Nobel Prize in Chemistry : ಮೂವರಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟ
ನವದೆಹಲಿ, ಅಕ್ಟೋಬರ್ 5: ರಸಾಯನಶಾಸ್ತ್ರದಲ್ಲಿ ಈ ವರ್ಷದ ನೊಬೆಲ್ ಪ್ರಶಸ್ತಿಯನ್ನು ಕ್ಯಾರೊಲಿನ್ ಆರ್. ಬರ್ಟೊಝಿ, ಮಾರ್ಟೆನ್ ಮೆಲ್ಡಾಲ್ ಮತ್ತು ಕೆ. ಬ್ಯಾರಿ ಶಾರ್ಪ್ಲೆಸ್ ಅವರಿಗೆ ಅಣುಗಳನ್ನು ಒಟ್ಟಿಗೆ ಜೋಡಣೆ ಮಾಡುವ ವಿಧಾನವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ನೀಡಲಾಗಿದೆ.
ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾನ್ಸ್ ಎಲೆಗ್ರೆನ್ ಅವರು ಬುಧವಾರ ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿರುವ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್‌ನಲ್ಲಿ ವಿಜೇತರನ್ನು ಘೋಷಿಸಿದರು. ನಿಯಾಂಡರ್ತಲ್ ಡಿಎನ್‌ಎ ರಹಸ್ಯಗಳನ್ನು ಬಹಿರಂಗ ಮಾಡಿದ ವಿಜ್ಞಾನಿಯನ್ನು ಗೌರವಿಸುವ ವೈದ್ಯಕೀಯ ಪ್ರಶಸ್ತಿಯೊಂದಿಗೆ ಒಂದು ವಾರದ ನೊಬೆಲ್ ಪ್ರಶಸ್ತಿ ಘೋಷಣೆಗಳು ಸೋಮವಾರ ಪ್ರಾರಂಭವಾದವು. ಚಿಕ್ಕ ಕಣಗಳು ಬೇರ್ಪಟ್ಟರೂ ಪರಸ್ಪರ ಸಂಪರ್ಕವನ್ನು ಉಳಿಸಿಕೊಳ್ಳಬಲ್ಲವು ಎಂಬುದನ್ನು ತೋರಿಸಿಕೊಟ್ಟ ಮೂವರು ವಿಜ್ಞಾನಿಗಳು ಮಂಗಳವಾರ ಭೌತಶಾಸ್ತ್ರದಲ್ಲಿ ಜಂಟಿಯಾಗಿ ಬಹುಮಾನವನ್ನು ಗೆದ್ದಿದ್ದಾರೆ.

2022 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮತ್ತು ಅರ್ಥಶಾಸ್ತ್ರ ಪ್ರಶಸ್ತಿಯನ್ನು ಅಕ್ಟೋಬರ್ 10ರಂದು ಪ್ರಕಟಿಸಲಾಗುತ್ತದೆ. ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ 2022ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಕ್ಯಾರೊಲಿನ್ ಆರ್. ಬರ್ಟೊಝಿ, ಮಾರ್ಟೆನ್ ಮೆಲ್ಡಾಲ್ ಮತ್ತು ಕೆ. ಬ್ಯಾರಿ ಶಾರ್ಪ್ಲೆಸ್ ಅವರಿಗೆ "ಕ್ಲಿಕ್ ಕೆಮಿಸ್ಟ್ರಿ ಮತ್ತು ಬಯೋಆರ್ಥೋಗೋನಲ್ ಕೆಮಿಸ್ಟ್ರಿ ಅಭಿವೃದ್ಧಿಗಾಗಿ" ನೀಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿದೆ.

"ಕಳೆದ 25 ವರ್ಷಗಳಲ್ಲಿ ನನ್ನ ಪ್ರಯೋಗಾಲಯದಿಂದ ಹಲವಾರು ತರಬೇತಿ ಪಡೆದವರು ಮಾಡಿದ ಎಲ್ಲಾ ಕೆಲಸಗಳನ್ನು ಗುರುತಿಸಲು ಮತ್ತು ನಾನು ಎಷ್ಟು ಅದೃಷ್ಟಶಾಲಿಯಾಗಿದ್ದೇನೆ ಎಂಬುದನ್ನು ಪ್ರತಿಬಿಂಬಿಸಲು ಮತ್ತು ಅವರೊಂದಿಗೆ ಆಚರಣೆಯಲ್ಲಿ ಪಾಲ್ಗೊಳ್ಳಲು ಇದು ನನಗೆ ಒಂದು ಅವಕಾಶವಾಗಿದೆ ಎಂದು ಕ್ಯಾರೊಲಿನ್ ಆರ್. ಬರ್ಟೊಝಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications