ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಜಿಕಲ್ ಸ್ಟ್ರೈಕ್ ಭಾರತ ಹೆಣೆದ ಕಾಲ್ಪನಿಕ ಕತೆ: ಪಾಕಿಸ್ತಾನ

|
Google Oneindia Kannada News

ಇಸ್ಲಾಮಾಬಾದ್, ಜೂನ್ 29: 'ಭಾರತ ಕಾಲ್ಪನಿಕ ಜಗತ್ತಿನಲ್ಲಿದೆ... ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಭಾರತವೇ ಹೆಣೆದ ಕಾಲ್ಪನಿಕ ಕತೆ' ಎಂದು ಪಾಕಿಸ್ತಾನ ಪ್ರತಿಕ್ರಿಯಿಸಿದೆ.

2016 ರ ಸೆಪ್ಟೆಂಬರ್ ನಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ನ ವಿಡಿಯೋವನ್ನು ಭಾರತೀಯ ಮಾಧ್ಯಮಗಳು ನಿನ್ನೆ(ಜೂನ್ 29) ಬಿಡುಗಡೆ ಮಾಡಿದ್ದವು. ಈ ಕುರಿತು ಪ್ರತಿಕ್ರಿಯೆ ನೀಡಿದ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮೊಹಮ್ಮದ್ ಫೈಸಾಲ್ , 'ನಾನು ಈ ಮೊದಲೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಸರ್ಜಿಕಲ್ ಸ್ಟ್ರೈಕ್ ಭಾರತದ ಒಂದು ಕಲ್ಪನೆಯಷ್ಟೆ, ಬೇರೇನೂ ಇಲ್ಲ' ಎಂದು ಅವರು ಹೇಳಿದ್ದಾರೆ.

ವೈಫಲ್ಯ ಮುಚ್ಚಿಡಲು ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆ: ಮಾಯಾವತಿ ಕಿಡಿವೈಫಲ್ಯ ಮುಚ್ಚಿಡಲು ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆ: ಮಾಯಾವತಿ ಕಿಡಿ

2016 ರ ಸೆಪ್ಟೆಂಬರ್ 29 ರಂದು ಪಾಕಿಸ್ತಾನದ ಗಡಿಯೊಳಗೆ ತೆರಳಿ ಭಾರತೀಯ ಸೇನೆ ಉಗ್ರ ನೆಲೆಯನ್ನು ಧ್ವಂಸಗೊಳಿಸಿತ್ತು. ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭಯೋತ್ಪಾದಕ ಶಿಬಿರಗಳ ಮೇಳೆ ನಡೆದ ಉಗ್ರರ ದಾಳಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಈ ಕೃತ್ಯದ ನಂತರ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.

Pakistan rejects surgical strike video released by India

ಆದರೆ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ಸುಳ್ಳು, ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಧಾನಿ ಮೋದಿ ಸರ್ಕಾರ ಲಾಭ ಪಡೆಯಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ದೂರಿದ್ದವು. ಇದಕ್ಕೆ ಪ್ರತಿಯಾಗಿ ಕೆಲವು ಮಾಧ್ಯಮಗಳಲ್ಲಿ ನಿನ್ನೆ ಸರ್ಜಿಕಲ್ ಸ್ತ್ರೈಕ್ ನ ವಿಡಿಯೋ ಪ್ರಸಾರವಾಗಿತ್ತು.

English summary
Pakistan rejected purported video clips circulated in the Indian media about the Indian Army’s 2016 surgical strikes on terror launch pads across the border. And Pakistan told that, video is fake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X