ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಕುಲಭೂಷಣ್‌ ಜಾಧವ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಪಾಕ್‌ ಸಂಸತ್ತು

|
Google Oneindia Kannada News

ನವದೆಹಲಿ, ನವೆಂಬರ್ 17: ಪಾಕಿಸ್ತಾನದಲ್ಲಿ ಬಂಧಿತನಾಗಿದ್ದು ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಮಾಜಿ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್‌ ಮೇಲ್ಮನವಿ ಸಲ್ಲಿಕೆ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಾಕಿಸ್ತಾನ ಸಂಸತ್ತು ಅಂಗೀಕಾರ ಮಾಡಿದೆ. ಈ ಹಿಂದೆ ಈ ಮಸೂದೆಯನ್ನು ಪಾಕಿಸ್ತಾನ ವಿಧಾನ ಸಭೆಯು ಜೂನ್ 10ರಂದು ಅಂಗೀಕಾರ ಮಾಡಿತ್ತು.

ಬುಧವಾರ ನಡೆದ ಪಾಕಿಸ್ತಾನ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಲಾಗಿದೆ. ಕುಲಭೂಷಣ್ ಜಾಧವ್ ತನಗೆ ವಿಧಿಸಿಸ ಶಿಕ್ಷೆಯ ವಿರುದ್ಧವಾಗಿ ಮೇಲ್ಮನವಿ ಸಲ್ಲಿಕೆ ಮಾಡುವ ಹಕ್ಕು ಹೊಂದಿದ್ದಾರೆ ಎಂದು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿತ್ತು. ಈಗ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ಧಾರದ ಪ್ರಕಾರವಾಗಿ ಕುಲಭೂಷಣ್ ಜಾದವ್‌ಗೆ ಮೇಲ್ಮನವಿ ಸಲ್ಲಿಸಲು ಹಕ್ಕನ್ನು ನೀಡುವ ಮಸೂದೆಯನ್ನು ಪಾಕಿಸ್ತಾನದ ಸಂಸತ್ತು ಜಂಟಿ ಅಧಿವೇಶನದಲ್ಲಿ ಅಂಗೀಕಾರ ಮಾಡಿದೆ.

ಮರಣದಂಡನೆ ವಿರುದ್ಧ ಕುಲಭೂಷಣ್ ಜಾಧವ್‌ ಮೇಲ್ಮನವಿ ಸಲ್ಲಿಸಲು ಪಾಕ್ ಸಂಸತ್ ಅನುಮೋದನೆಮರಣದಂಡನೆ ವಿರುದ್ಧ ಕುಲಭೂಷಣ್ ಜಾಧವ್‌ ಮೇಲ್ಮನವಿ ಸಲ್ಲಿಸಲು ಪಾಕ್ ಸಂಸತ್ ಅನುಮೋದನೆ

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಶಿಕ್ಷೆಯ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶ ನೀಡುವ ಮಸೂದೆಯನ್ನು ಪಾಕಿಸ್ತಾನ ವಿಧಾನಸಭೆಯು ಜೂನ್ 10ರಂದು ಅಂಗೀಕರಿಸಿದೆ. "ರಾಷ್ಟ್ರೀಯ ಅಸೆಂಬ್ಲಿ 2020ರ ಐಸಿಜೆ (ಇಂಟರ್‌ನ್ಯಾಶನಲ್ ಕೋರ್ಟ್ ಆಫ್ ಜಸ್ಟೀಸ್‌) ಮಸೂದೆಯನ್ನು ಅಂಗೀಕರಿದೆ. ಈ ಮೂಲಕ ಕುಲಭೂಷಣ್ ಜಾಧವ್ ಅವರಿಗೆ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಅನುಸಾರವಾಗಿ ರಾಯಭಾರ ಕಚೇರಿಯ ನೆರವನ್ನು ಪಡೆಯಲು ಅವಕಾಶವಿದೆ" ಎಂದು ಜೂನ್‌ 10 ರಂದು ಪಾಕಿಸ್ತಾನದ ಪ್ರಮುಖ ಪತ್ರಿಕೆ ಡಾನ್‌ ವರದಿ ಮಾಡಿತ್ತು.

 Pak parliament allows Kulbhushan Jadhav right to appeal as per ICJ decision

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾದವ್ ಭಾರತದ ಪರವಾಗಿ ಪಾಕಿಸ್ತಾನದಲ್ಲಿ ಗೂಢಚರ್ಯೆ ನಡೆಸುವ ಮೂಲಕ ದುಷ್ಕೃತ್ಯಕ್ಕೆ ಯತ್ನಿಸಿದ್ದರು ಎಂಬ ಗಂಭೀರ ಆರೋಪವನ್ನು ಪಾಕಿಸ್ತಾನ ಹೋರಿಸಿದೆ. ಈ ಪ್ರಕರಣದಲ್ಲಿ ಜಾಧವ್ ತಪ್ಪಿತಸ್ಥ ಎಂದು ಹೇಳಿರುವ ಪಾಕಿಸ್ತಾನ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆಯನ್ನು ನೀಡಿದೆ. ಜಾಧವ್‌ಗೆ ಕಾನ್ಸುಲರ್ ಪ್ರವೇಶ ನಿರಾಕರಿಸಿದ್ದಕ್ಕಾಗಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿದ್ದಕ್ಕಾಗಿ ಭಾರತ ಪಾಕಿಸ್ತಾನದ ವಿರುದ್ಧ ಐಸಿಜೆಯನ್ನು ಸಂಪರ್ಕಿಸಿತು.

ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಅವಕಾಶ ಸಾಧ್ಯತೆ: ಮಸೂದೆಗೆ ಒಪ್ಪಿಗೆ ನೀಡಿದ ಪಾಕ್ ಸಮಿತಿಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಅವಕಾಶ ಸಾಧ್ಯತೆ: ಮಸೂದೆಗೆ ಒಪ್ಪಿಗೆ ನೀಡಿದ ಪಾಕ್ ಸಮಿತಿ

ಅಂದರೆ ಪಾಕಿಸ್ತಾನ ಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯ ಇಂಟರ್‌ನ್ಯಾಶನಲ್ ಕೋರ್ಟ್ ಆಫ್ ಜಸ್ಟೀಸ್‌ನ ಮೊರೆ ಹೋಗಿತ್ತು. ಕುಲಭೂಷಣ್ ಪರವಾಗಿ ತೀರ್ಪುನೀಡಿದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಮನವಿಯಂತೆ ಜಾಧವ್‌ಗೆ ರಾಯಭಾರಿ ಕಚೇರಿಯ ನೆರವು ಪಡೆಯಲು ಹಾಗೂ ಶಿಕ್ಷೆಯ ಮರುಪರಿಶೀಲನೆಗೆ ಅವಕಾಶವನ್ನು ನೀಡಿ 2019ರ ಜುಲೈನಲ್ಲಿ ಆದೇಶಿಸಿತ್ತು. ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನದ ರಾಷ್ಟ್ರೀಯ ಸಂಸತ್‌ನ ಕಾನೂನು ಮತ್ತು ನ್ಯಾಯ ಸ್ಥಾಯಿ ಸಮಿತಿಯು ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಪರಾಮರ್ಶೆಗೆ ಒಳಪಡಿಸುವ ಸರ್ಕಾರದ ಮಸೂದೆಗೆ ಅನುಮೋದನೆ ನೀಡಿದೆ.

ಸಮಿತಿಯಲ್ಲಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್-ಎನ್), ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಮತ್ತು ಜಮೈತ್ ಉಲೆಮಾ ಇ ಇಸ್ಲಾಂ (ಜೆಯುಐ-ಎಫ್) ಪಕ್ಷಗಳ ಸದಸ್ಯರು ಈ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಜಾಧವ್ ಅವರಿಗೆ ಅನುಕೂಲ ಮಾಡಿಕೊಡುವ 'ಎನ್‌ಆರ್‌ಒ' ಎಂದು ಆರೋಪಿಸಿತ್ತು. ಈ ಮಸೂದೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಜಾರಿಗೆ ತರಲಾಗಿದೆ ಎಂದು ಕಾನೂನು ಮತ್ತು ನ್ಯಾಯಾಂಗ ಸಚಿವ ಫಾರೋಗ್ ನಸೀಮ್ 'ಅಂತಾರಾಷ್ಟ್ರೀಯ ನ್ಯಾಯಾಲಯ (ಪರಾಮರ್ಶೆ ಮತ್ತು ಮರುಪರಿಗಣನೆ) ಸುಗ್ರೀವಾಜ್ಞೆ ಮಸೂದೆಯನ್ನು ಸಮರ್ಥಿಸಿಕೊಂಡಿದ್ದರು. ಹಾಗೆಯೇ ಒಂದು ವೇಳೆ ಈ ಮಸೂದೆಯನ್ನು ಸಂಸತ್ ಅಂಗೀಕರಿಸಿದೆ ಹೋದರೆ ಪಾಕಿಸ್ತಾನವು ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ ತಪ್ಪಿಗಾಗಿ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾರ್ಚ್ 3, 2016 ರಂದು ಬಲೂಚಿಸ್ತಾನ್ ಪ್ರಾಂತ್ಯದಿಂದ ತನ್ನ ಭದ್ರತಾ ಪಡೆಗಳು ಕುಲಭೂಷಣ್ ಜಾಧವ್‌ ಅವರನ್ನು ಬಂಧಿಸಿವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕುಲಭೂಷಣ್ ಜಾಧವ್‌ ಇರಾನ್‌ನಿಂದ ಇಲ್ಲಿಗೆ ಬಂದಿದ್ದಾರೆ ಎಂದು ಪಾಕಿಸ್ತಾನವು ಆರೋಪ ಮಾಡಿತ್ತು. ಆದರೆ ಕುಲಭೂಷಣ್ ಜಾಧವ್‌ ಇರಾನ್‌ನಿಂದ ಅಪಹರಣ ಮಾಡಿ ಬಲೂಚಿಸ್ತಾನಕ್ಕೆ ಕರೆತರಲಾಗಿದೆ ಎಂದು ಭಾರತವು ಹೇಳಿದೆ. ಕುಲಭೂಷಣ್ ಜಾಧವ್‌ ನೌಕಾಪಡೆಯಿಂದ ನಿವೃತ್ತರಾದ ಬಳಿಕ ವ್ಯಾಪಾರವನ್ನು ನಡೆಸುತ್ತಾ ಇರಾನ್‌ನಲ್ಲಿ ಇದ್ದರು.

(ಒನ್‌ಇಂಡಿಯಾ ಸುದ್ದಿ)

Recommended Video

ಮೂಲೆಗುಂಪಾದವರ ಆಟ ನೋಡಿ ಶಾಕ್ ಆದ ಐಪಿಎಲ್ ಫ್ರಾಂಚೈಸಿಗಳು | Oneindia Kannada

English summary
Pak parliament passed a bill to give Kulbhushan Jadhav the right to appeal as per the decision of the International Court of Justice (ICJ).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X