• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನದಲ್ಲಿ ಮಹಿಳಾ ರಾಜಕಾರಣಿ ಕೊರೊನಾ ವೈರಸ್‌ನಿಂದ ಸಾವು

|

ಇಸ್ಲಾಮಾಬಾದ್, ಮೇ 20: ಪಾಕಿಸ್ತಾನದಲ್ಲಿ ಮಹಿಳಾ ರಾಜಕಾರಣಿಯೊಬ್ಬರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ಪಾಕಿಸ್ತಾನದ ಆಡಳಿತಾರೂಢ ತಹ್ರೀಕ್‌ ಇ-ಇನ್ಸಾಫ್ (ಪಿಟಿಐ) ಪಕ್ಷದ ಮಹಿಳಾ ರಾಜಕಾರಣಿಯೊಬ್ಬರು ಬುಧವಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ: 5 ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಕೇಸ್ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ: 5 ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಕೇಸ್

ಪಂಜಾಬ್ ಅಸೆಂಬ್ಲಿ ಸದಸ್ಯರೂ ಆಗಿರುವ ರಝಾ ಕೆಲವು ಸಮಯದಿಂದ ಸಂಪರ್ಕತಡೆ ಕೇಂದ್ರಗಳನ್ನು ಪರಿಶೀಲಿಸುತ್ತಿದ್ದರು. ಅವರು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ರೋಗಿಯೂ ಆಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಲಾಹೋರ್‌ನ ಮಯೊ ಆಸ್ಪತ್ರೆಯಲ್ಲಿ ಸೋಮವಾರದಿಂದ ವೆಂಟಿಲೇಟರ್‌ನಲ್ಲಿದ್ದ ಶಹೀನ್ ರಝಾ (60) ನಿಧನರಾಗಿದ್ದಾರೆ. ಗುಜ್ರಾನ್‌ ವಾಲಾ ಕ್ಷೇತ್ರದ ಶಾಸಕರಾಗಿರುವ ಅವರಿಗೆ ಶನಿವಾರ ಕೊವಿಡ್‌-19 ಲಕ್ಷ್ಮಣಗಳು ಕಂಡುಬಂದಿತ್ತು. ಬಳಿಕ ಅವರನ್ನು ಕ್ವಾರಂಟೈನ್‌ ನಲ್ಲಿ ಇಡಲಾಗಿತ್ತು.

ನಂತರ ಅವರನ್ನು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ನಂತರ ಅವರನ್ನು ಐಸೋಲೇಷನ್ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

English summary
A Pakistani local legislator died on Wednesday after contracting COVID-19, hospital officials said, marking the first death of a political figure in the country from the disease at a time the country has lifted its countrywide lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X