ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದಲ್ಲಿ ಬಹುಮತ ಕಳೆದುಕೊಂಡ ಇಮ್ರಾನ್ ಖಾನ್: ರಾಜೀನಾಮೆಗೆ ಒತ್ತಾಯ

|
Google Oneindia Kannada News

ಇಸ್ಲಮಾಬಾದ್, ಮಾರ್ಚ್ 30: ಪಾಕಿಸ್ತಾನ ಸಂಸತ್ತಿನಲ್ಲಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದಲ್ಲಿ ಆಡಳಿತಾರೂಢ ಒಕ್ಕೂಟವೂ ಸೇರಿಕೊಂಡಿದ್ದು, ಸರ್ಕಾರವು ಬಹುಮತ ಕಳೆದುಕೊಂಡಿದೆ.

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ದೇಶವನ್ನುದ್ದೇಶಿಸಿ ಮಾಡಬೇಕಿದ್ದದ ಭಾಷಣವನ್ನು ರದ್ದುಗೊಳಿಸಿದ್ದಾರೆ. ಮೂಲಗಳ ಪ್ರಕಾರ ನೇರವಾಗಿ ರಾಜೀನಾಮೆ ಸಲ್ಲಿಸಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾದ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್-ಪಾಕಿಸ್ತಾನ್ (MQM-P), ಅದರ ಏಳು ಸದಸ್ಯರೊಂದಿಗೆ ವಿರೋಧ ಪಕ್ಷಗಳ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರದಿಂದ ಬೇರ್ಪಟ್ಟಿರುವುದಾಗಿ ಘೋಷಿಸಿತು.

ಪಕ್ಷದ ಸಂಸದರಿಗೆ 2 ಆಯ್ಕೆ ಕೊಟ್ಟ ಪ್ರಧಾನಿ ಇಮ್ರಾನ್ ಖಾನ್ಪಕ್ಷದ ಸಂಸದರಿಗೆ 2 ಆಯ್ಕೆ ಕೊಟ್ಟ ಪ್ರಧಾನಿ ಇಮ್ರಾನ್ ಖಾನ್

ಪ್ರಧಾನಮಂತ್ರಿ ಇಮ್ರಾನ್ ಖಾನ್ ರಾಜೀನಾಮೆ ನಂತರದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ದೇಶದ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಘೋಷಿಸಲಾಯಿತು.

Pakistan: PM Imran Khan Address to Nation Cancelled; Resignation May Come Directly Now

ಪ್ರತಿಪಕ್ಷಗಳ ವಿರುದ್ಧ ಇಮ್ರಾನ್ ಖಾನ್ ಆರೋಪ:

ಹಿರಿಯ ಪತ್ರಕರ್ತರು ಮತ್ತು ಕ್ಯಾಬಿನೆಟ್ ಸದಸ್ಯರೊಂದಿಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ "ವಿದೇಶಿ ಪಿತೂರಿ ಪತ್ರ" ಎಂದು ಕರೆಯುವ ಕೆಲವು ವಿವರಗಳನ್ನು ಹಂಚಿಕೊಂಡಿದ್ದಾರೆ, ಈ ದಾಖಲೆಯು ಅಧಿಕೃತವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕಳೆದ ಮಾರ್ಚ್ 27ರಂದು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸುವುದಕ್ಕೆ ವಿದೇಶಿ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವುದರ ಹಿಂದೆ ವಿದೇಶಿ ಹಣ ಕೆಲಸ ಮಾಡುತ್ತಿದೆ ಎಂದು ಇಮ್ರಾನ್ ಖಾನ್ ದೂಷಿಸಿದ್ದರು. ಆದರೆ ವಿರೋಧ ಪಕ್ಷದ ನಾಯಕರು ಪತ್ರದ ವಿವರಗಳನ್ನು ಬಹಿರಂಗಪಡಿಸಲು ಒತ್ತಾಯಿಸಿದ್ದರು. ಇಮ್ರಾನ್ ಖಾನ್ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ ಎಂದು ಖಂಡಿಸಿದರು.

Pakistan: PM Imran Khan Address to Nation Cancelled; Resignation May Come Directly Now

ಬಹುಮತ ಕಳೆದುಕೊಂಡ ಇಮ್ರಾನ್ ಖಾನ್:

ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ನಡೆಸುತ್ತಿರುವ ಪ್ರಯತ್ನವನ್ನು ವಿಫಲಗೊಳಿಸಲು 342ರ ಕೆಳಮನೆಯಲ್ಲಿ 172 ಮತಗಳ ಅಗತ್ಯವಿದೆ. ಆದರೆ, ವಿರೋಧ ಪಕ್ಷಕ್ಕೆ 175 ಶಾಸಕರ ಬೆಂಬಲವಿದ್ದು, ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಜಮಿಯತ್ ಉಲೇಮಾ-ಇ-ಇಸ್ಲಾಮಾ ಫಝಲ್ (ಜೆಯುಐ-ಎಫ್) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ರಾಜೀನಾಮೆಗೆ ಹೆಚ್ಚಿದ ಒತ್ತಾಯ:

"ದೇಶದಲ್ಲಿ ಸಹಿಷ್ಣುತೆ ಮತ್ತು ಪ್ರಜಾಪ್ರಭುತ್ವದ ರಾಜಕೀಯಕ್ಕಾಗಿ ನಾವು ಹೊಸ ಆರಂಭಕ್ಕೆ ಬಯಸುತ್ತಿದ್ದೇವೆ" ಎಂದು MQM-P ಮುಖ್ಯಸ್ಥ ಖಾಲಿದ್ ಮಕ್ಬೂಲ್ ಸಿದ್ದಿಕಿ ತಿಳಿಸಿದರು. "ನಾನು ಸಂಸತ್ತಿನಲ್ಲಿ ಪ್ರತಿಪಕ್ಷಗಳನ್ನು ಬೆಂಬಲಿಸುವುದಾಗಿ ಘೋಷಿಸುತ್ತೇನೆ." ಪಾಕಿಸ್ತಾನ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿರುವುದರಿಂದ ಇದು ಮಹತ್ವದ ದಿನವಾಗಿದೆ ಎಂದು ಷರೀಫ್ ಹೇಳಿದರು. "ಪ್ರಧಾನಿ, ಅವರು ಆಯ್ಕೆಯಾದವರಾಗಿದ್ದರೂ, ಹೊಸ ಸಂಪ್ರದಾಯವನ್ನು ಸ್ಥಾಪಿಸಲು ರಾಜೀನಾಮೆ ನೀಡಬೇಕು" ಎಂದು ಹೇಳಿದರು.

2018ರಲ್ಲಿ ಅಧಿಕಾರಕ್ಕೆ ಬಂದಿದ್ದ ಇಮ್ರಾನ್ ಖಾನ್:

ಕಳೆದ 2018ರಲ್ಲಿ ಇಮ್ರಾನ್ ಖಾನ್ "ನಯಾ ಪಾಕಿಸ್ತಾನ" ಭರವಸೆಯೊಂದಿಗೆ ಅಧಿಕಾರಕ್ಕೆ ಬಂದರು. ಆದರೆ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಆಡಳಿತ ನಿರ್ವಹಣೆಯಲ್ಲಿ ಅವರು ವಿಫಲವಾದರು. ಪ್ರತಿಪಕ್ಷಗಳು ಅವರ ಸರ್ಕಾರದ ವಿರುದ್ಧ ಸಿಡಿದೆದ್ದವು.

69 ವರ್ಷದ ಇಮ್ರಾನ್ ಖಾನ್ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದಾರೆ. 155 ಸದಸ್ಯರನ್ನು ಹೊಂದಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧಿಕಾರದಲ್ಲಿ ಉಳಿಯಲು ಕನಿಷ್ಠ 172 ಶಾಸಕರ ಅಗತ್ಯವಿದೆ. ಈ ಹಂತದಲ್ಲಿ ಯಾವುದೇ ಪಾಲುದಾರರು ಪಕ್ಷವನ್ನು ಬದಲಾಯಿಸಲು ನಿರ್ಧರಿಸಿದರೆ ಅವರನ್ನು ತೆಗೆದುಹಾಕಬಹುದು.

English summary
Pakistan: PM Imran Khan Address to Nation Cancelled; Resignation May Come Directly Now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X