Pakistan Elections: ಇಮ್ರಾನ್ ಖಾನ್ ಔಟ್‌; ಷರೀಫ್-ಭುಟ್ಟೊ ಫ್ಯಾಮಿಲಿಗಳ ಸಮ್ಮಿಶ್ರ ಸರ್ಕಾರ ಫಿಕ್ಸ್‌

ಪಾಕಿಸ್ತಾನದಲ್ಲಿ ಬಹುತೇಕ ಚುನಾವಣಾ ಫಲಿತಾಂಶಗಳು ಹೊರಬಿದ್ದಿವೆ. ಈ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಂದಿಲ್ಲ. ಹೀಗಾಗಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ರಾಷ್ಟ್ರೀಯ ಮಟ್ಟದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಂದ ಮಾಡಿಕೊಂಡಿವೆ ಎಂದು ವರದಿಯಾಗಿದೆ.

ಶೆಹಬಾಜ್ ಷರೀಫ್ ಅವರು ಬಿಲಾವಲ್ ಭುಟ್ಟೊ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರೊಂದಿಗೆ ಚರ್ಚೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Pakistan Election 2024: Nawaz Sharif & Zardari Come Together To Form Government

ಈ ಹಿಂದೆ ಪಿಎಂಎಲ್ -ಎನ್ ಪಕ್ಷದ ನಾಯಕ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಬೆಂಬಲಿಗರನ್ನು ಉದ್ದೇಶಿಸಿ ದೊಡ್ಡ ಹೇಳಿಕೆ ನೀಡಿದ್ದು, ನಮ್ಮ ಪಕ್ಷವು ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಪಡೆದಿದೆ. ಹೀಗಾಗಿ ಬೇರೆ ಪಕ್ಷಗಳೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲಿದ್ದೇವೆ. ಸಂಕಷ್ಟದಲ್ಲಿರುವ ಪಾಕಿಸ್ತಾನವನ್ನು ಹೊರತರಲುಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ್ದರು.

ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ ಗುರುವಾರ ಮುಕ್ತಾಯಗೊಂಡಿದ್ದು, ಸಂಜೆ 5 ಗಂಟೆಗೆ ಮತದಾನ ಮುಗಿದ ತಕ್ಷಣ ಎಣಿಕೆ ಪ್ರಾರಂಭ ಮಾಡಲಾಗಿತ್ತು. ಪಾಕಿಸ್ತಾನದ​ ಚುನಾವಣಾ ಕಣದಲ್ಲಿ ಹತ್ತಾರು ಪಕ್ಷಗಳು ಇದ್ದರೂ ಇಮ್ರಾನ್ ಖಾನ್ ಅವರ ಪಿಟಿಐ ಮತ್ತು ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಅಂದ್ರೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಡುವೆ ಪೈಪೋಟಿ ಏರ್ಪಟ್ಟಿತ್ತು. 265 ಸ್ಥಾನಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಹುತೇಕ ಅತಂತ್ರ ಫಲಿತಾಂಶ ಹೊರ ಬಿದ್ದಿದ್ದೆ.

Pakistan Election 2024: Nawaz Sharif & Zardari Come Together To Form Government

ಇದೀಗ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ರಾಷ್ಟ್ರೀಯ ಮಟ್ಟದಲ್ಲಿ ಸಮ್ಮಿಶ್ರ ಸರ್ಕಾರವನ್ನು ಸ್ಥಾಪಿಸಲು ಒಪ್ಪಂದ ಮಾಡಿಕೊಂಡಿವೆ. ಈ ಬಗ್ಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್ ಈ ಬಗ್ಗೆ ಮಾತನಾಡಿದ್ದು, "ಪಾಕಿಸ್ತಾನ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ನಾವು ನಿಮ್ಮೆಲ್ಲರನ್ನು ಅಭಿನಂದಿಸುತ್ತೇವೆ. ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನು ನಾವು ಗೌರವಿಸುತ್ತೇವೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು, ನಮ್ಮೊಂದಿಗೆ ಕೈ ಜೋಡಿಸುವಂತೆ ಅವರೆಲ್ಲರನ್ನೂ ಆಹ್ವಾನಿಸುತ್ತೇವೆ. ದೇಶದ ನಮ್ಮ ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತೇವೆ" ಎಂದು ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+