ಜಾಗತಿಕ ಉಗ್ರ ಮಸೂದ್ ಅಜರ್ ಆಸ್ತಿ ಮುಟ್ಟುಗೋಲು ಹಾಕಿದ ಪಾಕಿಸ್ತಾನ
ಇಸ್ಲಾಮಾಬಾದ್ , ಮೇ 3 : ಕಳೆದ ಎರಡು ದಿಗಳ ಹಿಂದೆ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಪಟ್ಟ ಕಟ್ಟಿಸಿಕೊಂಡ ಜೈಷ್ ಎ ಮೊಹಮ್ಮದ್ ಸಂಘಟನೆ ಉಗ್ರ ಮಸೂದ್ ಅಜರ್ ಆಸ್ತಿಯನ್ನು ಪಾಕಿಸ್ತಾನ ಮುಟ್ಟುಗೋಲು ಹಾಕಿಕೊಂಡಿದೆ.
ವಿಶ್ವ ಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ವಿರುದ್ಧ ನಾಲ್ಕು ಬಾರಿ ನಿರ್ಣಯಗಳಾಗಿದ್ದವು. ಪ್ರತೀ ಬಾರಿಯೂ ಚೀನಾ ಪಾಕಿಸ್ತಾನದ ಪರವಾಗಿ ನಿಂತು ಪಾಕಿಸ್ತಾನವನ್ನು ರಕ್ಷಿಸುತ್ತಿತ್ತು.
ಆದರೆ ಈ ಬಾರಿ ಚೀನಾವು ಬೆಂಬಲ ಹಿಂಪಡೆದ ಕಾರಣ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಣೆ ಮಾಡಲು ಸಾದ್ಯವಾಯಿತು. ಕಳೆದ ವರ್ಷ ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ 30ಕ್ಕೂ ಹೆಚ್ಚು ಸೈನಿಕರನ್ನು ಬಲಿತೆಗೆದುಕೊಂಡ ಘಟನೆ ನಡೆದ ಬಳಿಕ ಫ್ರಾನ್ಸ್, ಬ್ರಿಟನ್ ಮತ್ತು ಅಮೆರಿಕ ದೇಶಗಳು ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ಪ್ರಸ್ತಾವವನ್ನು ಮತ್ತೊಮ್ಮೆ ಮುಂದಿಟ್ಟಿದ್ದವು.

ಮಸೂದ್ ಅಜರ್ನ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಪಾಕಿಸ್ತಾನ ಸರ್ಕಾರ ಆದೇಶಿಸಿದೆ. ಅಲ್ಲದೆ, ಆತನ ವಿದೇಶಿ ಪ್ರಯಾಣದ ಮೇಲೆ ನಿಷೇಧ ಹೇರಲಾಗಿದೆ. ವಿಶ್ವಸಂಸ್ಥೆ ಅಜರ್ ಮೇಲೆ ನಿಷೇಧ ಹೇರಿರುವದರಿಂದ ಆತನಿಗೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವ ಹಾಗೂ ಕೊಂಡುಕೊಳ್ಳುವುದರ ಮೇಲೂ ನಿಷೇಧ ಜಾರಿಯಾಗಿದೆ. ಅಜರ್ನ ವಿರುದ್ಧ ನಾವು ಸಂಪೂರ್ಣವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಪಾಕಿಸ್ತಾನ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಚೀನಾದ ಮನವೊಲಿಸಲು ಭಾರತ ಸಾಕಷ್ಟು ಪ್ರಯತ್ನ ಮಾಡಿತು. ಫ್ರಾನ್ಸ್ ಮತ್ತು ಅಮೆರಿಕ ದೇಶಗಳೂ ಚೀನಾ ಮೇಲೆ ಒತ್ತಡ ಹಾಕಿದವು. ಹೀಗಾಗಿ, ಚೀನಾ ತನ್ನ ನಿರ್ಧಾರವನ್ನು ಬದಲಿಸಿತು.
ಈ ಮಂಡಳಿಯಲ್ಲಿ ಒಟ್ಟು 15 ಸದಸ್ಯ ರಾಷ್ಟ್ರಗಳಿರುತ್ತವೆ. ಅವುಗಳ ಪೈಕಿ ರಷ್ಯಾ, ಅಮೆರಿಕ, ಬ್ರಿಟನ್, ಫ್ರಾನ್ಸ್ ಮತ್ತು ಚೀನಾ ಈ ಐದು ರಾಷ್ಟ್ರಗಳು ಖಾಯಂ ಸದಸ್ಯತ್ವ ಹೊಂದಿವೆ. ಉಳಿದ 10 ಸದಸ್ಯರನ್ನು ಪ್ರಾದೇಶಿಕತೆ ಆಧಾರದ ಮೇಲೆ ಆವರ್ತನೆ ಮಾಡಲಾಗುತ್ತದೆ.
ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಪಾಲನೆಯ ಜವಾಬ್ದಾರಿ ಇದಕ್ಕಿದೆ. ವಿಶ್ವ ಸಂಸ್ಥೆಗೆ ಹೊಸ ಸದಸ್ಯ ರಾಷ್ಟ್ರಗಳನ್ನು ಸೇರಿಸಲು ಅಥವಾ ಅದರ ನಿಯಮಾವಳಿಯಲ್ಲಿ ಏನಾದರೂ ಬದಲಾವಣೆ ಮಾಡಲು ಈ ಮಂಡಳಿಯ ಅನುಮೋದನೆ ಅಗತ್ಯವಾಗಿರುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications