Operation Sindoor: ಭಾರತ vs ಪಾಕ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಖಡಕ್ ಸೂಚನೆ!

Operation Sindoor: ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಬೆಳವಣಿಗೆಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿಯನ್ನು ಅಮೆರಿಕ ಸೂಕ್ಷ್ಮವಾಗಿ ಗಮಿಸುತ್ತಿದೆ ಎಂದು ಹೇಳಿದೆ. ಇದರೊಂದಿಗೆ ಭಾರತವು ಪಾಕಿಸ್ತಾನದ 9 ಪ್ರದೇಶಗಳಲ್ಲಿ ಕ್ಷಿಪಣಿ ದಾಳಿ ಮಾಡುವ ವಿಚಾರವು ನಮಗೆ ಮೊದಲೇ ಗೊತ್ತಿತ್ತು. ಇದು ಬೇಗ ಮುಗಿಯಲಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಹೇಳಿದ್ದರು. ಇದೀಗ ಹೊಸದಾಗಿ ಎರಡೂ ದೇಶಗಳನ್ನೂ ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಭೀತಿ ಇರುವಾಗಲೇ ಅಮೆರಿಕ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿದೆ. ಭಾರತ ಹಾಗೂ ಪಾಕಿಸ್ತಾನ ಎರಡೂ ನ್ಯೂಕ್ಲಿಯರ್ ಬಾಂಬ್ ಹೊಂದಿರುವ ಪ್ರಮುಖ ರಾಷ್ಟ್ರಗಳಾಗಿವೆ. ಇದೇ ಕಾರಣಕ್ಕೆ ಇಡೀ ವಿಶ್ವವೇ ಈ ಸಂಘರ್ಷ ಹಾಗೂ ಉದ್ವಿಗ್ನ ಪರಿಸ್ಥಿತಿಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಾಕ್‌ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ 9 ಪ್ರದೇಶಗಳಲ್ಲಿ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆಯು ಕ್ಷಿಪಣಿ ದಾಳಿಯನ್ನು ನಡೆಸಿತ್ತು. ಇದರ ಬೆನ್ನಲ್ಲೇ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿಯು ಹೊಸ ಹಂತಕ್ಕೆ ಹೋಗಿದೆ. ಯುದ್ಧದ ಪರಿಸ್ಥಿತಿ ಹೆಚ್ಚಾಗುತ್ತಿರುವಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಟ್‌ ಟ್ರಂಪ್ ಅವರು ಖಡಕ್ ಸೂಚನೆ ಕೊಟ್ಟಿದ್ದಾರೆ.

Operation Sindoor India vs Pakistan tension US President Donald Trump s warning

ನನಗೆ ಎರಡೂ ದೇಶಗಳ ಬಗ್ಗೆ ಚೆನ್ನಾಗಿ ತಿಳಿದಿದೆ. ಅವರು (ಭಾರತ & ಪಾಕ್‌) ಇದನ್ನು ಸಾಧ್ಯವಾದಷ್ಟು ಶೀಘ್ರ ಪರಿಹರಿಸಿಕೊಳ್ಳಲಿದ್ದಾರೆ ಎಂದು ಭಾವಿಸಿದ್ದೇನೆ. ನಾನು ಈ ವಿಚಾರದಲ್ಲಿ ಏನೆಲ್ಲಾ ಸಹಾಯ ಮಾಡಬಹುದೋ (ರಾಜತಾಂತ್ರಿಕವಾಗಿ) ಮಾಡಲು ಸಿದ್ಧನಿದ್ದೇನೆ. ನಾನು ಅಲ್ಲಿಯೇ ಇರಲಿದ್ದೇನೆ ಎಂದೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಹೇಳಿದ್ದಾರೆ.

ಮಧ್ಯಸ್ಥಿಕೆಗೆ ಸಿದ್ಧ ಎಂದ ಡೊನಾಲ್ಡ್‌ ಟ್ರಂಪ್: ಇನ್ನು ಭಾರತ ಹಾಗೂ ಪಾಕ್‌ನ ನಡುವೆ ಎದುರಾಗಿರುವ ಪರಿಸ್ಥಿತಿ ಹಾಗೂ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವುದಕ್ಕೆ ಅಮೆರಿಕ ಸಿದ್ಧವಾಗಿದೆ ಎಂದು ಡೊನಾಲ್ಡ್‌ ಟ್ರಂಪ್ ಅವರು ಹೇಳಿದ್ದಾರೆ. ಈ ಹಿಂದೆಯೂ ಜಮ್ಮು ಮತ್ತು ಕಾಶ್ಮೀರದ ವಿಚಾರವಾಗಿ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸುವುದ್ದಕ್ಕೆ ಸಿದ್ಧರಿದ್ಧೇವೆ ಎಂದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಹೇಳಿದ್ದು. ಈ ವಿಚಾರವನ್ನು ಭಾರತವು ಸ್ಪಷ್ಟವಾಗಿ ನಿರಾಕರಿಸಿರುವುದು ಇದೆ. ಇದೀಗ ಯಾವ ರೀತಿ ರಿಯಾಕ್ಟ್‌ ಮಾಡಲಿದೆ ಎಂದು ನೋಡಬೇಕಾಗಿದೆ.

ಅಮೆರಿಕ ಅಧ್ಯಕ್ಷರ ಖಡಕ್ ಸೂಚನೆ!

ಇನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳು ಕೂಡಲೇ ಪರಸ್ಪರ ದಾಳಿ ಮಾಡುವುದನ್ನು ನಿಲ್ಲಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. ಇದು ಬೇಗ ಮುಗಿಯಲಿದೆ ಎಂದು ಭಾವಿಸಿದ್ದೇನೆ ಎಂದು ಅವರು ಬುಧವಾರ ಹೇಳಿದ್ದರು. ಇದರ ಬೆನ್ನಲ್ಲೇ ಎರಡೂ ದೇಶಗಳ ನಡುವೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿರುವಾಗಲೇ ಅವರು ಹೊಸ ಹೇಳಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+