
Imran Khan Shot At Rally : ರ್‍ಯಾಲಿಯಲ್ಲಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ
ಇಸ್ಲಾಮಾಬಾದ್, ನ.03: ಪಾಕಿಸ್ತಾನದ ಗುಜ್ರಾನ್‌ವಾಲಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ರ್‍ಯಾಲಿ ನಡೆಯುತ್ತಿದ್ದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಾಲಿಗೆ ಬ್ಯಾಂಡೇಜ್ ಹಾಕಲಾಗಿದ್ದು, ಕಾರಿಗೆ ಸ್ಥಳಾಂತರಿಸಲಾಯಿತು. ಮಾಜಿ ಪ್ರಧಾನಿ ಗಂಭೀರ ಗಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಇಮ್ರಾನ್ ಖಾನ್ ಪ್ರತಿಭಟನಾ ರ್‍ಯಾಲಿ ಟ್ರಕ್ಗೆ ಸಿಲುಕಿ ಪಾಕ್ ಪತ್ರಕರ್ತೆ ಸಾವು
ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧದ "ಲಾಂಗ್ ಮಾರ್ಚ್" ಭಾಗವಾಗಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಟ್ರಕ್ ಮೇಲೆ ನಿಂತಿದ್ದಾಗ ಶೂಟರ್ ಗುಂಡು ಹಾರಿಸಿದ್ದಾನೆ. ಆರೋಪಿ ಶೂಟರ್‌ನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಚಾನೆಲ್ ಜಿಯೋ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್‌ನಲ್ಲಿ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿರುವ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್, ಹೊಸ ಕೇಂದ್ರ ಸರ್ಕಾರದ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.
#BREAKING: Former Pakistan Prime Minister Imran Khan injured with bullet injury in firing during long march in Wazirabad, Pakistan. Video of Imran Khan being taken away. Condition unknown. pic.twitter.com/IR2TM1F8hp
— Aditya Raj Kaul (@AdityaRajKaul) November 3, 2022