• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

POK ಚುನಾವಣೆ: ಇಮ್ರಾನ್ ಖಾನ್ ನೇತೃತ್ವದ ಪಕ್ಷಕ್ಕೆ ಭರ್ಜರಿ ಗೆಲುವು

|
Google Oneindia Kannada News

ಇಸ್ಲಾಮಾಬಾದ್, ಜುಲೈ 26: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ.

ಅಧಿಕೃತ ಫಲಿತಾಂಶ ಬರುವ ಮುನ್ನವೇ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಸ್ಥಳೀಯ ಸುದ್ದಿವಾಹಿನಿಗಳು ವರದಿ ಮಾಡಿರುವಂತೆ, 'ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಿಟಿಐ ಪಕ್ಷವು 23 ಸ್ಥಾನಗಳನ್ನು ಗೆದ್ದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಈ ಒಂದು ವಿಚಾರಕ್ಕೆ ಚೀನಾವನ್ನು ಬೆಂಬಲಿಸುತ್ತೇನೆ ಎಂದ ಇಮ್ರಾನ್ ಖಾನ್ಈ ಒಂದು ವಿಚಾರಕ್ಕೆ ಚೀನಾವನ್ನು ಬೆಂಬಲಿಸುತ್ತೇನೆ ಎಂದ ಇಮ್ರಾನ್ ಖಾನ್

ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) 6 ಸ್ಥಾನಗಳಲ್ಲಿ ತನ್ನದಾಗಿಸಿಕೊಂಡಿದೆ. ಇದಲ್ಲದೆ ಮುಸ್ಲಿಂ ಕಾನ್ಫರೆನ್ಸ್ ‌(ಎಂಸಿ), ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್‌ ಪಾರ್ಟಿ(ಜೆಕೆಪಿಪಿ) ತಲಾ ಒಂದು ಸ್ಥಾನವನ್ನು ಗೆದ್ದಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಿಟಿಐಯು ಯಾವುದೇ ಪಕ್ಷದ ಬೆಂಬಲವಿಲ್ಲದೇ ಸರಳ ಬಹುಮತವನ್ನು ಗಳಿಸಿದೆ. ಇದೇ ಮೊದಲ ಬಾರಿ ಪಕ್ಷವು ಇಲ್ಲಿ ಸರ್ಕಾರ ರಚಿಸಲಿದೆ ಎಂದು ಹೇಳಲಾಗಿದೆ.

ಈ ಚುನಾವಣೆಯಲ್ಲಿ ವಂಚನೆ ನಡೆದಿದೆ. ಇದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಪಿಪಿಯು ಉಪಾಧ್ಯಕ್ಷೆ ಶೆರಿ ರೆಹಮಾನ್ ದೂರಿದ್ದಾರೆ. ಈ ಚುನಾವಣೆಯಲ್ಲಿ ವಂಚನೆ ನಡೆದಿದೆ.

ಇದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಪಿಪಿಪಿಯ ಉಪಾಧ್ಯಕ್ಷೆ ಶೆರಿ ರೆಹಮಾನ್‌ ದೂರಿದ್ದಾರೆ. ಮತದಾನದ ವೇಳೆ ಪಿಟಿಐ ಕಾರ್ಯಕರ್ತರು ಪಿಪಿಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಹಲವಾರು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿದ್ದವು ಎಂದು ಹೇಳಿದ್ದಾರೆ.

English summary
Prime Minister Imran Khan's Pakistan Tehreek-e-Insaf party is set to form the next government in Pakistan-occupied Kashmir (PoK) as it emerged as the largest political party in the legislative assembly elections in the region which was marred by allegations of irregularities and violence, local media reported, citing unofficial results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X