ಪಾಕಿಸ್ತಾನ ವಿದೇಶಾಂಗ ಸಚಿವರಿಗೂ ಅಂಟಿದ ಕೊರೊನಾವೈರಸ್
ಇಸ್ಲಮಾಬಾದ್, ಜುಲೈ.03: ನೊವೆಲ್ ಕೊರೊನಾವೈರಸ್ ಎಂಬ ಹೆಮ್ಮಾರಿ ಯಾರ ಹೆಗಲನ್ನು ಬಿಡುತ್ತಿಲ್ಲ. ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಶಿ ಅವರಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
Recommended Video
ತಮಗೆ ಕೊರೊನಾವೈರಸ್ ಸೋಂಕು ತಗಲಿರುವ ಬಗ್ಗೆ ಸ್ವತಃ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಶಿ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸ್ವಯಂಪ್ರೇರಿತರಾಗಿ ಗೃಹ ದಿಗ್ಬಂಧನದಲ್ಲಿ ಇರುವುದಾಗಿ ತಿಳಿಸಿದ್ದಾರೆ.
ವೈದ್ಯರು ನಡೆಸಿದ ಕೊವಿಡ್-19 ತಪಾಸಣೆ ವೇಳೆಯಲ್ಲಿ ನನಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಹೀಗಿದ್ದರೂ ನಾನು ಗುಣಮುಖನಾಗುತ್ತೇನೆ ಎಂಬ ಆತ್ಮವಿಶ್ವಾಸ ನನ್ನಲ್ಲಿದೆ. ಮನೆಯಲ್ಲಿ ಇದ್ದುಕೊಂಡೇ ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತೇನೆ. ಆದಷ್ಟು ಬೇಗ ಗುಣಮುಖವಾಗುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾ ಮೊಹಮ್ಮದ್ ಖುರೇಶಿ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದಲ್ಲಿ 2 ಲಕ್ಷ ಮಂದಿಗೆ ಕೊವಿಡ್-19 ಸೋಂಕು:
ಪಾಕಿಸ್ತಾನದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ದೇಶದಲ್ಲಿ ಇದುವರೆಗೂ 2,21 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಸೋಂಕುಲ ತಗಲಿದ್ದು, ಮಹಾಮಾರಿಗೆ 4500ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications