ಕೊರೊನಾ ಹೆಚ್ಚಳ; ಭಾರತದ ವಿಮಾನಗಳ ಮೇಲೆ ನೆದರ್‌ಲ್ಯಾಂಡ್ ನಿರ್ಬಂಧ
ನೆದರ್‌ಲ್ಯಾಂಡ್, ಏಪ್ರಿಲ್ 26: ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಆಗಮಿಸುವ ಪ್ರಯಾಣಿಕ ವಿಮಾನಗಳನ್ನು ನೆದರ್‌ಲ್ಯಾಂಡ್ ರದ್ದುಗೊಳಿಸಿದೆ.
ಸೋಮವಾರ ಸಂಜೆ 6 ಗಂಟೆಯಿಂದ ಭಾರತದಿಂದ ಬರುವ ವಿಮಾನಗಳನ್ನು ರದ್ದುಗೊಳಿಸುತ್ತಿರುವುದಾಗಿ ನೆದರ್‌ಲ್ಯಾಂಡ ಘೋಷಿಸಿದೆ. ಮೇ 1ರವರೆಗೂ ವಿಮಾನಗಳ ಮೇಲೆ ನಿರ್ಬಂಧ ಮುಂದುವರೆಯಲಿದೆ ಎಂದು ಡಚ್ ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಿಸಿದೆ.
ಭಾನುವಾರ ರಾತ್ರಿ ವಿಮಾನ ರದ್ದು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಕ್ಯಾಬಿನೆಟ್‌ನಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಭಾರತದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಸೃಷ್ಟಿಸಿದ್ದು, ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಮೂರು ಲಕ್ಷ ದಿನನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.
ಭಾನುವಾರ ಭಾರತದಲ್ಲಿ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ಹಾಗೂ ಕೇರಳದಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿದ್ದು, ದೇಶದ ಒಟ್ಟಾರೆ ಪ್ರಕರಣಗಳಲ್ಲಿ ಈ ರಾಜ್ಯಗಳ ಪಾಲು 54% ಇದೆ.
ಕೊರೊನಾ ಅಲೆ ದೇಶದಲ್ಲಿ ಜೋರಾಗಿದ್ದು, ಹಲವು ದೇಶಗಳು ಭಾರತದಿಂದ ವಿಮಾನ ಪ್ರಯಾಣವನ್ನು ರದ್ದುಗೊಳಿಸಿವೆ. ಭಾರತದಿಂದ ಹಿಂದಿರುಗಿದವರಿಗೆ ಫ್ರಾನ್ಸ್ ಹತ್ತು ದಿನಗಳ ನಿರ್ಬಂಧ ಹೇರಿದೆ. ಈಚೆಗೆ ಬ್ರಿಟನ್, ಮುಂಜಾಗ್ರತಾ ಕ್ರಮವಾಗಿ ಭಾರತವನ್ನು "ಕೆಂಪು ಪಟ್ಟಿ"ಗೆ ಸೇರಿಸಿ ವಿಮಾನ ಓಡಾಟವನ್ನು ನಿಷೇಧಿಸಿದೆ. ಹಾಂಗ್‌ಕಾಂಗ್ ಕೂಡ ಮಂಗಳವಾರ ಭಾರತದಿಂದ ಬರುವ ವಿಮಾನಗಳಿಗೆ 14 ದಿನಗಳ ಕಾಲ ನಿರ್ಬಂಧ ಹೇರಿದೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications