ವಾಲಿ ಬಿತ್ತು ‘ಓಲಿ’ಯ ಸರ್ಕಾರ! ಅಧಿಕಾರ ಹಿಡಿಯಲು ಕಾಂಗ್ರೆಸ್ ಸರ್ಕಸ್..?

ಭಾರತದ ನೆರೆ ದೇಶದಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿದಿದ್ದು, ಹೊಸ ಸರ್ಕಾರ ರಚನೆಗೆ ಡೆಡ್‌ಲೈನ್ ನೀಡಲಾಗಿದೆ. ಅಂದಹಾಗೆ ಕೆ.ಪಿ.ಶರ್ಮಾ ಓಲಿ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆಯಲ್ಲಿ ಸೋಲು ಕಂಡ ಹಿನ್ನೆಲೆ ಹೊಸ ಸರ್ಕಾರ ರಚನೆಗೆ ನೇಪಾಳ ಅಧ್ಯಕ್ಷೆ 3 ದಿನಗಳ ಗಡುವು ನೀಡಿದ್ದಾರೆ. ಮೇ 10ರಂದು ವಿಶ್ವಾಸಮತ ಯಾಚನೆ ನಡೆದಿತ್ತು.

ನೇಪಾಳ ಸಂಸತ್‌ನ ಕೆಳಮನೆಯಲ್ಲಿ 275 ಸದಸ್ಯರಿದ್ದು ಈ ಪೈಕಿ ನಾಲ್ವರು ಅಮಾನತುಗೊಂಡಿದ್ದರು. ಹೀಗಾಗಿ ವಿಶ್ವಾಸ ಮತ ಯಾಚನೆಗೆ ಮುಂದಾಗಿದ್ದ ಕೆ.ಪಿ. ಶರ್ಮಾ ಓಲಿಗೆ ಕನಿಷ್ಠ 136 ಮತಗಳು ಬೇಕಾಗಿದ್ದವು. ಆದರೆ ಓಲಿಗೆ ಸಿಕ್ಕಿದ್ದು 93 ಸಂಸತ್ ಸದಸ್ಯರ ಮತಗಳು. ಈ ಮೂಲಕ ಓಲಿ ಸೋಲು ಕಂಡು, ಓಲಿ ಸರ್ಕಾರ ವಾಲಿಸಿದ್ದಾರೆ.

ಓಲಿ ವಿರುದ್ಧ 124 ಮತಗಳು ಬಿದ್ದಿದ್ದು, 15 ಮಂದಿ ನೇಪಾಳ ಸಂಸತ್ ಸದಸ್ಯರು ತಟಸ್ಥರಾಗಿ ಉಳಿದರು. ಓಲಿ ಆಡಳಿತ ಸೋಲು ಕಂಡ ನಂತರ ನೇಪಾಳ ಸಂವಿಧಾನದ 76 (2)ನೇ ವಿಧಿ ಅನ್ವಯ ಹೊಸ ಸರ್ಕಾರ ರಚಿಸಲು ಅಧ್ಯಕ್ಷೆ ಬಿಡಿಯಾ ದೇವಿ 3 ದಿನಗಳ ಟೈಂ ನೀಡಿದ್ದಾರೆ.

ಸರ್ಕಾರ ರಚಿಸುತ್ತಾ ಕಾಂಗ್ರೆಸ್..?

ಸರ್ಕಾರ ರಚಿಸುತ್ತಾ ಕಾಂಗ್ರೆಸ್..?

ಈಗಿನ ಪರಿಸ್ಥಿತಿಯನ್ನು ಅವಲೋಕಿಸಿದರೆ ನೇಪಾಳದ ಸಂಸತ್‌ಗೆ ಹೊಸದಾಗಿ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ನೇಪಾಳಿ ಕಾಂಗ್ರೆಸ್ ಸರ್ಕಾರ ರಚನೆಗೆ ತೆರೆಮರೆಯ ಪ್ರಯತ್ನ ಆರಂಭಿಸಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಅಧ್ಯಕ್ಷೆ ಬಿಡಿಯಾ ದೇವಿ ಸೂಚನೆ ಹಿನ್ನೆಲೆ ನೇಪಾಳದ ವಿಪಕ್ಷಗಳು ಸರ್ಕಾರ ರಚನೆಗೆ ಮುಂದಾಗಿವೆ. ಈ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ ನೇಪಾಳಿ ಕಾಂಗ್ರೆಸ್‌. ಮತ್ತೊಂದ್ಕಡೆ ನೇಪಾಳಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಮುಂದಾದರೆ ಬೆಂಬಲ ನೀಡುತ್ತೇವೆ ಎಂದು ಜನತಾ ಸಮಾಜವಾದಿ ಪಕ್ಷ ಮತ್ತು ಸಿಪಿಎನ್‌ ಪಕ್ಷಗಳು ಘೋಷಿಸಿವೆ. ನೇಪಾಳಿ ಕಾಂಗ್ರೆಸ್‌ ಹೇಗೋ ಸರ್ಕಾರ ರಚಿಸಿದರೂ ಬಹುಮತ ಸಿಗುವುದು ಡೌಟ್.

ವಿಶ್ವಾಸ ಮತ ಏಕೆ..?

ವಿಶ್ವಾಸ ಮತ ಏಕೆ..?

ಅಂದಹಾಗೆ ಓಲಿ ಪ್ರತಿನಿಧಿಸುತ್ತಿದ್ದ ಸಿಪಿಎನ್‌-ಯುಎಂಎಲ್‌ ಹಾಗೂ ಪುಷ್ಪಕಮಲ್‌ ದಹಾಲ್‌ (ಪ್ರಚಂಡ) ನೇತೃತ್ವದ ಸಿಪಿಎನ್‌ (ಮಾವೋವಾದಿ) ಮೈತ್ರಿಕೂಟ ಸರ್ಕಾರವನ್ನ ರಚಿಸಿದ್ದವು. ಆದರೆ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪ್ರಚಂಡ ನೇತೃತ್ವದ ಪಕ್ಷ ಹಿಂಪಡೆದಿತ್ತು. ಇಷ್ಟಲ್ಲದೆ ಪ್ರಧಾನಿ ಕೆ.ಪಿ.ಶರ್ಮಾ ಓಲಿ ವಿರುದ್ಧವೇ ಸರ್ಕಾರದ ಮಿತ್ರಪಕ್ಷಗಳು ರೊಚ್ಚಿಗೆದ್ದಿದ್ದವು. ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆ ವಿಶ್ವಾಸ ಮತ ಯಾಚನೆಗೆ ನಿರ್ಧರಿಸಲಾಗಿತ್ತು. ಪ್ರಧಾನಿ ಓಲಿ ಶಿಫಾರಸಿನ ಹಿನ್ನೆಲೆಯಲ್ಲಿ ಅಧ್ಯಕ್ಷೆ ಬಿಡಿಯಾ ದೇವಿ ಭಂಡಾರಿ ಅಧಿವೇಶನ ಕರೆದಿದ್ದರು. ಓಲಿ ಸಂಸತ್‌ ಕೆಳಮನೆಯಲ್ಲಿ ವಿಶ್ವಾಸ ಮತಯಾಚನೆ ಮಾಡಿ ಸೋಲು ಕಂಡಿದ್ದಾರೆ.

 ಪಕ್ಷದಿಂದಲೇ ಉಚ್ಛಾಟನೆ ಆಗಿದ್ದರು

ಪಕ್ಷದಿಂದಲೇ ಉಚ್ಛಾಟನೆ ಆಗಿದ್ದರು

2017ರಲ್ಲಿ ನೇಪಾಳ ಚುನಾವಣೆಯಲ್ಲಿ ಎಡಪಕ್ಷಗಳ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿತ್ತು. ಜಯದೊಂದಿಗೆ ನೇಪಾಳದಲ್ಲಿ ರಾಜಕೀಯ ಸ್ಥಿರತೆ ಆಸೆ ಮತ್ತೆ ಚಿಗುರೊಡೆದಿತ್ತು. ಆದರೆ ಆಡಳಿತರೂಢ ಎನ್‌ಸಿಪಿಯಲ್ಲೇ ಓಲಿ ವಿರೋಧಿಗಳು ಹೆಚ್ಚಳವಾಗಿ, ಓಲಿ ಬೆಂಬಲ ಕಳೆದುಕೊಂಡರು. ನೇಪಾಳಿ ಕಮ್ಯೂನಿಸ್ಟ್ ಪಕ್ಷ(ಎನ್‌ಸಿಪಿ)ವನ್ನು ಬಿಟ್ಟು, ಬಂಡಾಯಗಾರ ಮಾವೋವಾದಿಗಳ ಓಲೈಸುತ್ತಾ ಬಂದ ಆರೋಪದಡಿ ಕೆ.ಪಿ ಶರ್ಮಾ ಓಲಿ ಅವರನ್ನು ಜನವರಿಯಲ್ಲಿ ಉಚ್ಛಾಟನೆ ಮಾಡಲಾಗಿತ್ತು. ಕಮ್ಯೂನಿಸ್ಟ್ ಪಕ್ಷ ಅಧಿಕೃತವಾಗಿ ಈ ಸುದ್ದಿ ಪ್ರಕಟಿಸಿತ್ತು. ಇದಾದ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿತ್ತು.

 ‘ಕೊರೊನಾ’ ಕಾರಣವೂ ಇದೆ

‘ಕೊರೊನಾ’ ಕಾರಣವೂ ಇದೆ

ಮಹಾಮಾರಿ ಕೊರೊನಾ ಜಗತ್ತನ್ನು ಕಾಡುತ್ತಿರುವಂತೆ ನೇಪಾಳವನ್ನೂ ಕಾಡುತ್ತಿದೆ. ನೇಪಾಳದಲ್ಲಿ ಸುಮಾರು 4 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದರೆ, ಸಾವಿರಾರು ಜನ ಪ್ರಾಣಬಿಟ್ಟಿದ್ದಾರೆ. ಆದರೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ, ಕೆ.ಪಿ.ಶರ್ಮಾ ಓಲಿ ಕೊರೊನಾ ಪರಿಸ್ಥಿತಿ ನಿಭಾಯಿಸಲು ವಿಫಲರಾಗಿದ್ದಾರೆ ಎಂಬ ಆರೋಪ ಇತ್ತು. ಓಲಿ ಕೊರೊನಾ ಮತ್ತು ಪಕ್ಷ ಎರಡನ್ನೂ ನಿಭಾಯಿಸುವಲ್ಲಿ ಸೋತಿದ್ದಾರೆಂದು ಆರೋಪಿಸಲಾಗಿತ್ತು. ಎಲ್ಲದರ ಪರಿಣಾಮ ಕೆ.ಪಿ.ಶರ್ಮಾ ಓಲಿ ಸಂಸತ್‌ನಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ನೇಪಾಳದಲ್ಲಿ ಮತ್ತೆ ರಾಜಕೀಯ ಅಸ್ಥಿರತೆ ಮೂಡಿದ್ದು, ಕೊರೊನಾ ಕಂಟಕದ ನಡುವೆ ಜನರು ಮತ್ತಷ್ಟು ಗೊಂದಲಕ್ಕೆ ಸಿಲುಕುವಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+