• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನ ಮಸೀದಿ ಬಳಿ ಬಾಂಬ್ ಸ್ಫೋಟ 7 ಮಂದಿ ಸಾವು, 20 ಮಂದಿಗೆ ಗಾಯ

|
Google Oneindia Kannada News

ಇಸ್ಲಮಾಬಾದ್, ಫೆಬ್ರವರಿ.17: ಕಳೆದ ಒಂದು ತಿಂಗಳಿನಲ್ಲಿ ಎರಡನೇ ಬಾರಿ ಪಾಕಿಸ್ತಾನದಲ್ಲಿ ಸ್ಫೋಟ ಸಂಭವಿಸಿದೆ. ಬಲೂಚಿಸ್ತಾನ್ ಪ್ರದೇಶ ಕ್ವೆಟ್ಟಾದಲ್ಲಿ ಇರುವ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಪ್ರಾಣ ಬಿಟ್ಟಿದ್ದಾರೆ.

ಮಸೀದಿ ಬಳಿಯೇ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆಯು ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಜಾಗತಿಕ ಉಗ್ರ ಮಸೂದ್ ಅಜರ್ ನಾಪತ್ತೆ ಪ್ರಹಸನಪಾಕಿಸ್ತಾನದಲ್ಲಿ ಜಾಗತಿಕ ಉಗ್ರ ಮಸೂದ್ ಅಜರ್ ನಾಪತ್ತೆ ಪ್ರಹಸನ

ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡ 20 ಮಂದಿಯನ್ನು ಕ್ವೆಟ್ಟಾದಲ್ಲಿ ಇರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವಕ್ತಾರ ವಾಸೀಮ್ ಬೇಗ್ ತಿಳಿಸಿದ್ದಾರೆ.

ತುರ್ತು ವರದಿ ನೀಡುವಂತೆ ಸೂಚಿಸಿದ ಇಮ್ರಾನ್ ಖಾನ್:

ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ತುರ್ತು ವರದಿ ನೀಡುವಂತೆ ಅಧಿಕಾರಿಗಳಿಗೆ ಪಾಕಿಸ್ತಾನ್ ಪ್ರಧಾನಮಂತ್ರಿ ಇಮ್ರಾನ್ ಖಾನ್ ಖಡಕ್ ಸೂಚನೆ ನೀಡಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಗೆ ಇಮ್ರಾನ್ ಖಾನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಇನ್ನು, ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದು ಬಂದಿದೆ.

English summary
Pakistan: 7 Death, 20 Persons Injured In Bomb Blast Near Balochistan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X