'ಪಾಕಿಸ್ತಾನ್ ಜಿಂದಾಬಾದ್' ಎಂದ ಅಮೂಲ್ಯ ಬಗ್ಗೆ ಪಾಕ್ ಮಾಧ್ಯಮಗಳ ಸುದ್ದಿ

Recommended Video

      Pakistan Media Reports about Amulya Leona Slogan And Incident | Media | India | Pakistan

      ಇಸ್ಲಮಾಬಾದ್, ಫೆಬ್ರವರಿ.21: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಬಗ್ಗೆ ಪಾಕಿಸ್ತಾನ್ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ಪಾಕಿಸ್ತಾನದ ಡಾನ್ ಪತ್ರಿಕೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿದ ವಿಡಿಯೋ ಸಮೇತ ಸುದ್ದಿಯನ್ನು ಪ್ರಕಟಿಸಲಾಗಿದೆ.
      ಮೊದಲು ಎರಡರಿಂದ ಮೂರು ಬಾರಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಅಮೂಲ್ಯ ಲಿಯೋನಾ, ಮೈಕ್ ಕಿತ್ತುಕೊಳ್ಳುವ ವೇಳೆಗೆ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ ಎಂದು ಪಾಕಿಸ್ತಾನ್ ಮಾಧ್ಯಮಗಳಲ್ಲಿ ವರದಿಯಾಗಿದೆ.

      ವಿಜಯದ ಸಂಕೇತ ತೋರಿಸಿದ ಅಮೂಲ್ಯ ಲಿಯೋನಾ
      ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರೆಂಟ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಎದುರಿನಲ್ಲೇ ಅಮೂಲ್ಯ ಲಿಯೋನಾ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಳು.

       Pakistan Media Also Report About Amulya Leona

      ಅಮೂಲ್ಯ ಲಿಯೋನಾ ವಿರುದ್ಧ ದೇಶದ್ರೋಹಿ ಪ್ರಕರಣ:
      ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 124ಎ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
      ಇನ್ನೊಂದಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಿವಪುರ ಗ್ರಾಮದಲ್ಲಿ ಇರುವ ಅಮೂಲ್ಯ ಲಿಯೋನಾ ತಂದೆ ವಾಜಿ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಬಗ್ಗೆಯೂ ಪಾಕಿಸ್ತಾನ್ ಮಾಧ್ಯಮಗಳಲ್ಲಿ ವರದಿಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+