Breaking: ಪಾಕ್ ಮಾಜಿ ಪ್ರಧಾನಿ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲು

ಇಸ್ಲಾಮಾಬಾದ್, ಆಗಸ್ಟ್ 22: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನಿ ಪೊಲೀಸರು ಭಯೋತ್ಪಾದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಅವರು ಮತ್ತೆ ಪ್ರಧಾನಿ ಹುದ್ದೆಗೆ ಮರಳಲು ಕೋರಿ ಸಾಮೂಹಿಕ ರ‍್ಯಾಲಿಗಳನ್ನು ನಡೆಸುತ್ತಿರುವುದರಿಂದ ದೇಶದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗುತ್ತಿದೆ.

ಶನಿವಾರ ಇಸ್ಲಾಮಾಬಾದ್‌ನಲ್ಲಿ ಖಾನ್ ಅವರು ಪೊಲೀಸ್ ಅಧಿಕಾರಿಗಳು ಮತ್ತು ಮಹಿಳಾ ನ್ಯಾಯಾಧೀಶರ ವಿರುದ್ಧ ಮೊಕದ್ದಮೆ ಹೂಡುವುದಾಗಿ ಪ್ರತಿಜ್ಞೆ ಮಾಡಿದ ಭಾಷಣದ ಆಧಾರದಲ್ಲಿ ಅವರ ವಿರುದ್ಧ ಭಯೋತ್ಪಾದನೆಯ ಪ್ರಕರಣ ದಾಖಲಿಸಲಾಗಿದೆ.

Pakistan Police Filed Terrorism Charges Against Former PM Imran Khan

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿಯಯಾಗಿರುವ ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಸಂಭವನೀಯ ಬಂಧನವನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸಲು ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಒತ್ತಾಯಿಸಿದ್ದಾರೆ.

ಇಸ್ಲಾಮಾಬಾದ್ ಸದ್ದಾರ್ ಮ್ಯಾಜಿಸ್ಟ್ರೇಟ್ ಅಲಿ ಜಾವೇದ್ ಅವರು ರಾಜಧಾನಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂಬ ದೂರಿನ ಮೇರೆಗೆ ಭಯೋತ್ಪಾದನೆ ಪ್ರಕರಣದಲ್ಲಿ ದಾಖಲಾಗಿದೆ. ಎಫ್9 ಪಾರ್ಕ್‌ನಲ್ಲಿ ನಡೆದ ಪಕ್ಷದ ರ‍್ಯಾಲಿಯಲ್ಲಿ ಇಮ್ರಾನ್ ಖಾನ್ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಗೆ ಮರ್ಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

Pakistan Police Filed Terrorism Charges Against Former PM Imran Khan

ಪಿಟಿಐ ಪಕ್ಷದ ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಪಕ್ಷದ ಕಾರ್ಯಕರ್ತರು ಇಮ್ರಾನ್ ಖಾನ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಹೇಳಿದ್ದಾರೆ.

ಇತ್ತ, ಇಮ್ರಾನ್ ಖಾನ್ ಅವರ ಬನಿ ಗಾಲಾ ನಿವಾಸಕ್ಕೆ ಹೋಗುವ ಮಾರ್ಗಗಳನ್ನು ಪೊಲೀಸರು ನಿರ್ಬಂಧಿಸಿದ್ದಾರೆ.ಅನಧಿಕೃತ ವ್ಯಕ್ತಿಗಳು ಈ ಮಾರ್ಗಗಳ ಮೂಲಕ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಇಮ್ರಾನ್ ಖಾನ್ ಚೌಕ್‌ನ ಬೀದಿ ದೀಪಗಳನ್ನೂ ಆಫ್ ಮಾಡಲಾಗಿದೆ.

ಇಸ್ಲಾಮಾಬಾದ್‌ನಲ್ಲಿ ಭಾಷಣ ಮಾಡುವಾಗ ಇಸ್ಲಾಮಾಬಾದ್ ಪೊಲೀಸ್ ಅಧಿಕಾರಿ ಮತ್ತು ಮಹಿಳಾ ಮ್ಯಾಜಿಸ್ಟ್ರೇಟ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ಅವರ ನೇರ ಭಾಷಣಗಳ ಪ್ರಸಾರವನ್ನು ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ನಿಷೇಧಿಸಿದೆ.

Recommended Video

      ಅಕ್ಷರ್ ಪಟೇಲ್ ಹೀಗೆ ಇಶಾನ್ ಕಿಶನ್ ಮೇಲೆ ಸಿಡುಕಿದ್ದೇಕೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+