• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನ: ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್, ಹಿಂದೂ ಯುವತಿ ಆತ್ಮಹತ್ಯೆ

|

ಸಿಂಧ್, ಅಕ್ಟೋಬರ್ 1: ಅತ್ಯಾಚಾರವೆಸಗಿ ಕಾಮುಕರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾರಣ ಮನನೊಂದು ಹಿಂದೂ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 2019ರ ಜುಲೈ ತಿಂಗಳಿನಲ್ಲಿ 17 ವರ್ಷದ ಹಿಂದೂ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರ ವೆಸಗಿದ ಆರೆೋಪಿಗಳು ಪದೇ ಪದೇ ಬ್ಲಾಕ್ ಮೇಲ್ ಮಾಡಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಹತ್ತಾರು ಮುಖಗಳು: ಪೊಲೀಸ್, ಕುಟುಂಬ, ರಾಜಕೀಯಹತ್ರಾಸ್ ಅತ್ಯಾಚಾರ ಪ್ರಕರಣದ ಹತ್ತಾರು ಮುಖಗಳು: ಪೊಲೀಸ್, ಕುಟುಂಬ, ರಾಜಕೀಯ

ಮಾವ ಹಕ್ಕುಗಳ ಕಾರ್ಯಕರ್ತ ಸಂತ್ರಾ ಮಂಜಾನಿ, ಭೀಮ್ ರಾಜ್ ಹಾಗೂ ಇನ್ನಿತರರು ಪ್ರಕರಣವನ್ನು ಖಂಡಿಸಿದ್ದಾರೆ ಹಾಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ.

ಅತ್ಯಾಚಾರಿಗಳು ಪ್ರಭಾವಿಗಳು

ಅತ್ಯಾಚಾರಿಗಳು ಪ್ರಭಾವಿಗಳು

ಅತ್ಯಾಚಾರಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಪ್ರಕರಣ ಸಂಬಂಧ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅಬ್ದುಲ್ಲಾ ಅಹ್ಮೆದ್ಯಾರ್ ಅವರು, ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಘಟನೆ ಸಂಬಂಧ ಪ್ರತಿಭಟನೆಗಳು ಭುಗಿಲೆದ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸುತ್ತಿವೆ.

ಬಾವಿಗೆ ಜಿಗಿದು ಯುವತಿ ಆತ್ಮಹತ್ಯೆ

ಬಾವಿಗೆ ಜಿಗಿದು ಯುವತಿ ಆತ್ಮಹತ್ಯೆ

ಆರೋಪಿಗಳು ಯುವತಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಬಾವಿಯೊಂದಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ.

ವಿಡಿಯೋವನ್ನು ಮಾಡಿದ್ದರು

ವಿಡಿಯೋವನ್ನು ಮಾಡಿದ್ದರು

ಆರೋಪಿಗಳು ಅತ್ಯಾಚಾರ ವೆಸಗಿದ್ದೂ ಅಲ್ಲದೆ, ಘಟನೆಯ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದರು. ಆರೋಪಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸಂಬಂಧಿಕರು ಹೇಳಿದ್ದಾರೆ.

English summary
A 17-year old Hindu girl, who was allegedly raped a year earlier, committed suicide in Pakistan's Tharparkar district after she was reportedly blackmailed by the accused who raped her and are out on bail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X