• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತಕ್ಕೆ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲು ಸಿದ್ಧ:ಪಾಕಿಸ್ತಾನ ಪುನರುಚ್ಚಾರ

|
Google Oneindia Kannada News

ಇಸ್ಲಾಮಾಬಾದ್, ಏಪ್ರಿಲ್ 30: ಭಾರತಕ್ಕೆ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲು ಸಿದ್ಧರಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.

ಕೋವಿಡ್‌ನಿಂದಾಗಿ ಎದುರಾಗುವ ಸವಾಲುಗಳನ್ನು ಕಡಿಮೆ ಮಾಡಲು ದೇಶದ ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆ ನಡೆಸಿ ಸೂಕ್ತ ವಿಧಾನಗಳನ್ನು ಅನುಸರಿಸಬೇಕು ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ಶಾಹಿದ್ ಹಫೀಜ್ ಚೌಧರಿ ಹೇಳಿದ್ದಾರೆ.

ಭಾರತಕ್ಕೆ ನೆರವು ನೀಡುವುದಾಗಿ ಘೋಷಿಸಿದ ಪಾಕಿಸ್ತಾನದ ಎಧಿ ಫೌಂಡೇಶನ್ಭಾರತಕ್ಕೆ ನೆರವು ನೀಡುವುದಾಗಿ ಘೋಷಿಸಿದ ಪಾಕಿಸ್ತಾನದ ಎಧಿ ಫೌಂಡೇಶನ್

ಎರಡೂ ರಾಷ್ಟ್ರಗಳುಸಹಕಾರವನ್ನು ಹೆಚ್ಚಿಸುವ ಮೂಲಕ ಸೋಂಕಿನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳಬಹುದು ಎಂದು ಹೇಳಿದೆ.

ಇದೇ ಸಂದರ್ಭದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೈಲಿನಲ್ಲಿರುವ ಕಾಶ್ಮೀರ ನಾಯಕರು ಹಾಗೂ ಕಾಶ್ಮೀರ ಕೈದಿಗಳನ್ನು ಭಾರತ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭಾರತಕ್ಕೆ ವೆಂಟಿಲೇಟರ್, ಬಿಐ ಪಿಎಪಿ, ಡಿಜಿಟಲ್ ಎಕ್ಸ್‌ ರೇ ಉಪಕರಣ, ಪಿಪಿಇ ಕಿಟ್‌ಗಳನ್ನು ನೀಡಲು ಪಾಕಿಸ್ತಾನ ಸಿದ್ಧವಿದೆ ಎಂದಿದ್ದಾರೆ.

ಇತ್ತೀಚೆಗೆ ಭಾರತಕ್ಕೆ ನೆರವು ನೀಡುವ ಬಗ್ಗೆ ಟ್ವೀಟ್ ಮಾಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು, ನೆರೆರಾಷ್ಟ್ರ ಹಾಗೂ ವಿಶ್ವದಲ್ಲಿ ಸಾಂಕ್ರಾಮಿಕದಿಂದ ಬಳಲುತ್ತಿರುವ ಎಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ಜತೆಗೆ ನಾವು ಇದ್ದೇವೆ, ನಾವು ಮಾನವೀಯತೆಯಿಂದ ಈ ಜಾಗತಿಕ ಸವಾಲನ್ನು ಒಟ್ಟಾಗಿ ಸ್ವೀಕರಿಸಬೇಕು ಎಂದಿದ್ದರು.

ಕೊರೊನಾದಿಂದ ಎದುರಾಗುವ ಸವಾಲುಗಳನ್ನು ತಗ್ಗಿಸಲು ಉಭಯ ದೇಶಗಳ ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆ ನಡೆಸಿ ಸೂಕ್ತ ವಿಧಾನವನ್ನು ಅನುಸರಿಸಬೇಕು ಎಂದು ಚೌಧರಿ ಹೇಳಿದ್ದಾರೆ.

English summary
Pakistan on Thursday reiterated its offer to provide relief materials to India to support the neighbouring country''s efforts to combat the massive surge in the coronavirus cases and said the two countries can explore possible ways of further cooperation to mitigate the challenges posed by the pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X