Vijay Mallya: ಸೊಸೆ ತಂದ ಸೌಭಾಗ್ಯ: ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್
ಮಗನ ಮದುವೆ ಖುಷಿಯಲ್ಲಿದ್ದ ಉದ್ಯಮಿ ವಿಜಯ್ ಮಲ್ಯಗೆ ಸಂಕಷ್ಟವೊಂದು ಎದುರಾಗಿದೆ. ಬ್ಯಾಂಕ್‌ಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯಗೆ ಈಗ ಆತಂಕ ಶುರುವಾಗಿದೆ.
ಸೊಸೆ ತಂದ ಸೌಭಾಗ್ಯವೋ ಏನೋ ಗೊತ್ತಿಲ್ಲ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (ಊಒಬಿ)ಗೆ ಸಂಬಂಧಿಸಿದ 180 ಕೋಟಿ ರೂಪಾಯಿ ಸಾಲ ಮರು ಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯಗೆ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಅದನ್ನು ಹಿಂದಿರುಗಿಸದೇ ವಿದೇಶಕ್ಕೆ ಪರಾರಿಯಾಗಿದ್ದಾರೆ. ಹೀಗಾಗಿ ಜೂನ್ 29ರಂದು ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಆದರೆ ಅವರು ತಲೆಮರಿಸಿಕೊಂಡಿದ್ದರಿಂದ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.
68 ವರ್ಷದ ವಿಜಯ್ ಮಲ್ಯ ವಿರುದ್ಧ ಬೇರೆ ಬೇರೆ ಪ್ರಕರಣಗಳಲ್ಲಿ ಈ ಹಿಂದೆ ಜಾಮೀನುರಹಿತ ವಾರಂಟ್ಗಳನ್ನು ಹೊರಡಿಸಲಾಗಿದೆ. ಮುಂಬೈನ ಸಿಬಿಐ ಕೋರ್ಟ್ ಈ ಹಿನ್ನೆಲೆಯಲ್ಲಿ ಓಪನ್ ಎಂಡೆಡ್ ವಾರಂಟ್ ಹೊರಡಿಸಿದೆ. ಅಂದರೆ, ಗಡುವು ಇಲ್ಲದ ವಾರಂಟ್ ಇದಾಗಿದೆ. ಹೆಚ್ಚು ಗಂಭೀರ ಸ್ವರೂಪದ ವಾರಂಟ್ ಇದಾಗಿದೆ. ಹೀಗಾಗಿ ಇದೆಲ್ಲವೂ ಸೊಸೆ ಕಾಲ್ಗುಣ ಎನ್ನುತ್ತಿದ್ದಾರೆ ನೆಟ್ಟಿಗರು.
ಸಿದ್ಧಾರ್ಥ ಮಲ್ಯ ಮದುವೆ...
ಹರ್ಟ್‌ಫೋರ್ಡ್‌ಶೈರ್‌ನಲ್ಲಿರುವ ವಿಜಯ್ ಮಲ್ಯ ಅವರ ಐಷಾರಾಮಿ ಎಸ್ಟೇಟ್‌ನಲ್ಲಿ ಸಿದ್ಧಾರ್ಥ ಮಲ್ಯ ತಮ್ಮ ಗೆಳತಿ ಜಾಸ್ಮಿನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸುದ್ದಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು. ಅಷ್ಟಕ್ಕೂ ಯಾರೀ ಜಾಸ್ಮಿನ್..?

ಯುನೈಟೆಡ್ ಸ್ಟೇಟ್ಸ್‌ನಲ್ಲಿ ವಾಸಿಸುತ್ತಿರುವ ಜಾಸ್ಮಿನ್, ತನ್ನ ಇನ್‌ಸ್ಟಾಗ್ರಾಮ್ ಫೀಡ್‌ನಲ್ಲಿ ತನ್ನ ಪ್ರಯಾಣದ ಸಾಹಸಗಳನ್ನು ಮತ್ತು ಪ್ರಕೃತಿಯ ಮೇಲಿನ ಪ್ರೀತಿಯನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ಜಾಸ್ಮಿನ್ ಮತ್ತು ಸಿದ್ಧಾರ್ಥ ಅವರು ಅಕ್ಟೋಬರ್ 2023 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇಬ್ಬರು ಒಂದು ವರ್ಷದಿಂದ ಡೇಟಿಂಗ್‌ನಲ್ಲಿದ್ದರು. ಇತ್ತೀಚೆಗಷ್ಟೇ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಜೋಡಿ ಎರಡು ರೀತಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೊದಲು ಕ್ರಿಶ್ಚಿಯನ್ ಮಾದರಿಯಲ್ಲಿ ಮದುವೆಯಾಗಿ ಬಳಿಕ ಸಾಂಪ್ರದಾಯಿಕ ಹಿಂದೂ ಮಾದರಿಯಲ್ಲಿ ಸಪ್ತಪದಿ ತುಳಿದಿದ್ದಾರೆ.
ವಿಜಯ್ ಮಲ್ಯ ಮೇಲಿರುವ ಆರೋಪಗಳು...
ವರ ಸಿದ್ಧಾರ್ಥ ಮಲ್ಯ ತಂದೆ ವಿಜಯ್ ಮಲ್ಯ ಅವರು 180 ಕೋಟಿಗೂ ಅಧಿಕ ಸಾಲ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಭಾರತ ಬಿಟ್ಟು ಪರಾರಿಯಾಗಿದ್ದಾರೆ. ಇತ್ತ ಮಾಜಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಖ್ಯಸ್ಥ ಲಲಿತ್ ಮೋದಿ ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಮತ್ತು ಇತರ ಪ್ರಕರಣಗಳ ಆರೋಪ ಹೊತ್ತು ದೇಶ ಬಿಟ್ಟು ಪರಾರಿಯಾಗಿದ್ದಾರೆ.
ಐಪಿಎಲ್ 2010 ರ ನಂತರ ಲಲಿತ್ ಮೋದಿ ಅವರನ್ನು ಬಿಸಿಸಿಐನಿಂದ ಅಮಾನತುಗೊಳಿಸಲಾಯಿತು. ವ್ಯವಹಾರಗಳಲ್ಲಿ ದುರುಪಯೋಗ ಮತ್ತು ಹಣಕಾಸಿನ ಅಕ್ರಮಗಳ ಆರೋಪ ಅವರ ಮೇಲಿದೆ. ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವ ಕ್ರೀಡಾ ಸಮೂಹದ (ಡಬ್ಲ್ಯುಎಸ್‌ಜಿ) ಅಧಿಕಾರಿಗಳೊಂದಿಗೆ ಶಾಮೀಲಾಗಿ 753 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆರೋಪಿಸಿದೆ.
68 ವರ್ಷದ ವಿಜಯ್ ಮಲ್ಯ ವಿರುದ್ಧ ಬೇರೆ ಬೇರೆ ಪ್ರಕರಣಗಳಲ್ಲಿ ಈ ಹಿಂದೆ ಜಾಮೀನುರಹಿತ ವಾರಂಟ್ಗಳನ್ನು ಹೊರಡಿಸಲಾಗಿದೆ. ಮುಂಬೈನ ಸಿಬಿಐ ಕೋರ್ಟ್ ಈ ಹಿನ್ನೆಲೆಯಲ್ಲಿ ಓಪನ್ ಎಂಡೆಡ್ ವಾರಂಟ್ ಹೊರಡಿಸಿದೆ. ಅಂದರೆ, ಗಡುವು ಇಲ್ಲದ ವಾರಂಟ್ ಇದಾಗಿದೆ. ಹೆಚ್ಚು ಗಂಭೀರ ಸ್ವರೂಪದ ವಾರಂಟ್ ಇದಾಗಿರುತ್ತದೆ. ಹೀಗಾಗಿ ಮಗನ ಮದುವೆಯ ಖುಷಿಯಲ್ಲಿದ್ದ ವಿಜಯ್ ಮಲ್ಯಗೆ ಈಗ ಸಂಕಷ್ಟ ಶುರುವಾಗಿದ್ದು ಇದು ಸೊಸೆ ತಂದ ಸೌಭಾಗ್ಯ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.












Click it and Unblock the Notifications