Get Updates
Get notified of breaking news, exclusive insights, and must-see stories!

ನ.24ರೊಳಗೆ ಕೋರ್ಟ್‌ಗೆ ಹಾಜರಾಗದಿದ್ದರೆ ಷರೀಫ್ ಘೋಷಿತ ಅಪರಾಧಿ

ಇಸ್ಲಾಮಾಬಾದ್, ಅಕ್ಟೋಬರ್ 10: ಅಕ್ರಮ ಆಸ್ತಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 24 ರ ಒಳಗೆ ಕೋರ್ಟ್ ಮುಂದೆ ಹಾಜರಾಗದಿದ್ದರೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಘೋಷಿತ ಅಪರಾಧಿ ಎಂದು ಆದೇಶಿಸಲಾಗುತ್ತದೆ ಎಂದು ಇಸ್ಲಾಮಾಬಾದ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಕಳೆದ ವರ್ಷ ನವೆಂಬರ್‌ನಿಂದ ಷರೀಫ್ ಅವರು ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಎಂಟು ವಾರಗಳ ಕಾಲ ಲಂಡನ್‌ಗೆ ತೆರಳಲು ನ್ಯಾಯಾಲಯ ಮತ್ತು ಸರ್ಕಾರ ಅನುಮತಿ ನೀಡಿತ್ತು. ಆದರೆ ಅವರು ಹಿಂದಿರುಗಿರಲಿಲ್ಲ.

ಅಲ್ ಅಜೀಜಿಯಾ ಸ್ಟೀಲ್ ಮಿಲ್ ಮತ್ತು ಅವೆನ್‌ಫೀಲ್ಡ್ ಪ್ರಕರಣ ಸಂಬಂಧ ನವಾಜ್ ಷರೀಫ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

Pakistan Court Asks Sharif To Appear By Nov 24 To Avoid Being Declared Proclaimed Offender

ಷರೀಫ್ ಅವರು ಗುಣಮುಖರಾಗುತ್ತಿದ್ದಾರೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.ನ್ಯಾಯಾಲಯವು ಷರೀಫ್ ವಿರುದ್ಧ ಜಾರಿಗೊಳಿಸಿರುವ ಜಾಮೀನು ರಹಿತ ವಾರಂಟ್‌ನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು.

ಘೋಷಿತ ಅಪರಾಧಿ ಎಂದು ಆದೇಶ ಹೊರಡಿಸಿದರೆ ಷರೀಫ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+