ಭಾರತದ ವಿರುದ್ಧ ಸೈಬರ್ ವಾರ್ ಆರಂಭಿಸಿದ ಪಾಕಿಸ್ತಾನ

ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನವು ಕೊರೊನಾ ಸೋಂಕಿತರನ್ನು ಭಾರತದೊಳಗೆ ನುಸುಳುವಂತೆ ಮಾಡುತ್ತಿದೆ ಎನ್ನುವ ಮಾಹಿತಿ ಲಭ್ಯವಾದ ಬೆನ್ನಲ್ಲೇ ಮತ್ತೊಂದು ಆರೋಪ ಕೇಳಿಬಂದಿದೆ.

ಪಾಕಿಸ್ತಾನವು ಭಾರತದ ವಿರುದ್ಧ ವಾರ್ ಆರಂಭಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಇದೆಲ್ಲದರ ಹಿಂದೆ ಇಂಟರ್‌ ಸರ್ವೀಸಸ್ ಇಂಟೆಲಿಜೆನ್ಸ್ ಇದೆ ಎನ್ನುವುದನ್ನು ಭಾರತದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೊಲ್ಲಿ ರಾಷ್ಟ್ರ ಸೇರಿದಂತೆ ವಿಶ್ವದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೆಚ್ಚುಗೆಗಳ ಮಹಾಪೂರವೇ ಹರಿದುಬರುತ್ತಿದೆ.

Pakistan Has Launched A Cyberwar Against India

ಇನ್ನೊಂದೆಡೆ ಪಾಕಿಸ್ತಾನವು ಕೊಲ್ಲಿ ರಾಷ್ಟ್ರಗಳಲ್ಲಿ ದ್ವೇಷ ಹುಟ್ಟಿಸುವಂತಹ ಕೃತ್ಯಕ್ಕೆ ಕೈಹಾಕಿದ್ದು, ಸಾಮಾಜಿಕ ಜಾಲತಾಣಗಳನ್ನು ಅದರ ವೇದಿಕೆಯನ್ನಾಗಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಪಾಕಿಸ್ತಾನದಲ್ಲಿ ಇದುವರೆಗೆ 10,531 ಮಂದಿಗೆ ಕೊರೊನಾ ಹರಡಿದೆ. 224 ಮಂದಿ ಮೃತಪಟ್ಟಿದ್ದಾರೆ.

ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಪ್ರತಿನಿತ್ಯ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದಾರೆ. ಇದರಿಂದ ಬಿಎಸ್‌ಎಫ್ ಯೋಧರ ಗಮನ ಬೇರೆಡೆಗೆ ಸೆಳೆದು ಸೋಂಕಿತರನ್ನು ಒಳನುಸುಳಿಸುವ ಪ್ರಯತ್ನಕ್ಕೆ ಪಾಕಿಸ್ತಾನ ಕೈ ಹಾಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+