• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಗ್ರರ ನೆಲೆ ಧ್ವಂಸ: ಭಾರತದ ಬಳಿ ಪುರಾವೆ ಕೇಳಿದ ಪಾಕಿಸ್ತಾನ

|

ಇಸ್ಲಾಮಾಬಾದ್, ಅಕ್ಟೋಬರ್ 22: ಪಾಕ್ ಆಕ್ರಮಿತ ಕಾಶ್ಮೀರದ ಮೂರು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದ್ದೇವೆ ಎಂಬ ಭಾರತೀಯ ಸೇನೆಯ ಹೇಳಿಕೆ ಸುಳ್ಳು ಎಂದು ಪಾಕಿಸ್ತಾನ ಪ್ರತಿಪಾದಿಸಿದೆ.

ಯಾವುದೇ ವಿದೇಶಿ ರಾಯಭಾರಿ ಅಥವಾ ಮಾಧ್ಯಮಗಳನ್ನು ದಾಳಿ ನಡೆಸಿದ ಸ್ಥಳಕ್ಕೆ ಕರೆತಂದು ತನ್ನ ವಾದವನ್ನು ಸಾಬೀತುಪಡಿಸಲು ಎಂದು ಸವಾಲು ಹಾಕಿದೆ. ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ.

   ಪಾಕಿಸ್ತಾನಕ್ಕೆ ಭಾರತ ಕೊಟ್ಟ ಎಚ್ಚರಿಕೆ ನೋಡಿ ಎಲ್ಲರೂ ಶಾಕ್ | Bipin Rawat | Oneindia Kannada

   ಮೂರು ಉಗ್ರಗಾಮಿ ಶಿಬಿರಗಳು ನಾಶವಾಗಿದೆ. ಒಂದು ಶಿಬಿರಕ್ಕೆ ತೀವ್ರ ರೀತಿಯ ಹಾನಿಯಾಗಿದೆ. ಆರರಿಂದ ಹತ್ತು ಪಾಕಿಸ್ತಾನಿ ಯೋಧರ ಹತ್ಯೆಯಾಗಿದೆ.

   ಪಾಕಿಸ್ತಾನಕ್ಕೆ ತಕ್ಕ ಉತ್ತರ, 3 ಉಗ್ರನೆಲೆ ಧ್ವಂಸ: ರಾವತ್ ಹೇಳಿದ್ದೇನು?

   ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಉಗ್ರರು ಸಾವಿಗೀಡಾಗಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿಕೆ ನೀಡಿದ್ದರು.ಕನಿಷ್ಠ 35 ಉಗ್ರರು ಈ ದಾಳಿ ವೇಳೆ ಹತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಮಾಡಲಾಗಿತ್ತು. ಆದರೆ ನಾಗರಿಕ ಪ್ರದೇಶಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ದೂಷಿಸಿತ್ತು.

   ಮೂರು ಭಯೋತ್ಪಾದಕ ಶಿಬಿರಗಳ ನಾಶ

   ಮೂರು ಭಯೋತ್ಪಾದಕ ಶಿಬಿರಗಳ ನಾಶ

   ಭಾರತೀಯ ಸೇನಾ ಮುಖ್ಯಸ್ಥರು ಮೂರು ಶಿಬಿರಗಳನ್ನು ನಾಶ ಮಾಡಿರುವುದಾಗಿ ಹೇಳಿದ್ದಾರೆ. ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರ ಹೇಳಿಕೆಯಿಂದ ಬೇಸರವಾಗಿದೆ ಎಂದಿದೆ.

   ದಾಳಿ ಮಾಡಲು ಅಲ್ಲಿ ಶಿಬಿರಗಳೇ ಇಲ್ಲ

   ದಾಳಿ ಮಾಡಲು ಅಲ್ಲಿ ಶಿಬಿರಗಳೇ ಇಲ್ಲ

   ದಾಳಿ ಮಾಡಲು ಅಲ್ಲಿ ಶಿಬಿರಗಳೇ ಇಲ್ಲ. ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಯಾವುದೇ ವಿದೇಶಿ ರಾಜತಾಂತ್ರಿಕ, ಮಾಧ್ಯಮದವರನ್ನು ಕರೆತಂದು ತಮ್ಮ ವಾದವನ್ನು ಸಾಬೀತುಪಡಿಸಲಿ ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಟ್ವೀಟ್ ಮಾಡಿದ್ದಾರೆ.

   ಶಾಂತಿಗೆ ತೊಡಕಾಗಿದೆ ಎಂದು ಪಾಕ್

   ಶಾಂತಿಗೆ ತೊಡಕಾಗಿದೆ ಎಂದು ಪಾಕ್

   ಪುಲ್ವಾಮಾ ದಾಳಿ ಬಳಿಕ ಭಾರತೀಯ ಸೇನಾ ನಾಯಕತ್ವದ ಸುಳ್ಳು ಹೇಳಿಕೆ ನೀಡುವ ಪ್ರವೃತ್ತಿ ಈ ಭಾಗದ ಶಾಂತಿಗೆ ತೊಡಕಾಗಿದೆ. ಇದು ವೃತ್ತಿಪರ ಮಿಲಿಟರಿ ನೈತಿಕತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

   ಭಾರತದ ಅಂಚೆಗೆ ಪಾಕಿಸ್ತಾನ ನಿಷೇಧ

   ಭಾರತದ ಅಂಚೆಗೆ ಪಾಕಿಸ್ತಾನ ನಿಷೇಧ

   ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕಾರಣಕ್ಕೆ ಭಾರತದ ವಿರುದ್ಧ ಆಕ್ರೋಶಗೊಂಡಿರುವ ಪಾಕಿಸ್ತಾನ ಇದೀಗ ಉಭಯ ದೇಶಗಳ ನಡುವಣ ಅಂಚೆ ವ್ಯವಹಾರಕ್ಕೆ ನಿಷೇಧ ಹೇರಿದೆ. ಕಳೆದ ಒಂದೂವರೆ ತಿಂಗಳಿಂದ ಭಾರತದಿಂದ ಹೋಗುತ್ತಿರುವ ಅಂಚೆಗೆ ಆ ದೇಶ ಸ್ವೀಕರಿಸುತ್ತಿಲ್ಲ. ಇದರಿಂದಾಗಿ ಎರಡೂ ದೇಶಗಳ ನಾಗರಿಕರಿಗೆ ಹಲವು ಸಮಸ್ಯೆಗಳು ಎದುರಾಗಿವೆ.

   English summary
   Description: In a bid to refute India's claim of targeting terror launch pads along the Line of Control (LoC), Pakistan has invited all foreign missions in Islamabad to visit the areas and observe the ground situation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X