Viral Video: ರಷ್ಯಾ ಅಧ್ಯಕ್ಷ ಪುಟಿನ್ ಸಭೆಗೆ ಏಕಾಏಕಿ ನುಗ್ಗಿದ ಪಾಕ್ ಪ್ರಧಾನಿ ಷರೀಫ್!
Viral Video: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗುವಂತಹ ಪ್ರಸಂಗವೊಂದು ನಡೆದಿದೆ. ಇದೀಗ ಶಹಬಾಜ್ ಷರೀಫ್ ಅವರು ಎಡವಟ್ಟು ಮಾಡಿಕೊಂಡಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು. ನೆಟ್ಟಿಗರು ಪಾಕ್ ಪ್ರಧಾನಿಯನ್ನು ಟ್ರೋಲ್ ಮಾಡುವುದಕ್ಕೆ ಶುರು ಮಾಡಿಕೊಂಡಿದ್ದಾರೆ. ಇಷ್ಟಕ್ಕೂ ಪಾಕ್ ಪ್ರಧಾನಿ ಮಾಡಿದ್ದೇನು, ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಏನಿದೆ ಎನ್ನುವುದನ್ನು ನೋಡೋಣ.
ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಲವೊಂದು ಸಂದರ್ಭದಲ್ಲಿ ಮುಜುಗರಕ್ಕೆ ಒಳಗಾಗುವುದು ಇದೆ. ಈಚೆಗೆ ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ನೊಂದಿಗೆ ವೇದಿಕೆ ಹಂಚಿಕೊಂಡ ಸಂದರ್ಭದಲ್ಲಿ ಹೆಡ್ಸೆಟ್ ಹಾಕಿಕೊಳ್ಳುವುದಕ್ಕೆ ಸಾಧ್ಯವಾಗದೆ, ಹೆಡ್ಸೆಟ್ ಪದೇ ಪದೇ ಕೆಳಗೆ ಬಿದ್ದಿತ್ತು.

ಇದೀಗ ರಷ್ಯಾ ಅಧ್ಯಕ್ಷರನ್ನು ಭೇಟಿ ಮಾಡುವ ವಿಚಾರದಲ್ಲಿ ಮತ್ತೊಮ್ಮೆ ಪಾಕ್ ಪ್ರಧಾನಿ ಮುಜುಗರಕ್ಕೆ ಒಳಗಾಗಿದ್ದಾರೆ. ಈ ಬಾರಿ ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಅವರು ಸಹ ಪಾಕ್ ಪ್ರಧಾನಿ ಷರೀಫ್ ಅವರನ್ನು ಬರೋಬ್ಬರಿ 40 ನಿಮಿಷಗಳ ಕಾಲ ಕಾಯಿಸಿದ್ದಾರೆ ಎಂದು ವರದಿಯಾಗಿದೆ. ಆರ್ಟಿ ಇಂಡಿಯಾ ಮೀಡಿಯಾದಿಂದ ಈ ವಿಡಿಯೋ ವರದಿ ಆಗಿದೆ.
ತುರ್ಕಮೆನಿಸ್ತಾನದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಭೆಯಲ್ಲಿ ಭಾಗವಹಿಸುವುದಕ್ಕೆ ರಷ್ಯಾ, ಪಾಕಿಸ್ತಾನ, ಟರ್ಕಿ ಹಾಗೂ ಇರಾನ್ ಸೇರಿದಂತೆ ವಿವಿಧ ದೇಶಗಳ ನಾಯಕರು ಆಗಮಿಸಿದ್ದರು. ಇನ್ನು ಇದರ ಭಾಗವಾಗಿ ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಪಾಕಿಸ್ತಾನದ ಪ್ರಧಾನಿ ಷರೀಫ್ ಅವರ ನಡುವೆ ಮಾತುಕತೆಗೆ ಸಮಯ ನಿಗದಿ ಮಾಡಲಾಗಿತ್ತು.
ಆದರೆ ಆ ಸಮಯದಲ್ಲಿ ವಾದ್ಲಿಮಿರ್ ಪುಟಿನ್ ಅವರು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎಡೋರ್ಗನ್ ಅವರೊಂದಿಗೆ ಸಭೆ ನಡೆಸುತ್ತಿದ್ದರು ಎನ್ನಲಾಗಿದೆ. ಬರೋಬ್ಬರಿ 40 ನಿಮಿಷಗಳು ಕಾದರೂ ಪುಟಿನ್ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಏಕಾಏಕಿ ಪುಟಿನ್ ಮತ್ತು ರೆಸೆಪ್ ತಯ್ಯಿಪ್ ಎಡೋರ್ಗನ್ ಅವರು ನಡೆಸುತ್ತಿದ್ದ ಸಭೆಯ ಕೊಠಡಿಗೆ ನುಗ್ಗಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
❗️The Moment PM Sharif Gate-crashed Putin's Meeting With Erdogan After Waiting For 40 Mins https://t.co/r4L9XhA9IY pic.twitter.com/shi7YLMgmP
— RT_India (@RT_India_news) December 12, 2025
ಅನುಮತಿ ಇಲ್ಲದೆ ಕೊಠಡಿಗೆ ನುಗ್ಗಿದ ಷರೀಫ್
ಇಬ್ಬರು ಪ್ರಮುಖ ನಾಯಕರು ಸಭೆ ನಡೆಸುತ್ತಿದ್ದರೂ ಷರೀಫ್ ಅವರು ಏಕಾಏಕಿ ನುಗ್ಗಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ವಿಳಂಬವಾದ ನಂತರ, ಪುಟಿನ್ ಮತ್ತು ಟರ್ಕಿಶ್ ಅಧ್ಯಕ್ಷರ ಮುಚ್ಚಿದ ರೂಮ್ನಲ್ಲಿ ನಡೆಯುತ್ತಿದ್ದ ಸಭೆಗೆ ಷರೀಫ್ ಅವರು ಏಕಾಏಕಿ ನುಗ್ಗಿದ್ದಾರೆ. ಈ ರೀತಿ ನುಗ್ಗಿದ 10 ನಿಮಿಷಗಳ ಒಳಗಾಗಿ ಷರೀಫ್ ಅವರು ರೂಮ್ನಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications