Nobel Economics Prize 2024: ಅರ್ಥಶಾಸ್ತ್ರ ನೊಬೆಲ್; ಮೂವರಿಗೆ ತಜ್ಞರಿಗೆ ಪ್ರಶಸ್ತಿಯ ಗರಿ
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಮೂರು ಜನ ಅರ್ಥಶಾಸ್ತ್ರಜ್ಞರು ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೊಬೆಲ್ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ. ಅರ್ಥಶಾಸ್ತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡುವ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಅಂದರೆ 2024ನೇ ಸಾಲಿನ ಮೂವರು ತಜ್ಞರಿಗೆ ನೀಡಲಾಗಿದೆ.
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸೋಮವಾರ (ಅಕ್ಟೋಬರ್ 14) ಘೋಷಿಸಲಾಗಿದೆ. ಅರ್ಥಶಾಸ್ತ್ರಕ್ಕೆ ಸಂಬಂಧಿಸಿದಂತೆ ಈ ಬಾರಿ (2024ನೇ) ಸಾಲಿನಲ್ಲಿ ಡೇರಾನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಹಾಗೂ ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೀಡಲಾಗಿದೆ. ಅರ್ಥಶಾಸ್ತ್ರದಲ್ಲಿ ಮೂರು ಜನ ತಜ್ಞರಿಗೆ ಈ ಪ್ರಶಸ್ತಿ ನೀಡುವ ವಿಚಾರವನ್ನು ಸೋಮವಾರ ದಿ. ದಿ ನೊಬೆಲ್ ಪ್ರಶಸ್ತಿ ಸೋಷಿಯಲ್ ಮೀಡಿಯಾ ಅಧಿಕೃತ ಖಾತೆಯಲ್ಲಿ ಪ್ರಕಟಿಸಲಾಗಿದೆ.

ಇವರು ರಾಯಲ್ ಸ್ಪೀಡಿಶ್ ಅಕಾಡೆಮಿ ಆಫ್ ಸೈನ್ಸ್ ಆರ್ಥಿಕ ಕ್ಷೇತ್ರದಲ್ಲಿ ನೀಡಿರುವ ಕೊಡಗೆಯನ್ನು ಗುರುತಿಸಿ, 2024ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ. "ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಅಭಿವೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ" ಎನ್ನುವ ವಿಷಯದ ಅಧ್ಯಯನಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಅಕ್ಟೋಬರ್ 7ರಿಂದ ಈ ಸಾಲಿನ ಪ್ರಶಸ್ತಿ ಘೋಷಣೆ: ಸಾಹಿತ್ಯ ಹಾಗೂ ಅರ್ಥಶಾಸ್ತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ನೊಬೆಲ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇನ್ನು 2024ನೇ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 7ರಿಂದ ಪ್ರಕಟಿಸಲಾಗುತ್ತಿದೆ. ಇನ್ನು ಈಗಾಗಲೇ ರಾಸಾಯನಶಾಸ್ತ್ರ, ಭೌತಶಾಸ್ತ್ರ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದೀಗ ಅರ್ಥಶಾಸ್ತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಆರ್ಥಿಕ ವಿಜ್ಞಾನ ಕ್ಷೇತ್ರದ ಆಲ್‌ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥವಾಗಿ ಸ್ವೆರಿಜಸ್ ರಿಕ್ಸ್ ಬ್ಯಾಂಕ್ (ನೊಬೆಲ್) ಪ್ರಶಸ್ತಿಯನ್ನು ಮೂವರು ಆರ್ಥಿಕ ತಜ್ಞರಿಗೆ ಘೋಷಿಸಲಾಗಿದೆ.
ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು: ನೊಬೆಲ್ ಪ್ರಶಸ್ತಿ ಎನ್ನುವುದು ಜಗತ್ತಿನ ಪ್ರಮುಖ ಹಾಗೂ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು ಎಂದೇ ಖ್ಯಾತಿಯನ್ನು ಗಳಿಸಿದೆ. ನೊಬೆಲ್ ಪ್ರಶಸ್ತಿಯನ್ನು ಆರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ. ರಸಾಯನ ವಿಜ್ಞಾನ, ಭೌತವಿಜ್ಞಾನ, ವೈದ್ಯ ವಿಜ್ಞಾನ, ಶಾಂತಿ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ಹಾಗೂ ಸಾಧನೆ ಮಾಡಿದವರನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಇನ್ನು ನೊಬೆಲ್ ಪ್ರಶಸ್ತಿಯನ್ನು 1901ರಲ್ಲಿ ಪ್ರದಾನ ಮಾಡಲು ಪ್ರಾರಂಭಿಸಲಾಗಿದೆ. ವಿಜ್ಞಾನಿ ಆಲ್ಫ್ರೆಡ್ ನೊಬೆಲ್ ಅವರು ಯಾವ ಕ್ಷೇತ್ರಗಳಲ್ಲಿ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವ ಬಗ್ಗೆ ಉಯಿಲು ಬರೆದಿದ್ದರು. ಇನ್ನು ಆಲ್ಫ್ರೆಡ್ ನೊಬೆಲ್ ಅವರು ಈ ಪ್ರಶಸ್ತಿ ಪ್ರದಾನ ಮಾಡುವುದಕ್ಕೆ ಬರೋಬ್ಬರಿ 13 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿರಿಸಿದ್ದಾರೆ. ಇನ್ನು ಈ ಬಾರಿಯ ನೊಬೆಲ್ ಪ್ರಶಸ್ತಿಯನ್ನು ಹಲವು ಗಣ್ಯರಿಗೆ ನೀಡಲಾಗಿದೆ. ಇನ್ನು ಈ ಬಾರಿ ನಾಲ್ಕು ಪ್ರಮುಖ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದ್ದು, ಇನ್ನು ಎರಡು ಕ್ಷೇತ್ರದಲ್ಲಿ ಪ್ರಶಸ್ತಿ ಘೋಷಿಸುವುದು ಬಾಕಿ ಇದೆ.












Click it and Unblock the Notifications