• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ: ಓರ್ವ ಬಂಧನ

|

ಇಸ್ಲಾಮಾಬಾದ್, ಅಕ್ಟೋಬರ್ 12:ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು ಓರ್ವನನ್ನು ಬಂಧಿಸಲಾಗಿದೆ.

ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಗ್ರಾಮದಲ್ಲಿರುವ ಹಿಂದೂ ದೇವಾಲಯದ ಮೂರ್ತಿಗಳನ್ನು ಮೊಹಮ್ಮದ್ ಇಸ್ಮಾಯಿಲ್ ಎಂಬ ವ್ಯಕ್ತಿ ಧ್ವಂಸ ಮಾಡಿದ್ದಾನೆ ಎಂದು ಅಶೋಕ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

ದೇವಸ್ಥಾನ ಭೂ ವಿವಾದ: ಅರ್ಚಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ

ಈ ಘಟನೆ ಶನಿವಾರ ನಡೆದಿದ್ದು ಪೊಲೀಸರು ಕೇಸು ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ ಎಂದು ಅಲ್ಲಿನ ಪತ್ರಿಕೆ ವರದಿ ಮಾಡಿದೆ.

ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬದಿನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಮಾನಸಿಕ ಸ್ಥಿರತೆ ಇದ್ದು, ಉದ್ದೇಶಪೂರ್ವಕವಾಗಿ ದೇವರ ಮೂರ್ತಿಗಳನ್ನು ಧ್ವಂಸ ಮಾಡಿದ್ದಾನೆಯೇ ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಸಿಂಧ್ ಪ್ರಾಂತ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಹಿಂದೂಗಳ ಮೇಲೆ ಆಗಾಗ ದಾಳಿಗಳು ನಡೆಯುತ್ತಲೇ ಇವೆ.ಬದಿನ್ ಹಿರಿಯ ಎಸ್ಪಿ ಶಬೀರ್ ಸೆತರ್, ಘಟನೆ ಬಗ್ಗೆ ವರದಿ ಕೇಳಿದ್ದಾರೆ.

ಪಾಕಿಸ್ತಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು ಅಲ್ಲಿ ಅಧಿಕೃತ ಮಾಹಿತಿ ಪ್ರಕಾರ, 75 ಲಕ್ಷ ಹಿಂದೂಗಳು ನೆಲೆಸಿದ್ದಾರೆ. ಅವರಲ್ಲಿ ಬಹುತೇಕರು ಸಿಂಧ್ ಪ್ರಾಂತ್ಯದಲ್ಲಿದ್ದಾರೆ.

English summary
A Hindu temple has been vandalised by a person in Pakistan’s southeast Sindh province, according to the police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X