ಇತರ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೂ ಮೂರು ದಿನಗಳವರೆಗೂ ಮಾನ್ಸೂನ್ ಮಳೆ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications