Pakistan Earthquake: ಪಾಕಿಸ್ತಾನದಲ್ಲಿ ಧರೆಗುರುಳಿದ ಕಟ್ಟಡಗಳು, 9 ಜನ ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ!

ಪಾಕಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು 9 ಜನರು ಸಾವನ್ನಪ್ಪಿದ್ದು 100 ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಕಳೆದ ದಿನ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಟ 9 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ 9 ಜನರು ಭೂಕಂಪನದಿಂದಾಗಿ ಸಾವನ್ನಪ್ಪಿದ್ದಾರೆ. ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶ ಎಂದು ಪಿಎಂಡಿ ಹೇಳಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.8 ಇದೆ.

Pakistan Earthquake

ಖೈಬರ್ ಪಖ್ತುಂಖ್ವಾ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ, ಪಾಕಿಸ್ತಾನದಲ್ಲಿ ಭೂಕಂಪದ ಸಮಯದಲ್ಲಿ ಛಾವಣಿ, ಗೋಡೆ ಮತ್ತು ಮನೆ ಕುಸಿದ ಘಟನೆಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಪಾಕಿಸ್ತಾನದ ಸ್ವಾತ್ ಜಿಲ್ಲಾ ಪೊಲೀಸ್ ಅಧಿಕಾರಿ ಶಫಿವುಲ್ಲಾ ಗಂದಾಪುರ್ ಜಿಲ್ಲೆಯಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸೈದು ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸಾವು ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಪಾಕಿಸ್ತಾನದ ಪಿಎಂಡಿ ಡಿಜಿ ಮೆಹರ್ ಸಾಹಿಬ್ಜಾದ್ ಖಾನ್ ಪ್ರಕಾರ, ಇಸ್ಲಾಮಾಬಾದ್, ಪೇಶಾವರ್, ಲಾಹೋರ್, ರಾವಲ್ಪಿಂಡಿ, ಕ್ವೆಟ್ಟಾ, ಕೊಹತ್, ಲಕ್ಕಿ ಮಾರ್ವತ್, ಡೇರಾ ಇಸ್ಮಾಯಿಲ್ ಖಾನ್, ದಕ್ಷಿಣ ವಜಿರಿಸ್ತಾನ್ ಮತ್ತು ದೇಶದ ಇತರ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.

Pakistan Earthquake

ಪಾಕಿಸ್ತಾನದ ವಿವಿಧ ಭಾಗಗಳಲ್ಲಿ ಛಾವಣಿಗಳು ಕುಸಿದಿವೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಝಿ ಹೇಳಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಭೂಕಂಪದಿಂದಾಗಿ ಕೆಲವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಭೂಕಂಪದ ನಂತರ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಾಗರೂಕರಾಗಿರಲು ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಕೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯದ ವಕ್ತಾರರು ಇಸ್ಲಾಮಾಬಾದ್‌ನಲ್ಲಿ ಪ್ರಮುಖ ಸರ್ಕಾರಿ ಆಸ್ಪತ್ರೆಗಳು ಹೆಚ್ಚಿನ ಎಚ್ಚರಿಕೆಯಲ್ಲಿ ಇರುವಂತೆ ಸೂಚಿಸಿದ್ದಾರೆ. ಆರೋಗ್ಯ ಸಚಿವ ಅಬ್ದುಲ್ ಖಾದಿರ್ ಪಟೇಲ್ ಸೂಚನೆ ಮೇರೆಗೆ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭಾರತದ ರಾಜಧಾನಿ ನವದೆಹಲಿ, ಪಂಜಾಬ್, ಉತ್ತರಾಖಂಡ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ ನಗರದ ದಕ್ಷಿಣ-ಆಗ್ನೇಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ದೆಹಲಿಯಲ್ಲೂ ಕಂಪನ
ರಾಷ್ಟ್ರೀಯ ರಾಜಧಾನಿಯಲ್ಲಿ ಮಂಗಳವಾರ ರಾತ್ರಿ 10:25 ಗಂಟೆಗೆ ಭಾರಿ ಭೂಕಂಪ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ಉತ್ತರ ಭಾರತದ ವಿವಿಧ ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.6 ರ ತೀವ್ರತೆಯ ಭೂಕಂಪ ಅಫ್ಘಾನಿಸ್ತಾನದ ಫೈಜಾಬಾದ್‌ನ 133 ಕಿಮೀ ಆಳದಲ್ಲಿ ರಾತ್ರಿ 10:17ಕ್ಕೆ ಸಂಭವಿಸಿದೆ.

ಕಂಪನದ ಅನುಭವವಾದ ತಕ್ಷಣ ಸ್ಥಳೀಯ ನಿವಾಸಿಗಳು ಮನೆಯಿಂದ ಸುರಕ್ಷಿತ ಸ್ಥಳಗಳಿಗೆ ಓಡಿಹೋಗಿದ್ದಾರೆ. ಟ್ವಿಟರ್‌ನಲ್ಲಿ ಹಲವಾರು ಬಳಕೆದಾರರು ದೆಹಲಿಯಲ್ಲಿ ಭೂಕಂಪದ ವಿಡಿಯೊ ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ನಗರಗಳಲ್ಲಿ ಜನರು ತಮ್ಮ ಮಕ್ಕಳೊಂದಿಗೆ ತಮ್ಮ ಮನೆಗಳಿಂದ ಓಡಿಹೋಗುತ್ತಿರುವುದು ಕಂಡುಬಂದಿದೆ.

ಕಂಪನದ ಅನುಭವವಾದ ನಂತರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಧಾವಿಸುತ್ತಿರುವುದು ಕಂಡುಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ವಸುಂಧರಾದಲ್ಲಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗುತ್ತಿದ್ದಂತೆ ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಧಾವಿಸುತ್ತಿರುವುದು ಕಂಡುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+