ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನ ಜೊತೆಗಿನ ವ್ಯವಹಾರಕ್ಕೆ ಪಾಕಿಸ್ತಾನದ ಹೊಸ ಕರೆನ್ಸಿ!

|
Google Oneindia Kannada News

ಕಾಬೂಲ್, ಸಪ್ಟೆಂಬರ್ 9: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರದ ಆರ್ಥಿಕತೆ ಮೇಲೆ ನಿಯಂತ್ರಣ ಸಾಧಿಸುವುದಕ್ಕೆ ಪಾಕಿಸ್ತಾನ ಯೋಜನೆ ರೂಪಿಸಿದೆ. ಅಫ್ಘಾನಿಸ್ತಾನಕ್ಕಾಗಿ ವಿಶೇಷ ಆರ್ಥಿಕ ಯೋಜನೆಗಳನ್ನು ಘೋಷಿಸಿದ ಪಾಕಿಸ್ತಾವು ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮತ್ತು ವಹಿವಾಟು ನಿರ್ವಹಣೆಗೆ ಪ್ರತ್ಯೇಕ ತಾಲಿಬಾನ್ ಮತ್ತು ಪಾಕಿಸ್ತಾನಿ ರೂಪಾಯಿ ಅನ್ನು ಬಳಸುವುದಾಗಿ ಘೋಷಿಸಿದೆ.

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಈ ಮೊದಲು ವಹಿವಾಟು ನಡೆಸುವುದಕ್ಕೆ ಯುಎಸ್ ಡಾಲರ್ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಅಫ್ಘಾನಿಸ್ತಾನದ ರೂಪಾಯಿ ಮೌಲ್ಯವು ಹೆಚ್ಚು ಪ್ರಭಾವಶಾಲಿಯಾಗಿದ್ದು, ಇದೀಗ ಪಾಕಿಸ್ತಾನ ಘೋಷಿಸಿದ ಹೊಸ ರೂಪಿಯಿಂದಾಗಿ ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ವಹಿವಾಟು ಹಾಗೂ ಉದ್ಯಮಗಳ ಮೇಲೆ ಪಾಕಿಸ್ತಾನ ಹಿಡಿತ ಸಾಧಿಸುವ ಯೋಜನೆ ಹಾಕಿಕೊಂಡಿದೆ.

ಅಫ್ಘಾನಿಸ್ತಾನದಲ್ಲಿ ಮಹಿಳಾ ಪರ ವರದಿ ಪ್ರಸಾರಕ್ಕೆ ಇದೆಂಥಾ ಶಿಕ್ಷೆ!? ಅಫ್ಘಾನಿಸ್ತಾನದಲ್ಲಿ ಮಹಿಳಾ ಪರ ವರದಿ ಪ್ರಸಾರಕ್ಕೆ ಇದೆಂಥಾ ಶಿಕ್ಷೆ!?

ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ತಾಲಿಬಾನ್ ಸರ್ಕಾರವು ಆರ್ಥಿಕ ಕುಸಿತದ ಮೇಲೆ ಕಡಿವಾಣ ಹಾಕುವ ಅಗತ್ಯವಿದೆ. ಈ ನಿಟ್ಟಿನಲ್ಲಿ ದೇಶದ ಬಜೆಟ್‌ನ ಶೇ.80ರಷ್ಟು ಬಂಡವಾಳವು ಅಂತಾರಾಷ್ಟ್ರೀಯ ಮಾರುಕಟ್ಟೆಯಿಂದಲೇ ಬರುತ್ತದೆ. ಕಳೆದ ಮಂಗಳವಾರವಷ್ಟೇ ಅಧಿಕೃತವಾಗಿ ತಾಲಿಬಾನ್ ಸರ್ಕಾರವನ್ನು ಘೋಷಿಸಿತು. ಯುನೈಟೆಡ್ ಸ್ಟೇಟ್ಸ್ ನ 9/11ರ ಭಯೋತ್ಪಾದನಾ ದಾಳಿಯ 20ನೇ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ 11ರಂದು ಆಚರಿಸುವ ಸಾಧ್ಯತೆಗಳಿವೆ.

ಅಫ್ಘಾನ್ ಆರ್ಥಿಕತೆ ಮೇಲೆ ಪಾಕ್ ಹಿಡಿತ

ಅಫ್ಘಾನ್ ಆರ್ಥಿಕತೆ ಮೇಲೆ ಪಾಕ್ ಹಿಡಿತ

ಅಫ್ಘಾನಿಸ್ತಾನದ ಸೇನೆ ಮತ್ತು ಗುಪ್ತಚರ ಇಲಾಖೆಯಲ್ಲಿ ಗುರುತಿಸಿಕೊಂಡಿರುವ ಪಾಕಿಸ್ತಾನವು ಇದೀಗ ಆರ್ಥಿಕತೆಯಲ್ಲಿ ಪ್ರವೇಶಿಸಲು ಯೋಜನೆ ಹಾಕಿಕೊಂಡಿದೆ. ಪಾಕಿಸ್ತಾನದ ತನ್ನ ಕರೆನ್ಸಿಯನ್ನು ಪರಿಚಯಿಸಿದ ನಂತರದಲ್ಲಿ ಅಫ್ಘಾನಿಸ್ತಾನದ ಕರೆನ್ಸಿ ಮೌಲ್ಯವು ಇಳಿಮುಖವಾಗಲಿದೆ. ಒಂದು ಬಾರಿ ಅದು ಸಾಧ್ಯವಾದರೆ ಎಲ್ಲಾ ವ್ಯಾಪಾರ ಮತ್ತು ವ್ಯವಹಾರಗಳು ಪಾಕಿಸ್ತಾನದ ಬೆಲೆ ಮತ್ತು ಪರಿಮಾಣವನ್ನು ಅವಲಂಬಿಸಿರುತ್ತದೆ. ತಾಲಿಬಾನ್‌ಗಳು ತಮ್ಮ ಔಷಧಿಗಳನ್ನು ಪಾಕಿಸ್ತಾನಕ್ಕೆ ಮಾತ್ರ ಕಳುಹಿಸುವಂತೆ ಒತ್ತಾಯಿಸುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಫ್ಘಾನಿಸ್ತಾನಕ್ಕೆ ಲಗ್ಗೆಯಿಟ್ಟಿದ್ದ ಪಾಕಿಸ್ತಾನದ ಐಎಸ್ಐ

ಅಫ್ಘಾನಿಸ್ತಾನಕ್ಕೆ ಲಗ್ಗೆಯಿಟ್ಟಿದ್ದ ಪಾಕಿಸ್ತಾನದ ಐಎಸ್ಐ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಹಕ್ಕಾನಿ ನೆಟ್ ವರ್ಕ್ ನಡುವೆ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಈ ಹಂತದಲ್ಲಿ ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್ಐ) ಮುಖ್ಯಸ್ಥ ಹಮೀದ್ ಫೈಜ್ ಕಳೆದ ವಾರ ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಗರಕ್ಕೆ ಭೇಟಿ ನೀಡಿದ್ದರು. ಹಕ್ಕಾನಿ ನೆಟ್ ವರ್ಕ್ ಪ್ರಭಾವವನ್ನು ತಗ್ಗಿಸುವ ಮೂಲಕ ತಾಲಿಬಾನ್ ಸರ್ಕಾರದಲ್ಲಿ ಐಎಸ್ಐ ಹಿಂಬಾಗಿಲ ಪ್ರವೇಶ ಪಡೆದುಕೊಳ್ಳಲು ಯತ್ನಿಸಿತು.

ಹಕ್ಕಾನಿಗಳು ಅತಿಹೆಚ್ಚು ಅಪಾಯಕಾರಿ ಎಂಬ ಭೀತಿ

ಹಕ್ಕಾನಿಗಳು ಅತಿಹೆಚ್ಚು ಅಪಾಯಕಾರಿ ಎಂಬ ಭೀತಿ

ಹಕ್ಕಾನಿ ಜಾಲವು ಯುಎಸ್ ನಿಯೋಜಿತ ಭಯೋತ್ಪಾದಕ ಗುಂಪಾಗಿದ್ದು, ಇದನ್ನು ಅಫ್ಘಾನಿಸ್ತಾನದಲ್ಲಿ ಅತ್ಯಂತ ಅಪಾಯಕಾರಿ ಭಯೋತ್ಪಾದಕ ಗುಂಪು ಎಂದು ಪರಿಗಣಿಸಲಾಗುತ್ತದೆ. ಆತ್ಮಾಹುತಿ ಬಾಂಬರ್‌ಗಳ ಬಳಕೆಯಲ್ಲಿ ಈ ಜಾಲವು ಅತ್ಯಂತ ಕುಖ್ಯಾತಿಯನ್ನು ಪಡೆದಿದೆ. ಕಳೆದ ಕೆಲವು ವರ್ಷಗಳಲ್ಲಿ ಕಾಬೂಲ್‌ನಲ್ಲಿ ನಡೆದ ಭೀಕರ ದಾಳಿಗಳಲ್ಲಿ ಈ ಜಾಲದ ಕೈವಾಡವಿರುವ ಶಂಕೆಯಿದೆ. ತಮ್ಮ ಸ್ವಾತಂತ್ರ್ಯ, ಹೋರಾಟದ ಚಾಣಾಕ್ಷತೆ ಮತ್ತು ಜಾಣತನದ ವ್ಯಾಪಾರ ವ್ಯವಹಾರಗಳಿಗೆ ಹೆಸರುವಾಸಿಯಾಗಿರುವ ಹಕ್ಕಾನಿಗಳು ಮುಖ್ಯವಾಗಿ ಪೂರ್ವ ಅಫ್ಘಾನಿಸ್ತಾನದಲ್ಲಿ ನೆಲೆಸಿದ್ದಾರೆ ಮತ್ತು ತಾಲಿಬಾನ್ ನಾಯಕತ್ವ ಮಂಡಳಿಯ ಮೇಲೆ ಗಣನೀಯ ಹಿಡಿತ ಹೊಂದಿದ್ದಾರೆ.

ಸೋವಿಯತ್ ವಿರೋಧಿ ಜಿಹಾದ್‌ನ ಪ್ರಸಿದ್ಧ ಕಮಾಂಡರ್ ಪುತ್ರನಾಗಿ ತಾಲಿಬಾನ್‌ನ ಉಪ ನಾಯಕ ಮತ್ತು ಶಕ್ತಿಯುತ ಹಕ್ಕಾನಿ ಜಾಲದ ಮುಖ್ಯಸ್ಥರಾಗಿ ಸಿರಾಜುದ್ದೀನ್ ಹಕ್ಕಾನಿ ಪ್ರಬಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಇವರನ್ನು ಅಫ್ಘಾನಿಸ್ತಾನದ ಆಂತರಿಕ ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಘೋಷಿಸಿರುವ ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಘೋಷಿಸಿರುವ ತಾಲಿಬಾನ್

ಅಫ್ಘಾನಿಸ್ತಾನದ ಯುಎಸ್ ಬೆಂಬಲಿತ ಪ್ರಜಾಪ್ರಭುತ್ವ ಸರ್ಕಾರ ಪತನಗೊಂಡು 25 ದಿನಗಳೊಳಗೆ ಹೊಸ ಸರ್ಕಾರ ಘೋಷಣೆ ಆಗಿದೆ. ರಾಜಧಾನಿ ಕಾಬೂಲ್ ಸೇರಿದಂತೆ ಇಡೀ ದೇಶದ ಮೇಲೆ 23 ದಿನಗಳ ಹಿಂದೆಯಷ್ಟೇ ಹಿಡಿತ ಸಾಧಿಸಿದ ತಾಲಿಬಾನ್ ಸಂಘಟನೆ ಹೊಸ ಸರ್ಕಾರವನ್ನು ಘೋಷಿಸಿದೆ. ತಾಲಿಬಾನ್ ರಚಿಸಿರುವ ಹೊಸ ಸರ್ಕಾರದ ನಾಯಕತ್ವವನ್ನು ಮುಲ್ಲಾ ಮೊಹಮ್ಮದ್ ಹಸನ್ ಅಖುಂದಾ ಹೆಗಲಿಗೆ ವಹಿಸಲಾಗಿದೆ. ತಾಲಿಬಾನ್ ಮತ್ತು ಹಕ್ಕಾನಿ ನಡುವಿನ ಭಿನ್ನಾಭಿಪ್ರಾಯಗಳ ನಡುವೆ ಮುಲ್ಲಾ ಹಸನ್ ಅಖುಂದಾರನ್ನು ಆಯ್ಕೆ ಮಾಡಲಾಗಿದೆ. ತಾಲಿಬಾನ್ ಸಂಘಟನೆ ಸಹ-ಸಂಸ್ಥಾಪಕ ಅಬ್ದುಲ್ ಘನಿ ಬರಾದಾರ್ ಉಪ ಪ್ರಧಾನಿ ಸ್ಥಾನವನ್ನು ನೀಡಲಾಗಿದೆ. ಅಬ್ದುಲ್ ಬರಾದಾರ್ ಮೊದಲ ಉಪ ಪ್ರಧಾನಿಯಾಗಿದ್ದು, ಮಾವ್ಲವಿ ಹನ್ನಾಫಿ ಎರಡನೇ ಉಪ ಪ್ರಧಾನಿ ಆಗಿದ್ದಾರೆ. ತಾಲಿಬಾನ್ ರಚಿಸಿರುವ ಹೊಸ ಸರ್ಕಾರದಲ್ಲಿ 33 ಸಚಿವರಿಗೆ ಸ್ಥಾನ ನೀಡಲಾಗಿದೆ. ಈ 33 ಸಚಿವರಲ್ಲಿ 17 ಮಂದಿ ವಿಶ್ವಸಂಸ್ಥೆಯ ಭಯೋತ್ಪಾದಕರ ಪಟ್ಟಿಯಲ್ಲಿ ಗುರುತಿಸಿಕೊಂಡವರು ಎಂದು ಗೊತ್ತಾಗಿದೆ.

English summary
Pakistan Aims to Control Afghan Economy; Pak to Use Own Currency for Bilateral Trade With Taliban.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X