ಯೆಮನ್: ಭಾರತಕ್ಕೆ ಹಿಂದಿರುಗಿದ 349 ಜನ ಸಂತ್ರಸ್ತರು
ನವದೆಹಲಿ, ಏ.2: ಯುದ್ಧಪೀಡಿತ ಯೆಮನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ. ಮೊದಲ ಹಂತದಲ್ಲಿ 22 ಕನ್ನಡಿಗರೂ ಒಟ್ಟು ಸೇರಿದಂತೆ 350 ಜನರನ್ನು ಭಾರತಕ್ಕೆ ಕರೆತರಲಾಗಿದೆ.
ಈ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿರುವ ಕೇಂದ್ರ ಸರ್ಕಾರ ಮೊದಲ ಹಂತದ ಕಾರ್ಯಾಚರಣೆ ನಡೆಸಿದೆ. ಮಂಗಳವಾರ ತಡರಾತ್ರಿ ಯೆಮನ್‌ನ ಏಡನ್ ನಗರದ ಸಮೀಪ 349 ಭಾರತೀಯರನ್ನು ರಕ್ಷಿಸಲಾಗಿತ್ತು.[ಯೆಮೆನ್ ನಲ್ಲಿ ಸಿಕ್ಕಿಹಾಕಿಕೊಂಡ ಭಾರತೀಯರು]

ನಂತರ ರಕ್ಷಣೆ ಮಾಡಿದವರನ್ನು ಪಕ್ಕದ ಜಿಬೌಟಿಗೆ ಕರೆತರಕಲಾಯಿತು. ಸಂತ್ರಸ್ತರ ಜತೆ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್ ಸಮಾಲೋಚನೆ ನಡೆಸಿದರು. ಬಳಿಕ 349 ಭಾರತೀಯರನ್ನು ಹೊತ್ತ ಎರಡು ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿದವು.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ, ರಕ್ಷಣೆ ಮಾಡಿದವರಲ್ಲಿ 206 ಜನ ಕೇರಳದವರು, ತಮಿಳುನಾಡಿನ 40, ಮಹಾರಾಷ್ಟ್ರದ 31, ಪಶ್ಚಿಮ ಬಂಗಾಳದ 23, ದೆಹಲಿಯ 22 ಜನ ಸೇರಿದಂತೆ ವಿವಿಧ ರಾಜ್ಯದ ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ತಿಳಿಸಿದರು. [ರಕ್ಷಣಾ ಕಾರ್ಯದ ಮತ್ತಷ್ಟು ಚಿತ್ರಗಳು]

190 ಜನರನ್ನು ಮುಂಬೈಗೆ ಮತ್ತು 170 ಜನರ ಮತ್ತೊಂದು ತಂಡವನ್ನು ಕೊಚ್ಚಿಗೆ ಕರೆತರಲಾಯಿತು. 1 ವಿಮಾನ ಬುಧವಾರ ರಾತ್ರಿ 2 ಗಂಟೆ ಸುಮಾರಿಗೆ ಕೊಚ್ಚಿ ತಲುಪಿದರೆ, ಮತ್ತೊಂದು ವಿಮಾನ ಬುಧವಾರ ರಾತ್ರಿ 3.25ರ ಸುಮಾರಿಗೆ ಮುಂಬೈ ತಲುಪಿತು.[ಭಾರತೀಯರ ರಕ್ಷಣೆ ವಿಡಿಯೋ ನೋಡಿ]
ಈ ನಡುವೆ ಯೆಮನ್‌ನಿಂದ ಭಾರತೀಯರನ್ನು ಕರೆತರಲು ಕೊಚ್ಚಿಯಿಂದ ತೆರಳಿರುವ ಎರಡು ಪ್ರಯಾಣಿಕ ಹಡಗುಗಳಿಗೆ ಕಡಲ್ಗಳ್ಳರ ಹಾವಳಿ ಇರುವ ಸೋಮಾಲಿಯಾ ಕರಾವಳಿಯಲ್ಲಿ ರಕ್ಷಣೆ ಒದಗಿಸಲು ಮುಂಬೈನಿಂದ ಎರಡು ನೌಕೆಗಳನ್ನು ಕೂಡ ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿದೆ.

-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications