ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಭಾರತೀಯ ಸಂಜಾತೆ!

ನ್ಯೂಯಾರ್ಕ್, ಡಿಸೆಂಬರ್ 5; 2020ರಲ್ಲಿ ನಡೆಯಲಿರುವ ಪ್ರತಿಷ್ಠಿತ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ತೀವ್ರ ಕುತೂಹಲ ಕೆರಳಿಸಿದ್ದ ಭಾರತೀಯ ಸಂಜಾತೆ, ಅಮೆರಿಕ ರಾಜಕಾರಣಿ ಕಮಲಾ ಹ್ಯಾರಿಸ್, ಭಾರತೀಯರೂ ಸೇರಿದಂತೆ ತಮ್ಮ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಅಮೆರಿಕದ ಸೆನೆಟರ್ ಆಗಿರುವ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಪ್ರಮುಖ ರಾಜಕಾರಣಿಯಾಗಿ ಅಮೆರಿಕದಲ್ಲಿ ಮಿಂಚುತ್ತಿದ್ದಾರೆ. ಬರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರೇ ಘೋಷಿಸಿಕೊಂಡಿದ್ದರು. ಆದರೆ, ಈಗ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.

'ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ಚುನಾವಣೆಗೆ ಸ್ಪರ್ಧಿಸಲು ನನಗೆ ಆರ್ಥಿಕ ಸಂಪನ್ಮೂಲದ ಕೊರತೆ ಇದೆ. ಈ ಬಗ್ಗೆ ಸಾಕಷ್ಟು ಯೋಚಿಸಿ ನಿರ್ಧಾರ ಮಾಡಿದ್ದೇನೆ. ಇದು ನನ್ನ ಬೆಂಬಲಿಗರಿಗೆ ಆಘಾತ ತಂದಿರುತ್ತದೆ. ಇದಕ್ಕಾಗಿ ನಾನು ವಿಷಾದಿಸುತ್ತೇನೆ. ಆದರೆ, ಅಮೆರಿಕನ್ನರ ಪರವಾಗಿ ನನ್ನ ಹೋರಾಟ ಮುಂದುವರೆಯುತ್ತದೆ' ಎಂದು ಅವರು ತಮ್ಮ ಟ್ವಿಟ್ ನಲ್ಲಿ ತಿಳಿಸಿದ್ದಾರೆ.

NRI American Senator Kamala Harris Quits Americas President Election

ಕಮಲಾ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರು ತಮಿಳುನಾಡು ಮೂಲದವರು. ತಂದೆ ಅಮೆರಿಕನ್. ಕಮಲಾ ಅಮೆರಿಕದ ಡೆಮಾಕ್ರಟಿಕ್ ಪಕ್ಷದಲ್ಲಿ ಗುರುತಿಸಿಕೊಂಡು ಅಲ್ಲಿನ ಪ್ರಮುಖ ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಟೀಕಾಕಾರರೂ ಹೌದು. ಭಾರತೀಯ ಮೂಲದ ಮಹಿಳೆಯೊಬ್ಬರು ಅಮೆರಿಕ ಅಧ್ಯಕ್ಷೆಯಾಗುತ್ತಾರೆ ಎನ್ನುವ ಆಶಾಭಾವನೆ ಇದೀಗ ಕರಗಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+