Nobel Peace Prize 2023: ಇರಾನ್ ಹೋರಾಟಗಾರ್ತಿಗೆ ಜಾಗತಿಕ ಮನ್ನಣೆ!
ಜಗತ್ತೇ ಕಾಯುತ್ತಿದ್ದ ಪ್ರಶಸ್ತಿಯ ಘೋಷಣೆ ಆಗಿದೆ, 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನ ಯಾರು ಪಡೆಯುತ್ತಾರೆ ಎಂಬ ಕುತೂಹಲ ಕೊನೆಯಾಗಿದೆ. ಅಂದಹಾಗೆ ಇರಾನ್‌ನ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ, 2023ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಈ ಮೂಲಕ ನೊಬೆಲ್ ಶಾಂತಿ ಪುರಸ್ಕಾರ ಮತ್ತೊಮ್ಮೆ ಜಗತ್ತಿನ ಗಮನ ಸೆಳೆದಿದೆ.
ಇರಾನ್‌ನಲ್ಲಿ 22 ವರ್ಷದ ಯುವತಿ ಸಾವಿಗೆ ಸಂಬಂಧಿಸಿ ಇತ್ತೀಚೆಗೆ ಹಿಂಸಾತ್ಮಕ ಪ್ರತಿಭಟನೆ ಆರಂಭವಾಗಿತ್ತು. ಆಗ ಇರಾನ್ ಪೂರ್ತಿ ಹೋರಾಟಗಳು ಶುರುವಾಗಿದ್ದವು. ಇದೇ ನರ್ಗೀಸ್ ಮೊಹಮ್ಮದಿ ಇರಾನ್ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಈ ಕಾರಣಕ್ಕಾಗಿ ನರ್ಗೀಸ್ ಮೊಹಮ್ಮದಿ ಅವರನ್ನು ಕಂಬಿ ಹಿಂದೆ ತಳ್ಳಿದೆ ಅಲ್ಲಿನ ಸರ್ಕಾರ. ಆದ್ರೆ ಇದೀಗ 'ನೊಬೆಲ್' ಕಮಿಟಿ ಮಹತ್ವದ ನಿರ್ಧಾರ ಪ್ರಕಟಿಸಿದೆ. 'ನೊಬೆಲ್' ಪ್ರಶಸ್ತಿಯನ್ನು ವಿವಿಧ ವಿಭಾಗದಲ್ಲಿ ನೀಡಲಾಗುತ್ತೆ. ಬೇರೆ ಬೇರೆ ವಿಭಾಗದಲ್ಲಿ ನೀಡುವ ನೊಬೆಲ್ ಪ್ರಶಸ್ತಿ ಒಂದು ತೂಕವಾದ್ರೆ, ನೊಬೆಲ್ ಶಾಂತಿ ಪ್ರಶಸ್ತಿ ಗತ್ತು ಬೇರೆ ರೀತಿ ಇರುತ್ತದೆ. ಅಷ್ಟು ತೂಕದ ಪುರಸ್ಕಾರ ಇದು.

ನರ್ಗೀಸ್ ಮೊಹಮ್ಮದಿ ಬೆಂಬಲಕ್ಕೆ ಜಗತ್ತು
ಇನ್ನು ಇರಾನ್‌ನಲ್ಲಿ ಮಹಿಳೆಯರು ಹೋರಾಟ ಆರಂಭಿಸಿದ ನಂತರ, ಅಲ್ಲಿನ ಮಹಿಳೆಯರ ಮೇಲೆ ಪೊಲೀಸರು & ಭದ್ರತಾ ಸಿಬ್ಬಂದಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಇಡೀ ಜಗತ್ತು ಇರಾನ್ ಮಹಿಳೆಯರ ಹೋರಾಟದ ಪರವಾಗಿ ನಿಂತು ಧ್ವನಿಯಾಗಿತ್ತು. ಇದೀಗ ಇರಾನ್ ಮಹಿಳಾ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದ ನರ್ಗೀಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ 'ನೊಬೆಲ್' ಶಾಂತಿ ಪ್ರಶಸ್ತಿ ಪ್ರಕಟಿಸಿದೆ ನೊಬೆಲ್ ಕಮಿಟಿ. ಇದು ಮತ್ತೆ ಜಗತ್ತಿನ ಗಮನ ಇರಾನ್ ಮೇಲೆ ಕೇಂದ್ರೀಕರಿಸುವಂತೆ ಮಾಡಿದೆ.
BREAKING NEWS
— The Nobel Prize (@NobelPrize) October 6, 2023
The Norwegian Nobel Committee has decided to award the 2023 #NobelPeacePrize to Narges Mohammadi for her fight against the oppression of women in Iran and her fight to promote human rights and freedom for all.#NobelPrize pic.twitter.com/2fyzoYkHyf
ನೊಬೆಲ್ ಪ್ರಶಸ್ತಿಯ ಇತಿಹಾಸ ಏನು?
1901 ರಿಂದ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ. ಸಂಶೋಧಕ ಆಲ್ಫ್ರೆಡ್ ನೊಬೆಲ್ ಆಶಯಕ್ಕೆ ಅನುಗುಣವಾಗಿ ಜಗತ್ತಿನ ಪ್ರಗತಿಗೆ ಕಾರಣವಾದ ಕಾರ್ಯಕ್ಕೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷ ಬಹುಮಾನ ವಿಜೇತರನ್ನು ಅಕ್ಟೋಬರ್ 2ರ ಸೋಮವಾರದಿಂದ ಅಕ್ಟೋಬರ್ 9ರ ತನಕ ಪ್ರತಿದಿನ ಪ್ರಕಟಿಸಲಾಗುತ್ತಿದೆ. ಈ ವರ್ಷದ ನೊಬೆಲ್ ಪ್ರಶಸ್ತಿಗಳನ್ನು ಗೆಲ್ಲುವವರಿಗೆ 11 ಮಿಲಿಯನ್ ಸ್ವೀಡಿಷ್ ಕ್ರೌನ್ ಸಿಗಲಿದೆ, ಅಮೆರಿಕದ ಡಾಲರ್‌ನಲ್ಲಿ 9,86,000ನಷ್ಟು ಆಗುತ್ತದೆ. ಇದು ಸುಮಾರು 8 ಕೋಟಿ ರೂಪಾಯಿ ಸಮ. ವೈದ್ಯಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ ವಿಭಾಗದ ನಂತರ ಇದೀಗ ನೊಬೆಲ್ ಶಾಂತಿ ಪ್ರಶಸ್ತಿಯನ್ನ ಪ್ರಕಟಿಸಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications