Get Updates
Get notified of breaking news, exclusive insights, and must-see stories!

370 ನೇ ವಿಧಿ ರದ್ದು: ತಕ್ಕ ಉತ್ತರ ನೀಡಲು ಸಿದ್ಧ ಎಂದ ಪಾಕಿಸ್ತಾನ

ಇಸ್ಲಾಮಾಬಾದ್, ಆಗಸ್ಟ್ 05: ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸದ ಭಾರತ ಸರ್ಕಾರದ ನಿರ್ಣಯಕ್ಕೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.

ಭಾರತ ಯಾವುದೇ ರೀತಿಯ ಅಕ್ರಮ ಹೆಜ್ಜೆಯನ್ನಿಟ್ಟರೆ ಅದಕ್ಕೆ ತಕ್ಕ ಉತ್ತರ ನೀಡಲು ನಾವು ಸಿದ್ಧರಾಗಿದ್ದೇವೆ. ಕಾಶ್ಮೀರದೊಂದಿಗೆ ಪಾಕಿಸ್ತಾನಕ್ಕೆ ಇರುವ ಸಂಬಂಧ ಹೀಗೆಯೇ ಮುಂದುವರಿಯುತ್ತದೆ ಎಂಬುದನ್ನು ಪುನರುಚ್ಚರಿಸಲು ಇಷ್ಟಪಡುತ್ತೇವೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ಇಂದು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕೆ ರಾಷ್ಟ್ರಪತಿಗಳ ಅಂಕಿತವೂ ದೊರೆತಿದ್ದು, ಇನ್ನು ಮುಮದೆ ಜಮ್ಮು ಮತ್ತು ಕಾಶ್ಮೀರಕ್ಕೂ ಭಾರತದ ಎಲ್ಲ ರಾಜ್ಯಗಳಂತೆ ಒಂದೇ ಸಂವಿಧಾನ ಅನ್ವಯವಾಗಲಿದೆ.

Pakistan Ministry of Foreign Affairs Statement On Article 370

ಕಣಿವೆ ರಾಜ್ಯದಲ್ಲಿ ಈ ನಿರ್ಣಯ ಹಿಂಸಾಚಾರವನ್ನು ಹುಟ್ಟುಹಾಕುವ ಸಾಧ್ಯತೆ ಇರುವುದರಿಂದ ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಸೇನೆಯನ್ನು ಜಮಾವಣೆ ಮಾಡಲಾಗಿದೆ. ಮೊಬೈಲ್, ಇಂಟರ್ನೆಟ್ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+