Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ
ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ (ಸೆಪ್ಟೆಂಬರ್) ನಡೆದ ಭ್ರಷ್ಟಾಚಾರ ವಿರೋಧಿ 'ಜೆನ್ ಝೀ' (Gen Z) ಯುವಜನತೆಯ ಪ್ರತಿಭಟನೆ ವೇಳೆ ನಡೆದ ಮಾರಣಾಂತಿಕ ಕಾರ್ಯಾಚರಣೆ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಮತ್ತು ಅದನ್ನು ತಡೆಯಲು ವಿಫಲರಾದ ಆರೋಪದ ಮೇಲೆ ಈ ಬಂಧನ ಕಾರ್ಯಾಚರಣೆ ನಡೆದಿದೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದ ಯುವಕರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಕುರಿತು ತನಿಖೆ ನಡೆಸಿದ ನೇಪಾಳದ ವಿಶೇಷ ಸಮಿತಿಯು, 74 ವರ್ಷದ ಕೆ.ಪಿ. ಶರ್ಮಾ ಒಲಿ ವಿರುದ್ಧ ಮೊಕದ್ದಮೆ ಹೂಡಲು ಈ ವಾರದ ಆರಂಭದಲ್ಲಿ ಅಧಿಕೃತವಾಗಿ ಶಿಫಾರಸು ಮಾಡಿತ್ತು.

"ಇಂದು ಬೆಳಿಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹ ಸಚಿವರನ್ನು ಬಂಧಿಸಲಾಗಿದ್ದು, ಕಾನೂನಿನ ಪ್ರಕಾರ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ" ಎಂದು ಕಠ್ಮಂಡು ಕಣಿವೆ ಪೊಲೀಸ್ ವಕ್ತಾರ ಓಂ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. 2025ರ ಐತಿಹಾಸಿಕ ದಂಗೆಯ ನಂತರ ನಡೆದ ಮೊದಲ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ, ನೂತನ ಪ್ರಧಾನಿ ಬಾಲೆಂದ್ರ ಶಾ ಮತ್ತು ಅವರ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ಬೆನ್ನಲ್ಲೇ ಈ ಹೈಡ್ರಾಮಾ ನಡೆದಿದೆ.
'ಕಾನೂನಿಗಿಂತ ಯಾರೂ ಮಿಗಿಲಲ್ಲ' ಎಂದ ನೂತನ ಸಚಿವ
ಪ್ರತಿಭಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಗೂ ನೇಪಾಳದ ನೂತನ ಗೃಹ ಸಚಿವರಾಗಿ ನೇಮಕಗೊಂಡಿರುವ ಸುದಾನ್ ಗುರುಂಗ್ (Sudan Gurung), ಒಲಿ ಬಂಧನದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಕಾನೂನಿಗಿಂತ ಯಾರೂ ಮಿಗಿಲಲ್ಲ... ಇದು ಯಾರ ಮೇಲಿನ ಸೇಡಿನ ಕ್ರಮವಲ್ಲ, ಬದಲಾಗಿ ನ್ಯಾಯದ ಆರಂಭವಷ್ಟೇ. ಈಗ ದೇಶವು ಹೊಸ ದಿಕ್ಕಿನಲ್ಲಿ ಸಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ" ಎಂದು ಅವರು ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶನಿವಾರ ಬೆಳಿಗ್ಗೆ ಒಲಿ ಅವರನ್ನು ಅವರ ನಿವಾಸದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಒಲಿ ಅವರ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ ಹಿರಿಯ ನಾಯಕ ಮಿನ್ ಬಹದ್ದೂರ್ ಶಾಹಿ ರಾಯಿಟರ್ಸ್ಗೆ ಖಚಿತಪಡಿಸಿದ್ದಾರೆ.
#WATCH | Visuals from outside of the District Police Range, Kathmandu, where former Nepal Prime Minister KP Sharma Oli has been brought after being taken into custody from his residence in Gundu, Bhaktapur, by Nepal Police.
— ANI (@ANI) March 28, 2026
According to the Kathmandu Post, "he has been arrested… pic.twitter.com/RbnLmDv3sk
ಬಂಧನಕ್ಕೆ ಅಸಲಿ ಕಾರಣವೇನು?
ಸೆಪ್ಟೆಂಬರ್ 8 ಮತ್ತು 9 ರಂದು ನಡೆದ ಭ್ರಷ್ಟಾಚಾರ ವಿರೋಧಿ ಯುವ ದಂಗೆಯಲ್ಲಿ ಕನಿಷ್ಠ 77 ಜನರು ಪ್ರಾಣ ಕಳೆದುಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಮೇಲಿನ ಅಲ್ಪಾವಧಿಯ ನಿಷೇಧವನ್ನು ವಿರೋಧಿಸಿ ಶುರುವಾದ ಈ ಪ್ರತಿಭಟನೆ, ಕ್ರಮೇಣ ದೇಶದ ಆರ್ಥಿಕ ಸಂಕಷ್ಟದ ವಿರುದ್ಧದ ಆಕ್ರೋಶವಾಗಿ ಮಾರ್ಪಟ್ಟಿತ್ತು. ಪ್ರತಿಭಟನೆಯ ಮೊದಲ ದಿನವೇ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 19 ಯುವಕರು ಬಲಿಯಾಗಿದ್ದರು. ಮರುದಿನ ಈ ಅಶಾಂತಿ ದೇಶಾದ್ಯಂತ ವ್ಯಾಪಿಸಿ, ಸಂಸತ್ತು ಮತ್ತು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಲಾಯಿತು. ಇದರ ನೇರ ಪರಿಣಾಮವಾಗಿ ಅಂದಿನ ಕೆ.ಪಿ. ಶರ್ಮಾ ಒಲಿ ನೇತೃತ್ವದ ಸರ್ಕಾರ ಪತನಗೊಂಡಿತ್ತು.
ಈ ಮಾರಣಾಂತಿಕ ದಂಗೆಯ ಕುರಿತು ತನಿಖೆ ನಡೆಸಿದ ಸರ್ಕಾರಿ ಬೆಂಬಲಿತ ತನಿಖಾ ವರದಿ, ಒಲಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ. "ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಸರ್ಕಾರದಿಂದ ನೇರ ಆದೇಶ ನೀಡಲಾಗಿತ್ತು ಎಂಬುದಕ್ಕೆ ಸ್ಪಷ್ಟ ಆಧಾರಗಳಿಲ್ಲ. ಆದರೆ, ಗುಂಡಿನ ದಾಳಿಯನ್ನು ನಿಲ್ಲಿಸಲು ಅಥವಾ ನಿಯಂತ್ರಿಸಲು ಅಂದಿನ ಸರ್ಕಾರ ಯಾವುದೇ ಪ್ರಯತ್ನ ಮಾಡಲಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದ ನಡವಳಿಕೆಯಿಂದಾಗಿ ಅಮಾಯಕರು ಹಾಗೂ ಅಪ್ರಾಪ್ತ ವಯಸ್ಕರು ಕೂಡ ಪ್ರಾಣ ಕಳೆದುಕೊಳ್ಳಬೇಕಾಯಿತು" ಎಂದು ವರದಿಯಲ್ಲಿ ಗಂಭೀರವಾಗಿ ಉಲ್ಲೇಖಿಸಲಾಗಿದೆ. ಈ ವರದಿಯ ಆಧಾರದ ಮೇಲೆಯೇ ಇದೀಗ ಬಂಧನ ಪ್ರಕ್ರಿಯೆ ಜರುಗಿದೆ.
-
Nepal: ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗದ ನೇಪಾಳದ ಹೊಸ ಜೆನ್ ಜೀ ಸರ್ಕಾರ: ಗೋಪಾಲಕೃಷ್ಣ ಕುಂಟಿನಿ ಬರಹ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ













Click it and Unblock the Notifications