ಪಾಕ್ ಪ್ರಧಾನಿಯಿಂದ ಭಾರತದ ಪ್ರಧಾನಿ ಮೋದಿಯವರಿಗೆ ಟಿವಿ ಚರ್ಚೆಗೆ ಆಫರ್
ಇಸ್ಲಾಮಾಬಾದ್ ಫೆಬ್ರವರಿ 22: ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟ್ಟರ್‌ನಲ್ಲಿ ನಿಂದನೀಯ ಮಾತುಗಳ ಸುರಿಮಳೆಗೈದಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಬಾರಿ ಟಿವಿ ಚರ್ಚೆಗೆ ಆಹ್ವಾನಿಸಿದ್ದಾರೆ. ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿವಿ ಮಾಧ್ಯಮದಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇಂದು ಹೇಳಿದ್ದಾರೆ.
ಸ್ವಾತಂತ್ರ್ಯದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಮೂರು ಯುದ್ಧಗಳು ನಡೆದಿವೆ. ಬಳಿಕ ಎರಡು ದೇಶಗಳ ನಡುವೆ ಯಾವಾಗಲೂ ಉದ್ವಿಗ್ನತೆ ಇದ್ದು ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದ ಪ್ರಧಾನಿಯನ್ನು ಚರ್ಚೆಗೆ ಆಹ್ವಾನಿಸಿದ್ದಾರೆ."ನರೇಂದ್ರ ಮೋದಿ ಅವರೊಂದಿಗೆ ಟಿವಿಯಲ್ಲಿ ಚರ್ಚೆ ನಡೆಸಲು ನಾನು ಇಷ್ಟಪಡುತ್ತೇನೆ. ಈ ಬಗ್ಗೆ ಚರ್ಚೆಯಾದರೆ ಭಾರತ ಉಪಖಂಡವು ಒಂದು ಶತಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನಕಾರಿಯಾಗುತ್ತದೆ" ಎಂದು ಇಮ್ರಾನ್ ಖಾನ್ ರಷ್ಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು. ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಈ ಮೂಲಕ ಪರಿಹರಿಸಲಾಗುವುದು ಎಂದಿದ್ದಾರೆ. ಇದುವರೆಗೆ ಇಮ್ರಾನ್ ಖಾನ್ ಅವರ ಈ ಆಹ್ವಾನದ ಬಗ್ಗೆ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಪ್ರಶ್ನೆಗೆ ಭಾರತೀಯ ವಿದೇಶಾಂಗ ಸಚಿವಾಲಯ ತಕ್ಷಣ ಪ್ರತಿಕ್ರಿಯಿಸಿಲ್ಲ.

ಭಯೋತ್ಪಾದನೆ ಕೊನೆಗೊಳಿಸಲು ಪಾಕಿಸ್ತಾನಕ್ಕೆ ಕರೆ
ಕಳೆದ ಕೆಲವು ವರ್ಷಗಳಿಂದ ಭಾರತವು ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ನಿಲ್ಲಿಸಿದೆ ಮತ್ತು "ಭಯೋತ್ಪಾದನೆಯೊಂದಿಗೆ ಮಾತುಕತೆ ಸಲ್ಲದು" ಎಂದು ಭಾರತ ಹೇಳುತ್ತಿದೆ. ಇದರೊಂದಿಗೆ, ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ ಭಯೋತ್ಪಾದಕ ಗುಂಪುಗಳು ಮತ್ತು ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತವು ಪಾಕಿಸ್ತಾನವನ್ನು ಕೇಳಿದೆ. ಈ ಪೈಕಿ ಹಲವು ಭಯೋತ್ಪಾದಕರನ್ನು ವಿಶ್ವಸಂಸ್ಥೆಯ ವಾಂಟೆಡ್ ಪಟ್ಟಿಯಲ್ಲಿ ಸೇರಿಸಲಾಗಿದೆ. ಏಕಕಾಲದಲ್ಲಿ, ಭಾರತವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಲು ಪಾಕಿಸ್ತಾನಕ್ಕೆ ಕರೆ ನೀಡುತ್ತದೆ. ಆದರೆ ಪಾಕಿಸ್ತಾನ ಮತ್ತು ಕಾಶ್ಮೀರದಲ್ಲಿ ಕಾನೂನುಬಾಹಿರವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಸ್ವತಂತ್ರವಾಗಿ ವಾಸಿಸುವ ಮತ್ತು ಕೆಲಸ ಮಾಡುವ ಜನರನ್ನು ಪಾಕಿಸ್ತಾನ ದೂಷಿಸುತ್ತದೆ.

ಭಾರತದ ವಿರುದ್ಧ ವಿಷ ಕಾರುವ ಪಾಕ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ರಷ್ಯಾದೊಂದಿಗೆ ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅವರು 33 ವರ್ಷಗಳ ನಂತರ ರಷ್ಯಾಕ್ಕೆ ಭೇಟಿ ನೀಡುತ್ತಿರುವ ಮೊದಲ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ರಷ್ಯಾದ ಸರ್ಕಾರಿ ಸುದ್ದಿ ವಾಹಿನಿಯೊಂದಿಗೆ ಮಾತನಾಡುವಾಗ, ಒಂದು ಕಡೆ ಇಮ್ರಾನ್ ಖಾನ್ ಅವರು ಟಿವಿ ಚರ್ಚೆಗೆ ಭಾರತದ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಇನ್ನೊಂದು ಕಡೆ ಅವರು ಭಾರತದ ವಿರುದ್ಧ ವಿಷವನ್ನು ಕಾರುವುದು ಕಂಡುಬಂದಿದೆ. ಭಾರತದ ಹಗೆತನದ ಧೋರಣೆಯಿಂದಾಗಿ ಉಭಯ ದೇಶಗಳ ನಡುವಿನ ವ್ಯಾಪಾರ ವಹಿವಾಟು ಕಡಿಮೆಯಾಗಿದೆ ಎಂದು ಇಮ್ರಾಮ್ ಖಾನ್ ಹೇಳಿದ್ದಾರೆ. ಎಲ್ಲಾ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿರುವುದು ತಮ್ಮ ಸರ್ಕಾರದ ನೀತಿಯಾಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಕಾಶ್ಮೀರ ವಿವಾದ
ಭಾರತದ ಬಗ್ಗೆ ಕೇಳಿದ ಪ್ರಶ್ನೆಯೊಂದರಲ್ಲಿ ಮಾತನಾಡಿದ ಇಮ್ರಾನ್ ಖಾನ್, ಕಾಶ್ಮೀರ ವಿವಾದವನ್ನು ಪರಿಹರಿಸಲು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಭಾರತವನ್ನು ಸಂಪರ್ಕಿಸಿದೆ ಎಂದು ಹೇಳಿದರು. ಆದರೆ, ನಾಜಿ ಪ್ರೇರಿತ ಸಿದ್ಧಾಂತಕ್ಕೆ ಭಾರತ ಒಡ್ಡಿಕೊಂಡಿದೆ ಎಂದು ವಿಷಾದಿಸಿದರು. ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕ್ ಪ್ರಧಾನಿ ವಿಷ ಉಗುಳಿರುವುದು ಇದೇ ಮೊದಲಲ್ಲ. ಇಮ್ರಾನ್ ಖಾನ್ ಆಗಾಗ್ಗೆ ಟ್ವಿಟ್ಟರ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಾರೆ. ಆದರೆ ಭಾರತದ ಪ್ರಧಾನಿ ಮೋದಿ ಅವರಿಗೆ ಯಾವುದೇ ಉತ್ತರವನ್ನು ನೀಡಿಲ್ಲ.

ಸರ್ಜಿಕಲ್ ಸ್ಟ್ರೈಕ್
ಪಠಾಣ್‌ಕೋಟ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಸೇನೆಯು ಗಡಿ ನಿಯಂತ್ರಣ ರೇಖೆಯಾದ್ಯಂತ ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಭಾರತೀಯ ವಾಯುಪಡೆಯು ಬಾಲಾಕೋಟ್‌ನಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಅದೇ ವೇಳೆ, ‘ಭಯೋತ್ಪಾದನೆ ಮುಕ್ತ ವಾತಾವರಣ'ದಲ್ಲಿ ಮಾತ್ರ ಮಾತುಕತೆ ನಡೆಯಲು ಸಾಧ್ಯ ಎಂದು ಭಾರತ ಪಾಕಿಸ್ತಾನಕ್ಕೆ ಪದೇ ಪದೇ ಹೇಳುತ್ತಿದೆ. ಮಾತುಕತೆಗೆ ಮುನ್ನ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಪುರಾವೆಗಳನ್ನು ತೋರಿಸುವಂತೆ ಇಸ್ಲಾಮಾಬಾದ್‌ಗೆ ಹೊಸದಿಲ್ಲಿ ಕೇಳಿಕೊಂಡಿದೆ.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications