Imran Khan Arrest: 3 ತಿಂಗಳಲ್ಲಿ 2 ಬಾರಿ ಜೈಲು ಸೇರಿದ ಪಾಕಿಸ್ತಾನ ಮಾಜಿ ಪ್ರಧಾನಿ!
ಇಸ್ಲಾಮಾಬಾದ್: ಅರಾಜಕತೆಯ ನಾಡು & ಭ್ರಷ್ಟಾಚಾರದ ಬೀಡು ಪಾಕಿಸ್ತಾನ ಮತ್ತೊಮ್ಮೆ ಜಗತ್ತಿನ ಎದುರು ತನ್ನ ಮಾನ ತಾನೇ ಹರಾಜು ಹಾಕಿಕೊಂಡಿದೆ. ಅದರಲ್ಲೂ ಪಾಕಿಸ್ತಾನದ ಜನಪ್ರತಿನಿಧಿಗಳಿಗೆ ಜೈಲು ಒಂದು ರೀತಿ ಅಜ್ಜಿ ಮನೆಯಂತಾಗಿದೆ. ಪದೇ ಪದೆ ಪಾಕಿಸ್ತಾನದ ರಾಜಕಾರಣಿಗಳು ಜೈಲು ಸೇರುತ್ತಿದ್ದು, ಈಗ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಕಂಬಿ ಎಣಿಸಲು ಹೋಗಿದ್ದಾರೆ.
ಇಮ್ರಾನ್ ಖಾನ್ ವಿರುದ್ಧದ ತೋಶಾಖಾನಾ ಭ್ರಷ್ಟಾಚಾರ ಕೇಸ್ ಸಾಬೀತಾಗಿದ್ದು, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾಖ್ ಖಾನ್ 3 ವರ್ಷ ಜೈಲು ಶಿಕ್ಷೆ ಅನುಭವಿಸುವುದು ಗ್ಯಾರಂಟಿ ಆಗಿದೆ. ಹೀಗಾಗಿ ಇಮ್ರಾನ್ ಖಾನ್‌ಗೆ ಜೈಲೂಟ ರೆಡಿ ಮಾಡಿದ್ದಾರೆ ಅಧಿಕಾರಿಗಳು. ಇದರ ಬೆನ್ನಲ್ಲೇ ಐದು ವರ್ಷ ರಾಜಕೀಯದಲ್ಲಿ ತೊಡಗಿಸಿಕೊಳ್ಳದಂತೆ ಅನರ್ಹಗೊಳಿಸಿದೆ ಪಾಕ್‌ನ ನ್ಯಾಯಾಂಗ ವ್ಯವಸ್ಥೆ. ಇಮ್ರಾನ್ ಖಾನ್ ಪ್ರಧಾನಿಯಾಗಿದ್ದಾಗ ವಿದೇಶಗಳ ಗಣ್ಯರಿಂದ ವಾಚ್ ಸೇರಿ ಹಲವು ದುಬಾರಿ ವಸ್ತುಗಳನ್ನ ಪಡೆದು ಸರ್ಕಾರಿ ಅಧಿಕಾರಿಗಳಿಗೆ ಮಾರಿದ್ದರೆಂಬ ಆರೋಪ ಇದಾಗಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಪರಿಸ್ಥಿತಿ ಇದು!
ಇನ್ನು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಪಾಕಿಸ್ತಾನ ಚುನಾವಣೆ ಆಯೋಗ ಕಳೆದ ವರ್ಷ ಕೇಸ್ ದಾಖಲಿಸಿತ್ತು. ಈ ರೀತಿ ಗಿಫ್ಟ್ ಮಾರಾಟದಿಂದ ₹14 ಕೋಟಿಗೂ ಹೆಚ್ಚು ಹಣವನ್ನು ಇಮ್ರಾನ್ ಖಾನ್ ಗಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇಂದು ಇಸ್ಲಾಮಾಬಾದ್ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಹುಮಾಯುನ್ ದಿಲವಾರ್ ತೀರ್ಪು ನೀಡಿ, ಇಮ್ರಾನ್‌ಗೆ ಜೈಲು ಶಿಕ್ಷೆ ವಿಧಿಸಿದ್ದಾರೆ. ಒಂದು ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದ್ದು, ದಂಡದ ಪಾವತಿ ಮಾಡದಿದ್ದರೆ ಹೆಚ್ಚುವರಿಯಾಗಿ 6 ತಿಂಗಳು ಜೈಲು ಕಂಬಿ ಎಣಿಸಬೇಕು ಎಂದು ಖಾನ್ ಅವರಿಗೆ ಆದೇಶ ನೀಡಲಾಗಿದೆ. ಹೀಗಾದರೆ 3 ವರ್ಷಗಳ ಜೊತೆ ಹೆಚ್ಚುವರಿಯಾಗಿ ಒಟ್ಟು 6 ತಿಂಗಳು ಶಿಕ್ಷೆ ಅನುಭವಿಸಬೇಕು.
ಅರ್ಜಿ ವಜಾಗೊಳಿಸಿದ್ದ ಸುಪ್ರೀಂಕೋರ್ಟ್
ನಿನ್ನೆ ತೋಶಾಖಾನಾ ಭ್ರಷ್ಟಾಚಾರ ಕೇಸ್‌ನ ವಿಚಾರಣೆಯನ್ನು ಪ್ರಶ್ನಿಸಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಪಾಕಿಸ್ತಾನದ ಸುಪ್ರೀಂ ಕೋರ್ಟ್ ನಿನ್ನೆ ಇಮ್ರಾನ್ ಖಾನ್ ಅರ್ಜಿ ವಜಾಗೊಳಿಸಿತ್ತು. ಉಡುಗೊರೆಗಳ ವಿವರಗಳನ್ನು ತಮ್ಮ ಬಳಿಯೇ ಇಟ್ಟುಕೊಟ್ಟಿಕೊಂಡಿದ್ದ ಆರೋಪ ಮತ್ತು ವಿದೇಶಕ್ಕೆ ಭೇಟಿ ನೀಡಿದಾಗ ಗಿಫ್ಟ್ ಆಗಿ ಬಂದಿದ್ದ ವಸ್ತುಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿದ್ದ ಆರೋಪವೂ ಖಾನ್ ಮೇಲಿದೆ. ಇದೀಗ ಅಂತಿಮವಾಗಿ ಮೂರು ವರ್ಷ ಜೈಲು ಶಿಕ್ಷೆಗೆ ಇಮ್ರಾನ್ ಖಾನ್ ಗುರಿಯಾಗಿದ್ದಾರೆ.

ಇಮ್ರಾನ್ ಖಾನ್ ಮೈತುಂಬಾ ಕೇಸ್!
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ವಿರುದ್ಧ 5 ಸಾವಿರ ಕೋಟಿ ರೂಪಾಯಿ ಲ್ಯಾಂಡ್ ಡೀಲ್ ಹಗರಣವಿದೆ. ಕೇಸ್ ಸಂಬಂಧ ಇಮ್ರಾನ್ ಖಾನ್ ಜೈಲು ಸೇರಿದ್ದರು. ಪಾಕಿಸ್ತಾನದ ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ಮಂಡಳಿ ಖಾನ್‌ನ ಅರೆಸ್ಟ್ ಮಾಡಿತ್ತು. ಆದರೆ ಪಾಕ್ ಸುಪ್ರೀಂಕೋರ್ಟ್ ಮಧ್ಯಪ್ರವೇಶದ ನಂತರ ಇಮ್ರಾನ್ ಖಾನ್ ಬಿಡುಗಡೆ ಆಗಿದ್ದರು. ಈ ಪ್ರಕರಣವೂ ಸೇರಿದಂತೆ ಇಮ್ರಾನ್ ಖಾನ್ ವಿರುದ್ಧ ನೂರಕ್ಕೂ ಹೆಚ್ಚು ಕೇಸ್‌ಗಳು ಇವೆ. ಇಮ್ರಾನ್ ಖಾನ್ ಎಲ್ಲಾ ಪ್ರಕರಣಗಳಲ್ಲಿ ಸಿಲುಕಿ ನರಳುವಾಗಲೇ ಜೈಲು ಶಿಕ್ಷೆ ಬೇರೆ ಪ್ರಕಟವಾಗಿದೆ.
ಇದೆಲ್ಲಾ ಒಂದು ಕಡೆ ಇರಲಿ, ಇದೀಗ ಇಮ್ರಾನ್ ಖಾನ್ ಬಂಧನದ ಬೆನ್ನಲ್ಲೇ ಪಾಕಿಸ್ತಾನದ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗಿದೆ. ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ಇಮ್ರಾನ್ ಖಾನ್ ಪಕ್ಷ ಪಿಟಿಐ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಇಮ್ರಾನ್ ಬೆಂಬಲಿಗರು ಇದೀಗ ಉಗ್ರ ಪ್ರತಿಭಟನೆ ನಡೆಸುವ ಭೀತಿ ಕೂಡ ಆವರಿಸಿದೆ. ಕಳೆದ 3 ತಿಂಗಳಲ್ಲಿ 2 ಬಾರಿ ಇಮ್ರಾನ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮೇ ತಿಂಗಳಲ್ಲಿ ಹೀಗೆ ಇಮ್ರಾನ್ ಬಂಧನವಾಗಿತ್ತು ಆಗ ಇಮ್ರಾನ್ ಖಾನ್ ಬೆಂಬಲಿಗರು ಪಾಕ್ ಮಿಲಿಟರಿ ಪ್ರದೇಶಕ್ಕೆ ನುಗ್ಗಿ ದಾಳಿ ಮಾಡಿದ್ದರು ಎಂಬ ಆರೋಪವಿದೆ. ಈ ಬಾರಿ ಕೂಡ ಅಂತಹದ್ದೇ ಹಿಂಸೆ ನಡೆಯುವ ಭೀತಿಯೂ ಇದ್ದು ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications