ಪಾಕ್-ಜಿಂಬಾಬ್ವೆ ಪಂದ್ಯ ನಡೆಯುತ್ತಿದ್ದಾಲೇ ಬಾಂಬ್ ಸ್ಫೋಟ
ಲಾಹೋರ್, ಮೇ 30: ಪಾಕಿಸ್ತಾನದಲ್ಲಿ ಮತ್ತೆ ಆತ್ಮಾಹುತಿ ಬಾಂಬ್ ಸ್ಫೋಟವಾಗಿದೆ. ಗಡಾಫಿ ಕ್ರಿಕೆಟ್ ಮೈದಾನದ ಬಳಿ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಒಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಬಾಂಬ್ ದಾಳೀ ನಡೆದಾಗ ಗಡಾಫಿ ಮೈದಾನದಲ್ಲಿ ಪಾಕಿಸ್ತಾನ ಮತ್ತು ಜಿಂಬಾಬ್ವೆ ನಡುವೆ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು ಪಂದ್ಯವನ್ನು 20 ಸಾವಿರ ಜನ ವೀಕ್ಷಿಸುತ್ತಿದ್ದರು.[ಜೆಡಿಯು ನಾಯಕನಿಗೆ ಕಳಿಸಿದ್ದ ಪಾರ್ಸಲ್ ನಲ್ಲಿ ಬಾಂಬ್]

ಆಟೋದಲ್ಲಿ ಬಂದ ಆತ್ಮಾಹುತಿ ಬಾಂಬರ್‌ನನ್ನು ಕಲ್ಮಾ ಚೌಕದಲ್ಲಿ ತಡೆದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ಮಜೀದ್ ಪ್ರಶ್ನೆ ಮಾಡಿದರು. ಆಗ ಬಾಂಬರ್ ತನ್ನನ್ನು ತಾನೇ ಸ್ಫೋಟಿಸಿಕೊಂಡ. ಇದೊಂದು ಭಯೋತ್ಪಾದಕ ದಾಳಿಯಾಗಿತ್ತು ಎಂದು ಪಾಕ್ ಸಚಿವ ಪರ್ವೇಜ್ ರಶೀದ್ ತಿಳಿಸಿದ್ದಾರೆ.
ಸ್ಟೇಡಿಯಂನಿಂದ ಕೇವಲ ಒಂದು ಕಿ.ಮೀ. ದೂರದಲ್ಲಿ ಬಾಂಬ್ ಸ್ಫೋಟ ಮಾಡಲಾಗಿದೆ. ಎಸ್‌ಐ ಮತ್ತು ಇನ್ನೊಬ್ಬ ಮೃತಪಟ್ಟರಲ್ಲದೆ ನಾಲ್ವರು ಪೊಲೀಸ್ ಸಿಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದಾರೆ.[ಕುಡಿದ ಮತ್ತಿನಲ್ಲಿ ಸಿಎಂ ಮನೆಯಲ್ಲಿ ಬಾಂಬ್ ಇದೆ ಎಂದ!]
ಹಿಂದೆ ಶ್ರೀಲಂಕಾ ಮತ್ತು ಪಾಕ್ ನಡುವೆ ಸರಣಿ ನಡೆಯುತ್ತಿದ್ದಾಗ ಶ್ರೀಲಂಕಾ ಆಟಗಾರರಿದ್ದ ಬಸ್ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಅದಾದ ನಂತರ ಪಾಕಿಸ್ತಾನದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿರಲಿಲ್ಲ. ಈಗ ಜಿಂಬಾಬ್ವೆ ತಂಡ ಪ್ರವಾಸ ಮಾಡಿದಾಗಲೇ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದಾರೆ.[ಬಾಂಗ್ಲಾ ಟೂರ್ ನಂತರ ಭಾರತಕ್ಕೆ ಬಿಗಿ ವೇಳಾಪಟ್ಟಿ]
ಭಾರತ ಮತ್ತು ಪಾಕ್ ನಡುವೆ ಮತ್ತೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ಇಂಥ ಘಟನೆಗಳು ಹಿನ್ನಡೆ ಉಂಟು ಮಾಡಿದರೆ ಆಶ್ಚರ್ಯವಿಲ್ಲ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications