ಸಿನ್ಸಿನಾಟಿ ನೈಟ್ ಕ್ಲಬ್ ಶೂಟೌಟ್, ಒಬ್ಬ ಸಾವು, 14 ಜನರಿಗೆ ಗಾಯ
ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿ ನಗರದ ನೈಟ್ ಕ್ಲಬ್ ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, 14 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿನ್ಸಿನಾಟಿ, ಮಾರ್ಚ್ 26: ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿರುವ ನೈಟ್ ಕ್ಲಬ್ ನಲ್ಲಿ ಗುಂಡಿನ ದಾಳಿ ನಡೆದಿದ್ದು, ಓರ್ವ ವ್ಯಕ್ತಿ ಮೃತಪಟ್ಟು, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ಬೆಳಗಿನ ಜಾವ(05.30 GMT) ಕ್ಯಾಮಿಯೋ ನೈಟ್ ಕ್ಲಬ್ನಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸಿನ್ಸಿನಾಟಿ ಪೊಲೀಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಆತನ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸ್ ಮುಖ್ಯಸ್ಥ ತಿಳಿಸಿದರು.

ಘಟನಾ ಸ್ಥಳದಲ್ಲಿದ್ದವರ ವಿಚಾರಣೆ ನಡೆಸಲಾಗಿದೆ. ಘಟನೆಯಲ್ಲಿ 27 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದು ಉಗ್ರರ ಕೃತ್ಯ ಎಂದು ಹೇಳಲು ಯಾವುದೇ ಸಾಕ್ಷಿ ಸಿಕ್ಕಿಲ್ಲ. ಗಾಯಗೊಂಡವರ ಪೈಕಿ ಒಬ್ಬರ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಸಿನ್ಸಿನಾಟಿ ಮೇಯರ್ ಜಾನ್ ಕ್ರಾನ್ಲೆ ಹೇಳಿದ್ದಾರೆ.












Click it and Unblock the Notifications