ಭಾರತದಿಂದ ಬರುವವರಿಗೆ ತಾತ್ಕಾಲಿಕ ನಿರ್ಬಂಧ ಹೇರಿದ ನ್ಯೂಜಿಲೆಂಡ್

ನ್ಯೂಜಿಲೆಂಡ್, ಏಪ್ರಿಲ್ 8: ಭಾರತದಿಂದ ಬಂದವರಿಂದ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಭಾರತದಿಂದ ಬರುವವರಿಗೆ ನ್ಯೂಜಿಲೆಂಡ್ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ.

ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆನ್ ತಿಳಿಸಿದ್ದಾರೆ. ತಮ್ಮ ಪ್ರಜೆಗಳನ್ನೂ ಒಳಗೊಂಡಂತೆ ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿರುವುದಾಗಿ ತಿಳಿಸಿದ್ದಾರೆ.

ಏಪ್ರಿಲ್ 11ರಿಂದ ಈ ನಿರ್ಬಂಧ ಜಾರಿಗೆ ಬರಲಿದೆ. ಏಪ್ರಿಲ್ 28ರವರೆಗೂ ಮುಂದುವರೆಯುವುದಾಗಿ ತಿಳಿದುಬಂದಿದೆ. ಪರಿಸ್ಥಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಈ ಕ್ರಮ ಅನಿವಾರ್ಯ ಎಂದು ತಿಳಿಸಿದ್ದಾರೆ.

 New Zealand Temporarily Suspends Entry For Travellers From India

ಭಾರತದಲ್ಲಿ ಕೊರೊನಾ; ಭಾರತದಲ್ಲಿ ಮಂಗಳವಾರ 1,15,736 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮಂಗಳವಾರ ಒಂದೇ ದಿನ 59,856 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಈವರೆಗೂ 1,17,92,135 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 630 ಮಂದಿ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+