ನೈಜೀರಿಯಾ ಶಾಲೆಯೊಂದರಲ್ಲಿ 300ಕ್ಕೂ ಹೆಚ್ಚು ಬಾಲಕಿಯರ ಅಪಹರಣ
ಲಾಗೋಸ್,ಫೆಬ್ರವರಿ 27: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಲ್ಲಿ 300ಕ್ಕೂ ಹೆಚ್ಚು ಬಾಲಕಿಯರನ್ನು ಕೆಲವು ಬಂದೂಕುಧಾರಿಗಳು ಅಪಹರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ ಎಂದು ನೈಜೀರಿಯಾದ ಅಧ್ಯಕ್ಷ ಮೊಹಮ್ಮದ್ ಬುಹಾರಿ ಅವರು ತಿಳಿಸಿದರು.
ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.

ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು ಹೇಳಿದ್ದಾರೆ.
ಬಾಲಕಿಯರನ್ನು ಅಪಹರಿಸಿದ ಬಳಿಕ ಕಾಡಿಗೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಡುವುದೇ ಅವರ ಟಾರ್ಗೆಟ್, ನಮಗೆ ಮಕ್ಕಳನ್ನು ಸುರಕ್ಷಿತವಾಗಿ ವಾಪಸ್ ಕರೆತರುವುದೇ ಮುಖ್ಯ.
ಕಳೆದ ವಾರ 42 ಮಂದಿಯನ್ನು ಅಪಹರಿಸಲಾಗಿದ್ದು ಅದರಲ್ಲಿ 27 ಮಂದಿ ಮಕ್ಕಳಿದ್ದರು.ಅವರನ್ನು ಇನ್ನೂ ಬಿಡುಗಡೆ ಮಾಡಿಲ್ಲ.ಮಧ್ಯರಾತ್ರಿ 1 ಗಂಟೆ ವೇಳೆಗೆ ಬಾಲಕಿಯರನ್ನು ಅಪಹರಿಸಲಾಗಿದೆ.
ಕೆಲವು ಗನ್‌ಮೆನ್‌ಗಳು ಸರ್ಕಾರಿ ಭದ್ರತಾ ಸಿಬ್ಬಂದಿಗಳಂತೆ ಬಟ್ಟೆ ಧರಿಸಿದ್ದರು.ವಾಹನದಲ್ಲಿ ಕುಳಿತುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಒತ್ತಡ ಹಾಕಿದ್ದರು.ಪೋಷಕರಿಗೆ ತಿಳಿದ ಬಳಿಕ ಅವರು ಶಾಲೆಗಳನ್ನು ಸುತ್ತುವರೆದಿದ್ದಾರೆ, ಆದರೆ ಆಗಲೇ ಬಾಲಕಿಯರನ್ನು ಅಪಹರಿಸಿ ಕರೆದೊಯ್ಯಲಾಗಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications