Pervez Musharraf death: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (79) ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಜನರಲ್ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ.

ಇಸ್ಲಮಾಬಾದ್, ಫೆಬ್ರವರಿ. 05: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 79 ವರ್ಷದ ಅವರು ದುಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಮಿಲೋಡೋಸಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮಿಲಿಟರಿ ಆಡಳಿತಗಾರ ಪರ್ವೇಜ್ ಮುಷರಫ್ ದುಬೈನ ಅಮೇರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಜೂನ್ 10 ರಂದು ಟ್ವಿಟರ್‌ನಲ್ಲಿ ಹೇಳಿಕೆ ನೀಡಿದ್ದ ಅವರ ಕುಟುಂಬವು, ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರ ಚೇತರಿಕೆ ಸಾಧ್ಯವಿಲ್ಲ. ಅವರ ಅಂಗಗಳು ಕಾರ್ಯನಿರ್ವಹಿಸಲು ಅಸಮರ್ಪಕವಾಗಿವೆ ಎಂದು ಹೇಳಿತ್ತು.

Pakistans former President Pervez Musharraf passes away

"ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಕಾರ್ಯನಿರ್ವಹಿಸದ ಹಂತದಲ್ಲಿದ್ದಾರೆ. ಅವರ ನೆಮ್ಮದಿಗಾಗಿ ಪ್ರಾರ್ಥಿಸಿ" ಎಂದು ಮನವಿ ಮಾಡಿತ್ತು.

ಪರ್ವೇಜ್ ಮುಷರಫ್ ಅವರು ಆಗಸ್ಟ್ 11, 1943 ರಂದು ದೆಹಲಿಯಲ್ಲಿ ಜನಿಸಿದರು. ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿ, ಲಾಹೋರ್‌ನ ಫಾರ್ಮನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ಉನ್ನತ ಶಿಕ್ಷಣವನ್ನು ಪಡೆದರು.

ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, 1999 ರಲ್ಲಿ ಯಶಸ್ವಿ ಮಿಲಿಟರಿ ದಂಗೆಯ ನಂತರ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು 1998 ರಿಂದ 2001 ರವರೆಗೆ ಪಾಕಿಸ್ತಾನದ ಜಂಟಿ ಮುಖ್ಯಸ್ಥರ ಸಮಿತಿಯ (ಸಿಜೆಸಿಎಸ್‌ಸಿ) 10 ನೇ ಅಧ್ಯಕ್ಷರಾಗಿ ಮತ್ತು 1998 ರಿಂದ 2007 ರವರೆಗೆ 7 ನೇ ಉನ್ನತ ಜನರಲ್ ಆಗಿ ಸೇವೆ ಸಲ್ಲಿಸಿದರು.

2007 ರಲ್ಲಿ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಹತ್ಯೆಯ ಆರೋಪಗಳನ್ನು ಎದುರಿಸುತ್ತಿದ್ದ ಪರ್ವೇಜ್ ಮುಷರಫ್ ಕಳೆದ ಎಂಟು ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿದ್ದರು. ಈ ಹಿಂದೆ ತನ್ನ ಉಳಿದ ಜೀವನವನ್ನು ತನ್ನ ತಾಯ್ನಾಡಿನಲ್ಲಿ ಕಳೆಯುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಸಾಧ್ಯವಾದಷ್ಟು ಬೇಗ ಪಾಕಿಸ್ತಾನಕ್ಕೆ ಮರಳಲು ಬಯಸುವುದಾಗಿ ತಿಳಿಸಿದ್ದರು.

ಇನ್ನು, ಅವರ ಮೃತ ದೇಹವನ್ನು ಪಾಕಿಸ್ತಾನಕ್ಕೆ ಹಿಂತಿರುಗಿಸುವ ಬಗ್ಗೆ ಯಾವುದೇ ಅಧಿಕೃತ ಸಂವಹನವಾಗಿಲ್ಲ. ಆದರೂ ಅವರ ಕುಟುಂಬವು ಕಳೆದ ವರ್ಷದಿಂದ ಅವರನ್ನು ತಮ್ಮ ಮನೆಗೆ ಕರೆತರಲು ಪ್ರಯತ್ನ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+