• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೇಪಾಳದಲ್ಲಿ ಸಂಭವಿಸಿದ ಭೂಕುಸಿತಕ್ಕೆ 12 ಮಂದಿ ಸಾವು, 19 ಮಂದಿ ಕಾಣೆ

|

ಕಠ್ಮಂಡು, ಜುಲೈ.10: ಪಶ್ಚಿಮ ನೇಪಾಳ ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 12 ಮಂದಿ ಪ್ರಾಣ ಬಿಟ್ಟಿದ್ದು, 19ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

   Negative ಇದ್ರು Positive ಇದೆ ಬನ್ನಿ ಅಂತಾರೆ ಹುಷಾರ್ | Victoria Hospital | Oneindia Kannada

   ಕಸ್ಕಿ ಜಿಲ್ಲೆಯ ಪೋಖರಾ ನಗರದ ಸಾರಂಗ್‌ಕೋಟ್ ಮತ್ತು ಹೆಮ್ಜನ್ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ ಮೂವರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ. ಪೋಖರಾದ ಸಾರಂಗ್ ‌ಕೋಟ್ ಪ್ರದೇಶದಲ್ಲಿ ಶುಕ್ರವಾರದ ಮುಂಜಾನೆ ಭೂಕುಸಿತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.

   ಚೀನಾದ ಮಾತು ಕೇಳಿ ಅಧಿಕಾರ ಕಳೆದುಕೊಳ್ಳುವತ್ತ ನೇಪಾಳ ಪ್ರಧಾನಿ

   ಇದೇ ಘಟನೆಯಲ್ಲಿ ಸುಮಾರು 10 ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ, ಲ್ಯಾಮ್‌ಜಂಗ್ ಜಿಲ್ಲೆಯ ಬೆಸಿಶಹರ್‌ನಲ್ಲಿ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ರುಕುಮ್ ಜಿಲ್ಲೆಯ ಅಥ್ ‌ಬಿಸ್ಕೋಟ್ ಪ್ರದೇಶದಲ್ಲಿ ಇತರ ಇಬ್ಬರು ಪ್ರಾಣ ಬಿಟ್ಟಿದ್ದಾರೆ. ಇದರ ನಡುವೆ ಜಜೋರ್ಕೋಟ್ ಜಿಲ್ಲೆಯಲ್ಲಿ ಭೂಕುಸಿತದಿಂದ ಎರಡು ಮನೆಗಳಿಗೆ ಹಾನಿಯಾಗಿದ್ದು, 12 ಜನರು ನಾಪತ್ತೆಯಾಗಿದ್ದಾರೆ.

   ಮಯಾಗ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆಗಳಿಗೆ ಹಾನಿಯಾಗಿದೆ. ಜೋಗಿಮರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು ಪಶ್ಚಿಮ ನೇಪಾಳದ ಪೃಥಿ ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ 48 ಗಂಟೆ ಕಾಲ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಾರಾಯಣಿ ಮತ್ತು ದೇಶದ ಇತರ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೂ ಮೂರು ದಿನಗಳವರೆಗೂ ಮಾನ್ಸೂನ್ ಮಳೆ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

   English summary
   West Nepal Landslides: 12 People Killed And 19 Missing. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X