ಪಾಕಿಸ್ತಾನ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ; ಏ.3ರಂದು ಸಂಸತ್ತಿನಲ್ಲಿ ಮತದಾನ

ಇಸ್ಲಮಾಬಾದ್, ಮಾರ್ಚ್ 29: ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಂಬಂಧಿಸಿದಂತೆ ಏಪ್ರಿಲ್ 3ರಂದು ರಾಷ್ಟ್ರದ ಸಂಸತ್ತಿನಲ್ಲಿ ಮತದಾನ ನಡೆಯಲಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಮಂಗಳವಾರ ಘೋಷಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಮಾಹಿತಿ ನೀಡಿದರು. ಮಾರ್ಚ್ 31ರಂದು ಪಾಕಿಸ್ತಾನದ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ. ಅದರ ಮೇಲೆ ಏಪ್ರಿಲ್ 3ರಂದು ಮತದಾನ ನಡೆಯಲಿದೆ ಎಂದು ಸಚಿವ ಶೇಖ್ ರಶೀದ್ ಅಹ್ಮದ್ ತಿಳಿಸಿದ್ದಾರೆ.

ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು. ಇದೇ ಸಮಯದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಆಡಳಿತಾರೂಢ ಪಿಟಿಐ ಸರ್ಕಾರಕ್ಕೆ ಬೆಂಬಲ ನೀಡುವ ವಿಷಯದಲ್ಲಿ ಪಿಎಂಎಲ್-ಕ್ಯೂ ಜೊತೆಗೆ ಯಾವುದೇ ಕಿತ್ತಾಟವಿಲ್ಲ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ.

No-confidence motion against PM Imran Khan: Voting in Pakistan parliament on April 3rd

ಸರ್ಕಾರಕ್ಕೆ ಬೆಂಬಲ ಸಿಗುವ ಭರವಸೆ:

PML-Q ನಿಲುವನ್ನು ಶ್ಲಾಘಿಸಿದ ರಶೀದ್, MQM-P ಸಹ ಸರ್ಕಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದರು. ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ ಎಂದು ಶೇಖ್ ರಶೀದ್ ಹೇಳಿದರು. ಬಂಧಿತ ಉಗ್ರರನ್ನು ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಶಾಂತಿಯುತವಾಗಿ ಸಾರ್ವಜನಿಕ ಸಭೆ ನಡೆಸಿದ ಬಳಿಕ ಇದೀಗ ಭದ್ರತೆಗಾಗಿ ಹಾಕಲಾಗಿದ್ದ ಕಂಟೈನರ್‌ಗಳನ್ನು ತೆಗೆಯಲಾಗಿದ್ದು, ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ ಎಂದು ಗೃಹ ಸಚಿವರು ತಿಳಿಸಿದರು. ಪ್ರಧಾನಮಂತ್ರಿ ಸಮಾವೇಶದಲ್ಲಿ ಬೃಹತ್ ಸಂಖ್ಯೆಯಲ್ಲಿ ನೆರೆದ ಜನಸಮೂಹವನ್ನು ನೋಡಿದಾಗ ಇಡೀ ದೇಶವೇ ಇಮ್ರಾನ್ ಖಾನ್ ಅವರ ಪರವಾಗಿ ನಿಲ್ಲುತ್ತದೆ ಎಂದು ಸೂಚಿಸುತ್ತದೆ ಎಂಬುದಾಗಿ ವರದಿಯಾಗಿದೆ.

ವಿಧಾನಸಭೆಯ 161 ಸದಸ್ಯರು ಪಿಎಂ ಖಾನ್ ವಿರುದ್ಧದ ನಿರ್ಣಯದ ಪರವಾಗಿ ಮತ ಚಲಾಯಿಸಿದ್ದು, ಮುಂದಿನ ಅಧಿವೇಶನವು ಮಾರ್ಚ್ 31ರಂದು ಭಾರತೀಯ ಕಾಲಮಾನದ ಪ್ರಕಾರ, ಸಂಜೆ 4:30 ರಿಂದ ಆರಂಭವಾಗಲಿದೆ ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನ ಸಂಸತ್ ಲೆಕ್ಕಾಚಾರ ಹೇಗಿದೆ?:

ಪಾಕಿಸ್ತಾನದ ಸಂಸತ್ತಿನಲ್ಲಿ 342 ಸದಸ್ಯ ಬಲದ ಪೈಕಿ ಬಹುಮತಕ್ಕೆ 172 ಸದಸ್ಯರು ಬೆಂಬಲ ಬೇಕಾಗುತ್ತದೆ. ಈ ನಿರ್ಣಯವನ್ನು 172 ಸದಸ್ಯರು ಒಟ್ಟುಗೂಡಿ ಸರ್ಕಾರವನ್ನು ಉರುಳಿಸಲಿದ್ದಾರೆ ಎಂದು ಪ್ರತಿಪಕ್ಷಗಳು ವಿಶ್ವಾಸ ವ್ಯಕ್ತಪಡಿಸಿವೆ.

ಕಳೆದ 2018ರಲ್ಲಿ ಇಮ್ರಾನ್ ಖಾನ್ "ನಯಾ ಪಾಕಿಸ್ತಾನ" ಭರವಸೆಯೊಂದಿಗೆ ಅಧಿಕಾರಕ್ಕೆ ಬಂದರು. ಆದರೆ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಆಡಳಿತ ನಿರ್ವಹಣೆಯಲ್ಲಿ ಅವರು ವಿಫಲವಾದರು. ಪ್ರತಿಪಕ್ಷಗಳು ಅವರ ಸರ್ಕಾರದ ವಿರುದ್ಧ ಸಿಡಿದೆದ್ದವು.

69 ವರ್ಷದ ಇಮ್ರಾನ್ ಖಾನ್ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದಾರೆ. 155 ಸದಸ್ಯರನ್ನು ಹೊಂದಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧಿಕಾರದಲ್ಲಿ ಉಳಿಯಲು ಕನಿಷ್ಠ 172 ಶಾಸಕರ ಅಗತ್ಯವಿದೆ. ಈ ಹಂತದಲ್ಲಿ ಯಾವುದೇ ಪಾಲುದಾರರು ಪಕ್ಷವನ್ನು ಬದಲಾಯಿಸಲು ನಿರ್ಧರಿಸಿದರೆ ಅವರನ್ನು ತೆಗೆದುಹಾಕಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+