ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದಲ್ಲಿ ಭಾರತೀಯ ಸಿನಿಮಾ, ಜಾಹೀರಾತು ನಿಷೇಧ

|
Google Oneindia Kannada News

ಇಸ್ಲಾಮಾಬಾದ್, ಫೆಬ್ರವರಿ 26: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ದಾಳಿ ಮಾಡಿದ ಬೆನ್ನಲ್ಲೆ ಪಾಕಿಸ್ತಾನವು ಭಾರತದ ಚಲನಚಿತ್ರಗಳಿಗೆ ನಿಷೇಧ ಹೇರಿದೆ.

ಭಾರತವು ಗಡಿ ನಿಯಂತ್ರಣ ರೇಖೆಯನ್ನು ದಾಟಿ, ಪಾಕ್‌ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದೆ ಎಂದು ಪಾಕ್ ಹೇಳುತ್ತಿದ್ದು, ಭಾರತದ ಕಾರ್ಯಾಚರಣೆಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಉಗ್ರರ ಬೇಟೆಗೆ ವಾಯುಪಡೆ ಬಳಸಿದ್ದು 1.7 ಕೋಟಿ ಮೌಲ್ಯದ ಬಾಂಬ್!ಉಗ್ರರ ಬೇಟೆಗೆ ವಾಯುಪಡೆ ಬಳಸಿದ್ದು 1.7 ಕೋಟಿ ಮೌಲ್ಯದ ಬಾಂಬ್!

ಪಾಕಿಸ್ತಾನದಲ್ಲಿ ಭಾರತೀಯ ಸಿನಿಮಾಗಳಿಗೆ ಅಲ್ಲಿನ ಸಿನೆಮಾ ಎಕ್ಸಿಬಿಟರ್ಸ್‌ ಅಸೋಸಿಯೇಷನ್ ನಿಷೇಧ ಹೇರಿದೆ. ಭಾರತೀಯ ಜಾಹೀರಾತುಗಳಿಗೆ ನಿಷೇಧ ಹೇರಿದೆ ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಚೌದರಿ ಫವಾದ್ ಹುಸೇನ್ ಹೇಳಿದ್ದಾರೆ.

Pakistan boycotted Indian cinema and advertisments

ಬಾಲಿವುಡ್ ಸಿನಿಮಾಗಳಿಗೆ ಪಾಕಿಸ್ತಾನದಲ್ಲಿ ಉತ್ತಮ ಮಾರುಕಟ್ಟೆ ಇದೆ. ಬಾಲಿವುಡ್ ಬಹುತೇಕ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುತ್ತವೆ ಮತ್ತು ಉತ್ತಮವಾಗಿ ಪ್ರದರ್ಶನವೂ ಕಾಣುತ್ತವೆ.

ಬಾಲಕೋಟ್ ವೈಮಾನಿಕ ದಾಳಿ ಟಾರ್ಗೆಟ್ ಯೂಸುಫ್ ಅಜರ್! ಬಾಲಕೋಟ್ ವೈಮಾನಿಕ ದಾಳಿ ಟಾರ್ಗೆಟ್ ಯೂಸುಫ್ ಅಜರ್!

ಭಾರತದಲ್ಲಿ ಈಗಾಗಲೇ ಪಾಕಿಸ್ತಾನ ಕಲಾವಿದರಿಗೆ ನಿಷೇಧ ಹೇರಲಾಗಿದೆ. ಪಾಕ್‌ ಜೊತೆ ಕ್ರಿಕೆಟ್ ಆಡಬಾರದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ವೈಮಾನಿಕ ದಾಳಿಯಿಂದ ಸರ್ಜಿಕಲ್ ಸ್ಟ್ರೈಕ್ ಗಿಂತ ದೊಡ್ಡ ಮಟ್ಟದ ಹಾನಿವೈಮಾನಿಕ ದಾಳಿಯಿಂದ ಸರ್ಜಿಕಲ್ ಸ್ಟ್ರೈಕ್ ಗಿಂತ ದೊಡ್ಡ ಮಟ್ಟದ ಹಾನಿ

ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದ್ದು, ಭಾರತದ ಜೆಟ್‌ ವಿಮಾನಗಳು ಅಕ್ರಮವಾಗಿ ಭಾರತದ ಗಡಿ ಪ್ರವೇಶಿಸಿದೆ ಎಂದು ಆರೋಪಿಸಿದೆ. ಮತ್ತು ಪಾಕ್ ತನ್ನ ರಕ್ಷಿಸಿಕೊಳ್ಳುವ ಹಕ್ಕನ್ನು ಚಲಾಯಿಸುವುದಾಗಿ ಎಚ್ಚರಿಕೆ ನೀಡಿದೆ.

English summary
Cinema Exhibitors Association has boycotted Indian content, no Indian movie will be released in Pakistan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X