ಪಾಕ್ ಬಲೆಯಲ್ಲಿ ಸಿಲುಕಿದ್ದ ಭಾರತೀಯ ಮೀನುಗಾರರು ಮನೆಗೆ
ಇಸ್ಲಾಮಾಬಾದ್, ಜೂ, 19 : ಹಳಸಿಹೋಗಿರುವ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಇಟ್ಟಿರುವ ಪಾಕಿಸ್ತಾನ, ಶುಕ್ರವಾರದಿಂದ ಆರಂಭವಾಗಿರುವ ರಂಜಾನ್ ಸಂದರ್ಭದಲ್ಲಿ ಬಂಧನದಲ್ಲಿದ್ದ 113 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದೆ.
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕಿಂತ ಮೊದಲೇ, ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಿ ಬಂಧಿತರಾಗಿದ್ದ ಪಾಕಿಸ್ತಾನದ ಮೀನುಗಾರರನ್ನು ಬಿಡುಗಡೆ ಮಾಡುವ ಸದ್ಭಾವನೆ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರೂ ಭಾರತದ ಮೀನುಗಾರರನ್ನು ಬಿಡುಗಡೆ ಮಾಡಲಿದ್ದಾರೆ.

ಭಾರತೀಯ ಮೀನುಗಾರರು 9 ತಿಂಗಳುಗಳ ಕಾಲ ಕರಾಚಿಯ ಮಲೀರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಇದೀಗ ಬಿಡುಗಡೆಗೊಂಡು ಲಾಹೋರ್ ಮಾರ್ಗವಾಗಿ ಮೀನುಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ದುನಿಯಾ ನ್ಯೂಸ್ ವರದಿ ಸಲ್ಲಿಸಿದೆ.
ಭಾರತದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಯವರು ಪಾಕಿಸ್ತಾನ ಮೀನುಗಾರರನ್ನು ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಪವಿತ್ರ ತಿಂಗಳು ಅವರು ತಮ್ಮ ಕುಟುಂಬದವರೊಂದಿಗೆ ಕಳೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ಎರಡು ರಾಷ್ಟ್ರಗಳ ಮೀನುಗಾರರನ್ನು ಸೆರೆಯಿಂದ ಮುಕ್ತಗೊಳಿಸಿ ಉತ್ತಮ ಬಾಂಧವ್ಯ ವೃದ್ಧಿಗೆ ಎಡೆಮಾಡಿಕೊಟ್ಟಿದ್ದಾರೆ.












Click it and Unblock the Notifications